ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

|
Google Oneindia Kannada News

ಬೆಂಗಳೂರು, ಏಪ್ರಿಲ್ 22: ಎಂಜಿನಿಯರಿಂಗ್, ಡಿಪ್ಲೊಮೋ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Recommended Video

Lockdown ವಿಚಾರವಾಗಿ ಸ್ಪಷ್ಟನೆ ನೀಡಿದ Dr. Sudhakar | Oneindia Kannada

ಈ ಕುರಿತು ಗುರುವಾರ ಮಾತನಾಡಿರುವ ಅವರು, "ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್, ಡಿಪ್ಲೊಮೋ, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಬಾರದು. ಪರೀಕ್ಷೆ ಮುಗಿಯುವ ತನಕ ಅವರಿಗೆ ಊಟ ವಸತಿ ಸೇರಿದಂತೆ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು" ಎಂದು ಸೂಚಿಸಿದ್ದಾರೆ.

 ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ವ್ಯವಸ್ಥೆ ಹೇಗಿದೆ? ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ವ್ಯವಸ್ಥೆ ಹೇಗಿದೆ?

ಹಾಸ್ಟೆಲ್‌ಗಳಲ್ಲಿ ಕೊರೊನಾ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

Students Who Are Writing Exams Cannot Be Expelled From Hostels Says DCM Ashwath Narayan

ಕೊರೊನಾ ಹರಡುವಿಕೆ ತಡೆಯಲು ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಂತೆ ಲಾಕ್‌ಡೌನ್ ಭಯದಿಂದ ವಿದ್ಯಾರ್ಥಿಗಳು ಊರುಗಳಿಗೆ ಮರಳುತ್ತಿದ್ದಾರೆ. ಇನ್ನೂ ಕೆಲವೆಡೆ ಕೊರೊನಾ ಭಯದಿಂದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹೇಳಿಕೆ ನೀಡಿದ್ದಾರೆ.

English summary
Students who are writing exams cannot be expelled from hostel orders DCM Ashwath Narayan,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X