Suchana Seth Case: ಮಗುವನ್ನೇ ಕೊಲೆ ಮಾಡಿರುವ ತಾಯಿ ತನ್ನ ಕಂಪನಿಯಲ್ಲಿ ಎಷ್ಟು ಮಂದಿಗೆ ಉದ್ಯೋಗ ನೀಡಿದ್ದರು ಗೊತ್ತಾ?
ಬೆಂಗಳೂರು, ಜನವರಿ, 10: ಸ್ಟಾರ್ಟ್‌ಅಪ್ ಕಂಪನಿಯೊಂದರ ಸಿಇಒ ಸುಚನಾ ಸೇಠ್ ಎಂಬುವವರು ತನ್ನ 4 ವರ್ಷದ ಹೆತ್ತ ಮಗುವನ್ನೇ ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಹೊತ್ತೋಯ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಮತ್ತೊಂದೆಡೆ ಹೆತ್ತ ಮಗುವನ್ನೇ ಕೊಂದಿರುವ ಈ ಸುಚನಾ ಅವರು ತಾವು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಎಷ್ಟು ಮಂದಿಗೆ ಉದ್ಯೋಗ ಕಲ್ಪಿಸಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
12 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸುಚನಾ ಸೇಠ್ ಅವರು ಕೋರಮಂಗಲದ ಕಂಪನಿಯೊಂದರಲ್ಲಿ ಡೇಟಾ ಉದ್ಯೋಗಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. 2020ರಲ್ಲಿ ರೆಸಿಡೆನ್ಸಿ ರಸ್ತೆಯ ಕಟ್ಟಡವೊಂದರಲ್ಲಿ ಮೈಂಡ್‌ಫುಲ್ ಎಐ ಲ್ಯಾಬ್ ಹೆಸರಿನ ಸ್ಟಾರ್ಟ್‌ಅಪ್ ಕಂಪನಿ ತೆರೆದಿದ್ದು, ಆ ಕಂಪನಿಯ ಸುಮಾರು 30 ಮಂದಿಗೆ ಉದ್ಯೋಗ ನೀಡಿದ್ದರು ಎಂದು ಮೂಲಗಳು ತಿಳಿಸಿವೆ ಅಂತಾ ಪ್ರಜಾವಾಣಿ ವರದಿ ಮಾಡಿದೆ.

ಇನ್ನು ಪ್ರಕರಣ ಸಂಬಂಧ ಗೋವಾ ಪೊಲೀಸರು ಯಾವುದೇ ಮಾಹಿತಿ ಕೇಳಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನು ಮಗುವನ್ನು ಕೊಂದ ಸಿಇಒ ಸುಚನಾ ಸೇಠ್ ಅವರನ್ನು ಗೋವಾ ಪೊಲೀಸರ ನಿರ್ದೇಶನದ ಮೇರೆಗೆ ಬಂಧನ ಮಾಡಲಾಗಿತ್ತು. ಒಟ್ಟಿನಲ್ಲಿ ಯಾವುದೇ ಪೋಷಕರು ತನ್ನ ಮಗುವನ್ನು ಸಾಯಿಸಲು ಮುಂದಾಗುವುದೇ ಇಲ್ಲ. ಆದರೆ ಈ ಪ್ರಕರಣದ ಹಿನ್ನೆಲೆ ಏನು, ಈ ತಾಯಿ ತನ್ನ ಹೆತ್ತ ಮಗುವನ್ನು ಕೊಲ್ಲಲು ಕಾರಣ ಏನು ಎನ್ನುವ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಹಿನ್ನೆಲೆ
ಗೋವಾದ ಹೋಟೆಲ್‌ವೊಂದರಲ್ಲಿ ತನ್ನ ಮಗುವನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಕೊಂಡೊಯ್ಯುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಸಿಇಓ ಸೂಚನಾ ಸೇಠ್ ಅವರನ್ನು ಐಮಂಗಲ ಪೊಲೀಸರು ವಶಕ್ಕೆ ಪಡೆದು, ಬಳಿಕ ಗೋವಾ ಪೊಲೀಸರಿಗೆ ಒಪ್ಪಿಸಿದ್ದರು.
