ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2020ರೊಳಗೆ ವಿಮಾನ ನಿಲ್ದಾಣಕ್ಕೆ ಸಬ್ ಅರ್ಬನ್ ರೈಲು

|
Google Oneindia Kannada News

ಬೆಂಗಳೂರು, ನವೆಂಬರ್ 04 : 2020ರೊಳಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಬ್ ಅರ್ಬನ್ ರೈಲು ಸಂಪರ್ಕ ಕಲ್ಪಿಸಲಿದೆ. ಮತ್ತೊಂದು ಕಡೆಯಿಂದ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ ಸಂಪರ್ಕಿಸಲು ಕಾಮಗಾರಿ ನಡೆಯುತ್ತಿದೆ.

ಬೆಂಗಳೂರು ರೈಲ್ವೆ ವಿಭಾಗದ ಮ್ಯಾನೇಜರ್ ಅಶೋಕ್ ಕುಮಾರ್ ವರ್ಮಾ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "ಮೊದಲ ಹಂತದಲ್ಲಿ ಮೆಜೆಸ್ಟಿಕ್‌ನಿಂದ 2 ರೈಲುಗಳನ್ನು ವಿಮಾನ ನಿಲ್ದಾಣಕ್ಕೆ ಓಡಿಸಲಾಗುತ್ತದೆ" ಎಂದು ಹೇಳಿದ್ದಾರೆ.

ಸಬ್ ಅರ್ಬನ್ ರೈಲು ಯೋಜನೆ ಬದಲಾವಣೆ, 62 ನಿಲ್ದಾಣ ಸಬ್ ಅರ್ಬನ್ ರೈಲು ಯೋಜನೆ ಬದಲಾವಣೆ, 62 ನಿಲ್ದಾಣ

ವಿಮಾನ ನಿಲ್ದಾಣದ ಬಳಿಯ ಟ್ರಂಪೆಟ್ ಫ್ಲೈ ಓವರ್ ಸಮೀಪ ರೈಲ್ವೆ ನಿಲ್ದಾಣವನ್ನು ನಿರ್ಮಾಣ ಮಾಡಲಾಗುತ್ತಿದೆ. 2019ರ ಡಿಸೆಂಬರ್‌ವೊಳಗೆ ಇದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈ ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಬಸ್ ವ್ಯವಸ್ಥೆ ಮಾಡಲಾಗುತ್ತದೆ.

ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಹೊಸ ಸಂಸ್ಥೆ ಸ್ಥಾಪನೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಹೊಸ ಸಂಸ್ಥೆ ಸ್ಥಾಪನೆ

Sub Urban Rial To Connect KIAL Before 2020

ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ತಲುಪಲು ಸುಮಾರು 2 ಗಂಟೆ ಬೇಕಾಗುತ್ತದೆ. ಸಬ್ ಅರ್ಬನ್ ರೈಲು ಆರಂಭವಾದರೆ ಸಂಚಾರ ದಟ್ಟಣೆಯ ಸಮಸ್ಯೆ ಇಲ್ಲದೇ ಜನರು ಸುಲಭವಾಗಿ ವಿಮಾನ ನಿಲ್ದಾಣಕ್ಕೆ ತಲುಪಬಹುದಾಗಿದೆ.

ಅಂಬೇವಾಡಿ-ಧಾರವಾಡ ಪ್ರಯಾಣಿಕ ರೈಲು ವೇಳಾಪಟ್ಟಿ ಅಂಬೇವಾಡಿ-ಧಾರವಾಡ ಪ್ರಯಾಣಿಕ ರೈಲು ವೇಳಾಪಟ್ಟಿ

ಸಬ್ ಅರ್ಬನ್ ರೈಲಿನ ವೇಳಾಪಟ್ಟಿ ಅಂತಿಮಗೊಂಡರೆ ಕೆಐಎಎಲ್ ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ವಿಮಾಣ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಬಸ್ ಸೇವೆ ಆರಂಭಿಸಲಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ. ಸಿ. ಮೋಹನ್ ರೈಲ್ವೆ ಸಚಿವರನ್ನು ಭೇಟಿಯಾಗಿ ಸಬ್ ಅರ್ಬನ್ ರೈಲಿನ ಮಹತ್ವವನ್ನು ವಿವರಿಸಿದ್ದಾರೆ.

ಸೋಮವಾರ ರೈಲ್ವೆ ಇಲಾಖೆ ಅಧಿಕಾರಿಗಳು ಸಬ್ ಅರ್ಬನ್ ರೈಲು ಯೋಜನೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ಸಿಕ್ಕಿದರೆ ಕಾಮಗಾರಿ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

English summary
Kempegowda International Airport will get sub urban rail services before 2020. The services will start with two trains from Majestic, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X