BREAKING: ಬೆಂಗಳೂರಿನ ಪ್ರತಿಷ್ಠಿತ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಿಢೀರ್ ಅಗ್ನಿ ಅವಘಡ
ಬೆಂಗಳೂರು, ಸೆಪ್ಟೆಂಬರ್, 19: ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಪ್ರತಿಷ್ಠಿತ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇಂದು (ಸೆಪ್ಟೆಂಬರ್ 19) ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಇಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆಸ್ಪತ್ರೆಯ ಎರಡನೇ ಅಂತಸ್ಥಿನಲ್ಲಿರುವ ಕಾರ್ಡಿಯಕ್ ಎಸಿ ವಾರ್ಡ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಬಳಿಕ ಇತರೆ ವಾರ್ಡ್‌ಗಳಿಗೆ ಬೆಂಕಿಯ ಜ್ವಾಲೆ ಹರಡಿಕೊಂಡಿದೆ ಎಂದು ತಿಳಿದುಬಂದಿದೆ.

ಬಳಿಕ ಸ್ಥಳಕ್ಕೆ ಆಗಮಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಿಂದಿಸುವ ಕಾರ್ಯದಲ್ಲಿ ಕಾರ್ಯನಿರತರಾಗುದ್ದಾರೆ. ಬೆಂಕಿ, ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆ ಒಳಗಿದ್ದ ರೋಗಿಗಳು, ಅವರ ಸಂಬಂಧಿಕರು, ಸಿಬ್ಬಂದಿಗಳು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ಜರಿಗಿದೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮನಿಸಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತವೇ ತಪ್ಪಿದಂತಾಗಿದೆ. ಯಾವುದೇ ರೋಗಿಗಳಿಗೆ ಸಮಸ್ಯೆಯಾಗಿಲ್ಲ. ಆದರೆ ಈ ಘಟನೆಗೆ ನಿಖರ ಕಾರಣ ಏನೆಂದು ಇನ್ನೂ ತಿಳಿದುಬರಬೇಕಿದೆ.











Click it and Unblock the Notifications