ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2 ದಿನಕ್ಕಿಂತ ಹೆಚ್ಚು ಕಾಲ ಕೊರೊನಾ ಸೋಂಕಿನ ಲಕ್ಷಣಗಳಿರುವ ಮಕ್ಕಳಿಗೆ ಪರೀಕ್ಷೆ ಮಾಡಿಸಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16: ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ನಗರದ ಎಲ್ಲಾ ಶಾಲೆಗಳಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಅವರು ಸೂಚನೆ ನೀಡಿದ್ದಾರೆ. ಕೊರೊನಾವನ್ನು ನಿಯಂತ್ರಿಸಬೇಕು ಎಂದರೆ ಎರಡು ದಿನಗಳಿಗಿಂತ ಹೆಚ್ಚು ಕಾಲ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲೇಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ದುಪ್ಪಟ್ಟು ಏರಿಕೆಬೆಂಗಳೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ದುಪ್ಪಟ್ಟು ಏರಿಕೆ

ಮಕ್ಕಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಕ್ಕಳ ತಜ್ಞರ ಸಮಿತಿ ಸದಸ್ಯರು ಮತ್ತು ತಾಂತ್ರಿಕ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿದ ಬಳಿಕ ಗೌರವ್ ಗುಪ್ತಾ ಈ ಕುರಿತು ಮಾತನಾಡಿದ್ದಾರೆ.

Students Who Have Covid-Like Symptoms For More Than Two Days Will Have To Undergo Tests

ಮಕ್ಕಳಿಗೆ ಕೋವಿಡ್ ಪರೀಕ್ಷೆ ನಡೆಸುವ ಕುರಿತು, ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ, ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಮಕ್ಕಳಿಗೆ ಇದುವರೆಗೂ ಲಸಿಕೆ ನೀಡಿಲ್ಲ.ಆದರೆ, ನೀಡುವ ಕುರಿತು ರಾಜ್ಯ ಸರ್ಕಾರ, ಆರೋಗ್ಯ ತಜ್ಞರು ಚರ್ಚೆ ನಡೆಸುತ್ತಿದ್ದಾರೆ. ಹೀಗಾಗಿ, ಲಸಿಕೆ ತಲುಪುವವರೆಗೂ ಪೋಷಕರು ತಪ್ಪದೆ, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು.ಇಲ್ಲದಿದ್ದರೆ, ಗಂಭೀರ ಪರಿಸ್ಥಿತಿ ಎದುರಿಸ ಬೇಕಾಗುತ್ತದೆ ಎಂದು ಹೇಳಿದರು.

ಮಕ್ಕಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಳೆದ ವರ್ಷವೂ ಕಂಡು ಬಂದಿದೆ. ಈ ಬಾರಿಯೂ ಅಷ್ಟೇ ಪ್ರಮಾಣದಲ್ಲಿ ಕಂಡು ಬರುವ ಸಾಧ್ಯತೆ ಇದೆ ಎಂದ ಅವರು ಎಲ್ಲ ವಯಸ್ಸಿನವರಲ್ಲಿ ಕೋವಿಡ್ ಸೋಂಕು ಕಡಿಮೆ ಆಗಬೇಕು ಎನ್ನುವ ಉದ್ದೇಶದಿಂದ ಬಿಬಿಎಂಪಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ಈವರೆಗೆ ಎರಡು ದಿನಗಳಿಗಿಂತ ಹೆಚ್ಚು ದಿನಗಳ ಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದು, ಆಸ್ಪತ್ರೆಗೆ ದಾಖಲಾದ ಮಕ್ಕಳಿಗೆ ಆರ್‌ಟಿಪಿಸಿಆರ್ ಮಾಡಲಾಗುತ್ತಿತ್ತು.

ಹೆಚ್ಚಿನವರು ಕೋವಿಡ್ ನೆಗೆಟಿವ್ ಆಗಿರುವುದು ಕಂಡುಬಂದಿದೆ. ಬಿಬಿಎಂಪಿ ಎಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಕೊರೊನಾ ಪರೀಕ್ಷೆ ನಡೆಸುವ ಬಗ್ಗೆ ಮಾರ್ಗಸೂಚಿಯನ್ನು ನೀಡಲಿದೆ.

ಸೋಂಕು ಲಕ್ಷಣವಿರುವ ಮಕ್ಕಳ ಮಾಹಿತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿದರೆ ಅಂತಹ ಮಕ್ಕಳ ಮನೆಗೆ ವೈದ್ಯಾಧಿಕಾರಿ ತಂಡವು ತೆರಳಿ ಪರೀಕ್ಷೆ ಮಾಡಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ.