ಮೃತ ಮಗುವನ್ನು ಚಿನ್ಮಯ್ ರಾಮಣನ್ ಸೇಠ್ (4) ಎಂದು ಗುರುತಿಸಲಾಗಿದೆ. ಸುಚಾನಾ ಸೇಠ್ ಗೋವಾದ ಹೋಟೆಲ್‌ನಲ್ಲಿ ನಾಲ್ಕು ವರ್ಷದ ಗಂಡು ಮಗುವನ್ನು ಹತ್ಯೆ ಮಾಡಿ, ಸೂಟ್ ಕೇಸ್‌ನಲ್ಲಿ ಮಗುವಿನ ಶವದೊಂದಿಗೆ ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸರು ಆಕೆಯನ್ನು ಬಂಧಿಸಿದ್ದರು.
ಆರೋಪಿಯು ಗೋವಾದಿಂದ ಟ್ಯಾಕ್ಸಿ ಮಾಡಿಕೊಂಡು ತೆರಳುತ್ತಿದ್ದಾಳು. ಈ ವೇಳೆ ಗೋವಾದಲ್ಲಿ ತಂಗಿದ್ದ ಹೋಟೆಲ್‌ನವರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಹೋಟೆಲ್ ರೂಮಿನಲ್ಲಿ ರಕ್ತದ ಕಲೆಗಳು ಪತ್ತೆ ಹಿನ್ನೆಲೆ ಅನುಮಾನ ಬಂದಿತ್ತು.
ರೂಮಿಗೆ ಕರೆದೊಯ್ದಿದ್ದ ಮಗು ವಾಪಸ್ ಹೋಗುವಾಗ ಇರಲಿಲ್ಲ. ಇದನ್ನು ಪ್ರಶ್ನಿಸಿದಾಗ ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಸುಳ್ಳು ಹೇಳಿದ್ದರು ಸುಚನಾ ಸೇಠ್.
ಬಳಿಕ ಗೋವಾ ಪೊಲೀಸ್‌ಗೆ ಮಾಹಿತಿ ಟ್ಯಾಕ್ಸಿ ಡ್ರೈವರ್ ಸಂಪರ್ಕ ಮಾಡಿ ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಡ್ರೈವರ್ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಟ್ಯಾಕ್ಸಿ ನಿಲ್ಲಿಸಿದ್ದಾನೆ. ಇದಾದ ನಂತರ ಚಾಲಕ ಆರೋಪಿಯನ್ನು ಐಮಂಗಲ ಪೊಲೀಸರಿಗೆ ಒಪ್ಪಿಸಿದ್ದರು.
ಕಾರ್‌ನ ಡಿಕ್ಕಿಯಲ್ಲಿದ್ದ ಸೂಟ್‌ಕೇಸ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವ ಮಾರ್ಚರಿಗೆ ಶಿಫ್ಟ್ ಮಾಡಿ ಆರೋಪಿ ಸುಚನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೋವಾ ಪೊಲೀಸರಿಗೆ ಆರೋಪಿ ಒಪ್ಪಿಸಲು ಐಮಂಗಲ ಪೊಲೀಸರು ಕಾದಿದ್ದಾರೆ. ಇದೀಗ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ಕೊಲ್ಕತ್ತಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಪಿಎಚ್‌ಡಿ ವಿದ್ಯಾಬ್ಯಾಸ ಮಾಡುತಿದ್ದಾಳೆ. ಈಕೆ ಗಂಡನೊಂದಿಗೆ ವಿವಾಹ ವಿಚ್ಛೇದನ ಪಡೆದುಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದಳು. ಈಕೆಯ ಪತಿ ಇಂಡೋನೇಷ್ಯಾದಲ್ಲಿ ಇದ್ದಾರಂತೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಯು ಗೋವಾ ಪ್ರವಾಸ ಕೈಗೊಂಡಾಗ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications