ಬೆಂಗಳೂರು : 7ನೇ ತರಗತಿ ವಿದ್ಯಾರ್ಥಿ ಕೊಲೆ
ಬೆಂಗಳೂರು, ಫೆ. 11 : ಬೆಂಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಕೊಲೆ ಮಾಡಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಶವ ಪತ್ತೆಯಾಗಿದೆ. ಇಂದು ಬೆಳಗ್ಗೆ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬನ ಕೊಲೆಯಾಗಿತ್ತು.
ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ರೋಶನ್ ನಗರದಲ್ಲಿ ಗೌಸ್ (13) ಎಂಬ 7ನೇ ತರಗತಿ ವಿದ್ಯಾರ್ಥಿ ಶವ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ತಲೆಗೆ ಬಲವಾದ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿದೆ. ಡಿಜೆ ಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗ್ಗೆ ಶವ ಪತ್ತೆಯಾಗಿತ್ತು : ಬೆಂಗಳೂರಿನಲ್ಲಿ 8ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಜ್ಞಾನ ಭಾರತಿ ಆವರಣದಲ್ಲಿನ ಮೈದಾನದಲ್ಲಿ ವಿದ್ಯಾರ್ಥಿ ಶವ ಬುಧವಾರ ಮುಂಜಾನೆ ಪತ್ತೆಯಾಗಿತ್ತು. ಚಂದ್ರಾ ಲೇಔಟ್ ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು. [8ನೇ ತರಗತಿ ವಿದ್ಯಾರ್ಥಿ ಅಪಹರಣ, ಕೊಲೆ]












Click it and Unblock the Notifications