ಕೊರೊನಾಗೆ 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,537ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 462 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,42,332ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 970 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,10,626ಕ್ಕೆ ಏರಿಕೆಯಾಗಿದೆ. ಇನ್ನು15,892 ಸಕ್ರಿಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,70,306ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1116 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.65ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.ಮಕ್ಕಳಲ್ಲಿ ರೆಮ್ಡೆಸಿವಿರ್ ಬಳಕೆ ಮಾಡುವಂತಿಲ್ಲ ಹಾಗೂ ಎಚ್‌ಆರ್‌ಸಿಟಿ ಇಮೇಜಿಂಗ್‌ನ ತರ್ಕಬದ್ಧ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.

ಮಕ್ಕಳಲ್ಲಿ ಸ್ಟೆರಾಯ್ಡ್ ಬಳಕೆ ಮಾಡುವಂತಿಲ್ಲ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಎಚ್‌ಎಸ್) ಮಾರ್ಗಸೂಚಿ ಹೊರಡಿಸಿದ್ದು, ಇದರ ಪ್ರಕಾರ ಮಕ್ಕಳಲ್ಲಿ ಸೌಮ್ಯ ಲಕ್ಷಣಗಳಿರುವ ಹಾಗೂ ಲಕ್ಷಣರಹಿತ ಸೋಂಕಿನ ಪ್ರಕರಣದಲ್ಲಿ ಸ್ಟೆರಾಯ್ಡ್‌ಗಳ ಬಳಕೆ ಹಾನಿಕಾರಕವಾಗಬಹುದು ಎಂದು ತಿಳಿಸಿದೆ.

ಗಂಭೀರ ಪ್ರಕರಣಗಳಲ್ಲಿ ಮಾತ್ರ, ಆಸ್ಪತ್ರೆಗೆ ಸೇರಿದ ಮಕ್ಕಳಿಗೆ ಸ್ಟೆರಾಯ್ಡ್‌ ಬಳಸಬಹುದು ಎಂದು ತಿಳಿಸಿದೆ. ಸ್ಟೆರಾಯ್ಡ್‌ಗಳನ್ನು ಸೂಕ್ತ ಸಮಯದಲ್ಲಿ, ಸೂಕ್ತ ಪ್ರಮಾಣದಲ್ಲಿ ನೀಡಬೇಕು ಎಂದು ಹೇಳಿದೆ.

ಆರೋಗ್ಯ ಸೇವೆಗಳ ನಿರ್ದೇಶನಾಲಯ ಮಾರ್ಗಸೂಚಿ ಪ್ರಕಾರ, 5 ವರ್ಷಕ್ಕಿಂತ ಕೆಳಗಿನ ಮಕ್ಕಳು ಮಾಸ್ಕ್ ಹಾಕಿಕೊಳ್ಳುವಂತಿಲ್ಲ. ಪೋಷಕರ ಮತ್ತು ವೈದ್ಯರ ನಿಗಾದಡಿ 6ರಿಂದ 11 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬಹುದು.

ಪೋಷಕರು ತಾವೇ ಮಕ್ಕಳಿಗೆ ಮಾತ್ರೆಗಳನ್ನು ನೀಡುವಂತಿಲ್ಲ ಎಂದು ಹೇಳಿದ್ದು, ಎಚ್ ಆರ್ ಸಿಟಿ ಸ್ಕ್ಯಾನ್ ಅನ್ನು ಮಕ್ಕಳಿಗೆ ಸುಖಾ ಸುಮ್ಮನೆ ಬಳಸಬೇಡಿ ಎಂದು ಹೇಳಿದ್ದು, ಅತಿ ಅಗತ್ಯವಿದ್ದರೆ ಮಾತ್ರ, ಗಂಭೀರ ಪ್ರಕರಣದಲ್ಲಿ ಎಚ್‌ಆರ್‌ಸಿಟಿ ಸ್ಕ್ಯಾನ್‌ ಬಳಸಬಹುದು. ಅದರಿಂದ ಪಡೆದ ಹೆಚ್ಚುವರಿ ಮಾಹಿತಿ ಆಧಾರದ ಮೇಲೆ ಚಿಕಿತ್ಸೆ ಕುರಿತು ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದೆ.

Recommended Video

RSS ಟೀಕಿಸೋ ಭರದಲ್ಲಿ ಮಹಾತ್ಮ‌ಗಾಂಧಿ ಮಾನ ಕಳೆದ ರಾಹುಲ್ ಗಾಂಧಿ | Oneindia Kannada

English summary
Students who have Covid-like symptoms for more than two days will have to undergo tests, Bruhat Bengaluru Mahanagara Palike (BBMP) Chief Commissioner Guarav Gupta said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X