ಬೆಂಗಳೂರು ವಿವಿ ಆವರಣದ ಬಿಎಂಟಿಸಿ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
ಬೆಂಗಳೂರು, ಅಕ್ಟೋಬರ್ 23: ಬೆಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸರ್ಕಾರಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಶಿಲ್ಪಾ ಶ್ರೀ ಮೃತಪಟ್ಟಿದ್ದಾರೆ. 22 ವರ್ಷದ ವಿದ್ಯಾರ್ಥಿನಿ ಶಿಲ್ಪಾ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎರಡು ವಾರಗಳ ಹಿಂದೆ ಬಿಎಂಟಿಸಿ ಸಾರಿಗೆ ಬಸ್ ಹರಿದು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಅಕ್ಟೋಬರ್ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಸಾರಿಗೆ ಬಸ್ ಹರಿದು ಶಿಲ್ಪಾ ತೀವ್ರವಾಗಿ ಗಾಯಗೊಂಡಿದ್ದಳು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಸರ್ಕಾರದಿಂದ ಹೆಚ್ಚಿನ ಚಿಕಿತ್ಸೆಗೆ ನೆರವು ಸಿಕ್ಕರೂ, ಚಿಕಿತ್ಸೆ ಫಲಕಾರಿಯಾಗದೆ ಶಿಲ್ಪಾ ರವಿವಾರ ಮುಂಜಾನೆ 4:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು ಬಿಯು ಕ್ಯಾಂಪಸ್‌ನಲ್ಲಿ ಗಣಿತದಲ್ಲಿ ಎಂಎಸ್ಸಿ ಓದುತ್ತಿದ್ದ 22 ವರ್ಷದ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಭಾನುವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಸುಮಾರು ಎರಡು ವಾರಗಳ ಕಾಲ ಶಿಲ್ಪಾಶ್ರೀ ತನ್ನ ಜೀವಕ್ಕಾಗಿ ಹೋರಾಡುತ್ತಿದ್ದಳು ಮತ್ತು ಗಾಯಗಳ ತೀವ್ರತೆಯಿಂದಾಗಿ ವೈದ್ಯರು ಶಿಲ್ಪಾಶ್ರೀ ಅವಳನ್ನು ಕೋಮಾದಲ್ಲಿ ಇರಸಿದ್ದರು. ಮೂಲಗಳ ಪ್ರಕಾರ, ಭಾನುವಾರ ಬೆಳಗಿನ ಜಾವ 4:30ರ ಸುಮಾರಿಗೆ ಅವರು ನಿಧನರಾದರು. ಹೆಚ್ಚಿನ ತನಿಖೆಗಾಗಿ ಶಿಲ್ಪಾಶ್ರೀ ದೇಹವನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ
ಶಿಲ್ಪಾಶ್ರೀ ಬಸ್‌ನ ಮಧ್ಯದ ಬಾಗಿಲಿನಲ್ಲಿ ಬಸ್ ಏರಲು ಮುಂದಾಗಿದ್ದಾರೆ. ಈ ವೇಳೆ ಬಸ್ ಏಕಾಏಕಿ ಮುಂದೆ ಚಲಿಸಿದ್ದರಿಂದ ಶಿಲ್ಪಾಶ್ರೀ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ನ ಎಡಭಾಗದ ಹಿಂಬದಿ ಚಕ್ರ ಶಿಲ್ಪಾಶ್ರೀಯ ಸೊಂಟ, ಎಡ ತೊಡೆಯ ಮೇಲೆ ಉರುಳಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬನ್ನೇರುಘಟ್ಟದ ಫೋರ್ಟೀಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ದಾಖಲಿಸಿ ನೀಡಲಾಗುತ್ತಿತ್ತು. ಆದರೆ ಕಳೆದ 14 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿನಿ ಇಂದು ಚಿಕ್ಸಿತೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಂದು ಸೋಮವಾರ ಬೆಳಗ್ಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ 22 ವರ್ಷದ ಎಂಎಸ್‌ಸಿ ವಿದ್ಯಾರ್ಥಿನಿ ಬಿಎಂಟಿಸಿ ಬಸ್‌ನಿಂದ ಬಿದ್ದು ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ವಿದ್ಯಾರ್ಥಿಗಳ ಮೀಸಲಾದ ಸಾರ್ವಜನಿಕ ಸಾರಿಗೆಗೆ ಆಗ್ರಹ
ಅಪಘಾತವು ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವಾಯಿತು, ಕ್ಯಾಂಪಸ್ ಮೂಲಕ ಸಾರ್ವಜನಿಕ ವಾಹನಗಳನ್ನು ನಿಷೇಧಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಮೀಸಲಾದ ಸಾರ್ವಜನಿಕ ಸಾರಿಗೆಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಜ್ಞಾನಭಾರತಿ ಮತ್ತು ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವಿದ್ಯಾರ್ಥಿಗಳು ತಡೆದಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಅಪಘಾತವು ಬಿಯು ಕ್ಯಾಂಪಸ್‌ನಾದ್ಯಂತ ವ್ಯಾಪಕ ಪ್ರತಿಭಟನೆಯನ್ನು ಹುಟ್ಟುಹಾಕಿತು, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ಎಲ್ಲಾ ಸಾರ್ವಜನಿಕ ವಾಹನಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿ ಶಿಲ್ಪಾಶ್ರೀ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಯಕರ ಶೆಟ್ಟಿ ಎಸ್‌ಎಂ ಭೇಟಿ ಮಾಡಿದ್ದರು. ವಿಸಿ ವಿದ್ಯಾರ್ಥಿಯ ಕುಟುಂಬವನ್ನು ಭೇಟಿ ಮಾಡಿ, ಎಲ್ಲಾ ಹೆಚ್ಚುವರಿ ವೆಚ್ಚಗಳನ್ನು ವಿಶ್ವವಿದ್ಯಾಲಯದಿಂದ ಭರಿಸಲಾಗುವುದು ಎಂದು ಭರವಸೆ ನೀಡಿದ್ದರು. ಅವರು ಗುಣಮುಖರಾದ ನಂತರ ಅವರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಲಾಗುವುದು ಎಂದು ಹೇಳಿದರು. ಸದ್ಯ ಬಿಎಂಟಿಸಿ ವಿದ್ಯಾರ್ಥಿನಿಯ ಚಿಕಿತ್ಸೆಗಾಗಿ ಎಲ್ಲಾ ವೆಚ್ಚಗಳನ್ನು ಭರಿಸುತ್ತಿದೆ.












Click it and Unblock the Notifications