ಬೆಂಗಳೂರು : ಪೊಲೀಸರ ಮೇಲೆ ಗುಂಡಿನ ದಾಳಿ
ಬೆಂಗಳೂರು, ಏ.18 : ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪ ಮೇಲೆ 9 ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ವೀಕೆಂಡ್ ಪಾರ್ಟಿ ನಡೆಸುತ್ತಿದ್ದ ವಿದ್ಯಾರ್ಥಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಮಧ್ಯರಾತ್ರಿ ಈ ಗುಂಡಿನ ದಾಳಿ ನಡೆದಿದೆ. ವೀಕೆಂಡ್ ಪಾರ್ಟಿ ನಡೆಸುತ್ತಿದ್ದ ವಿದ್ಯಾರ್ಥಿಗಳು ರಾತ್ರಿ 1 ಗಂಟೆ ಸುಮಾರಿಗೆ ತಮ್ಮ ಗೆಳತಿಯರನ್ನು ಅಪಾರ್ಟ್‌ಮೆಂಟ್‌ಗೆ ಕರೆಸಿಕೊಂಡಿದ್ದರು.

ಕಾರಿನಲ್ಲಿ ಬಂದ ಗೆಳತಿಯರನ್ನು ಅಪಾರ್ಟ್‌ಮೆಂಟ್‌ಗೆ ಕಳಿಸಲು ಅಲ್ಲಿನ ಭದ್ರತಾ ಸಿಬ್ಬಂದಿ ನಿರಾಕರಿಸಿದರು. ಈ ಸಮಯದಲ್ಲಿ ಅವರೊಂದಿಗೆ ಜಗಳವಾಡಿದ ವಿದ್ಯಾರ್ಥಿಗಳು ಅವರನ್ನುವೊಳಗೆ ಕಳಿಸುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನ 3ನೇ ಮಹಡಿಯಲ್ಲಿದ್ದ ವಿದ್ಯಾರ್ಥಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನದಾಳಿಯಲ್ಲಿ ಯಾವ ಪೊಲೀಸ್ ಸಿಬ್ಬಂದಿಗೂ ಗಾಯವಾಗಿಲ್ಲ. ಘಟನೆ ನಂತರ ಮೂರನೇ ಮಹಡಿಗೆ ತೆರಳಿದ ಪೊಲೀಸರು ಅಲ್ಲಿ ಪಾರ್ಟಿ ಮಾಡುತ್ತಿದ್ದ 9 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಆಯುಷ್, ಕೃಷ್ಣ, ರಜತ್ ಸೇರಿದಂತೆ 9 ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿ ಯಾರು? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಯಾವ ಕಾಲೇಜಿನವರು ಎಂಬ ಮಾಹಿತಿ ತಿಳಿದುಬಂದಿಲ್ಲ.


Click it and Unblock the Notifications
