ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಹೊಸ ಸಂಸ್ಥೆ ಸ್ಥಾಪನೆ

|
Google Oneindia Kannada News

ಬೆಂಗಳೂರು, ಜುಲೈ 02 : ಬೆಂಗಳೂರು ನಗರದಲ್ಲಿ ಸಬ್ ಅರ್ಬನ್ ರೈಲ್ವೆ ಯೋಜನೆ ಜಾರಿಗೊಳಿಸಲು ಪ್ರತ್ಯೇಕ ಸಂಸ್ಥೆ ಸ್ಥಾಪಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. 22,242 ಕೋಟಿ ವೆಚ್ಚದಲ್ಲಿ ಸಬ್ ಅರ್ಬನ್ ರೈಲ್ವೆ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತದೆ.

ಕರ್ನಾಟಕ ಸರ್ಕಾರ ಕರ್ನಾಟಕ ರೈಲ್ವೆ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ (ಕೆ-ರೈಡ್)ಗೆ ಪತ್ರ ಬರೆದಿದ್ದು, ಸಬ್ ಅರ್ಬನ್ ರೈಲು ಯೋಜನೆ ಜಾರಿಗೊಳಿಸಲು ಪ್ರತ್ಯೇಕ ಸಂಸ್ಥೆ ರಚನೆ ಮಾಡಲು ಒಪ್ಪಿಗೆ ಕೊಟ್ಟಿದೆ.

ಬೆಳಗಾವಿ-ಬೆಂಗಳೂರು ರೈಲು ಸಂಚಾರಕ್ಕೆ ಹಸಿರು ನಿಶಾನೆಬೆಳಗಾವಿ-ಬೆಂಗಳೂರು ರೈಲು ಸಂಚಾರಕ್ಕೆ ಹಸಿರು ನಿಶಾನೆ

ಸಬ್ ಅರ್ಬನ್ ರೈಲು ಯೋಜನೆಯನ್ನು ನಗರದಲ್ಲಿ ಜಾರಿಗೆ ತರಲು ಬೆಂಗಳೂರು ರೈಲು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ (ಬಿ-ರೈಡ್) ಎಂಬ ಸಂಸ್ಥೆಯನ್ನು ಸ್ಥಾಪನೆ ಮಾಡಿ, ನೋಂದಣಿ ಮಾಡಿಸಲಾಗುತ್ತದೆ. ಒಂದು ತಿಂಗಳಿನಲ್ಲಿ ಈ ಪ್ರಕ್ರಿಯೆ ಅಂತಿಮಗೊಳ್ಳಲಿದೆ.

ಐಆರ್ ಸಿಟಿಸಿ ವೆಬ್ ಸೇವೆಗೆ ಇನ್ನಷ್ಟು ಸೌಲಭ್ಯಗಳು ಸೇರ್ಪಡೆಐಆರ್ ಸಿಟಿಸಿ ವೆಬ್ ಸೇವೆಗೆ ಇನ್ನಷ್ಟು ಸೌಲಭ್ಯಗಳು ಸೇರ್ಪಡೆ

Suburban rail project in Bengaluru : Govr approves for set up SPV

ಬೆಂಗಳೂರು ನಗರದಲ್ಲಿ 161 ಕಿ.ಮೀ. ಸಬ್ ಅರ್ಬನ್ ರೈಲು ಯೋಜನೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಇದಕ್ಕೆ ಸುಮಾರು 22,242 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಯೋಜನೆ ಕುರಿತು ಡಿಪಿಆರ್ ಸಿದ್ಧಪಡಿಸಿ ಬಿ-ರೈಡ್ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಿದೆ.

ಬೆಂಗಳೂರು-ಮೈಸೂರು ನಡುವೆ ಇನ್ನೆರಡು ಮೆಮು ರೈಲು ಸಂಚಾರಬೆಂಗಳೂರು-ಮೈಸೂರು ನಡುವೆ ಇನ್ನೆರಡು ಮೆಮು ರೈಲು ಸಂಚಾರ

ಸಬ್ ಅರ್ಬನ್ ರೈಲ್ವೆಯ ಮಾರ್ಗವನ್ನು ಅಂತಿಮಗೊಳಿಸುವಾಗ ಮೆಟ್ರೋ ರೈಲಿನ ಮಾರ್ಗದ ಜೊತೆ ಸೇರಬಾರದು. ನಗರದ ಹೊರ ಭಾಗವನ್ನು ಸಂಪರ್ಕಿಸಲು ಸಹಾಯಕವಾಗುವಂತೆ ಮಾರ್ಗ ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಬಿ-ರೈಡ್ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಪ್ರತಿನಿಧಿಯಂತೆ ಕೆಲಸ ಮಾಡಲಿದ್ದು, ಸಬ್ ಅರ್ಬನ್ ರೈಲು ಯೋಜನೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ನೋಡಿಕೊಳ್ಳಲಿದೆ. ರಾಜ್ಯ ಸರ್ಕಾರ ಪ್ರಸ್ತಾವಿತ ಮಾರ್ಗದ ನಕ್ಷೆ ನೀಡಿದರೆ ಅದರ ಬಗ್ಗೆ ಅಧ್ಯಯನ ನಡೆಸಿ ಬಿ-ರೈಡ್ ಕೇಂದ್ರಕ್ಕೆ ಕಳಿಸಲಿದೆ.

English summary
Karnataka government approved to set up special purpose vehicle (SPV) for implementing suburban rail project in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X