ಬೆಂಗಳೂರು : ಬಿಎಂಟಿಸಿ ಬಸ್ಸಿಗೆ ಕಾಲೇಜು ವಿದ್ಯಾರ್ಥಿನಿ ಬಲಿ
ಬೆಂಗಳೂರು, ಅಕ್ಟೋಬರ್ 19 : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಸೋಮವಾರ ಬೆಳಗ್ಗೆ 7.15ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಪೂರ್ಣಿಮಾ (17) ಎಂದು ಗುರುತಿಸಲಾಗಿದೆ. ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. [ಉದ್ಧಟತನದ ಚಾಲಕರ ಕಿವಿ ಹಿಂಡಲು ಮುಂದಾದ ಬಿಎಂಟಿಸಿ]

ಬಳೇಪೇಟೆಯಿಂದ ಮೆಜೆಸ್ಟಿಕ್‌ಗೆ ಆಟೋದಲ್ಲಿ ಬಂದ ಪೂರ್ಣಿಮಾ, ಬಸ್ಸುಗಳು ನಿಲ್ದಾಣ ಪ್ರವೇಶಿಸುವ ಸ್ಥಳದಿಂದ ಪ್ಲಾಟ್ ಫಾರ್ಮ್‌ಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬಂದ ಬಸ್ ಆಕೆಗೆ ಡಿಕ್ಕಿ ಹೊಡೆದಿದ್ದು, ತಲೆಯ ಮೇಲೆ ಚಕ್ರ ಹರಿದಿದೆ. ಇದರಿಂದಾಗಿ ಸ್ಥಳದಲ್ಲಿಯೇ ಅವರು ಮೃತಪಟ್ಟಿದ್ದಾರೆ. [ಕ್ಯಾಬ್, ಟ್ಯಾಕ್ಸಿ, ಮಿನಿ ಬಸ್ ವಿರುದ್ಧ ಬಿಎಂಟಿಸಿ ಸಮರ]
ಪೂರ್ಣಿಮಾಗೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾಗಿಯಾಗಿದ್ದಾನೆ. ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.













Click it and Unblock the Notifications