ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಏಕಾಏಕಿ ತಪಾಸಣೆ
ಬೆಂಗಳೂರು, ಜನವರಿ 24: ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಏಕಾಏಕಿ ತಪಾಸಣೆ ನಡೆಸಲಾಯಿತು.
ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಬೆಂಗಳೂರಿನಲ್ಲೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.
ನಗರದ ದೀಪಾಂಜಲಿ ನಗರದ ಮೆಟ್ರೋ ನಿಲ್ದಾಣದ ಬಳಿ ದಿಢೀರನೆ ಬಾಂಬ್ ತಪಾಸಣೆ ನಡೆಸಲಾಯಿತು. ಶ್ವಾನದಳ ಮೂಲಕ ಅನುಮಾನವಿರುವ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಇದರಿಂದ ಕೆಲ ಕಾಲ ಪ್ರಯಾಣಿಕರಲ್ಲಿ ಕೆಲಕಾಲ ಆತಂಕವನ್ನು ಸೃಷ್ಟಿ ಮಾಡಿತ್ತು.

ಮೆಟ್ರೋ ನಿಲ್ದಾಣ ಹಾಗೂ ಬೈಕ್ ಪಾರ್ಕಿಂಗ್ ಸ್ಥಳದಲ್ಲಿ ಐದು ಜನರ ಬಾಂಬ್ ತಂಡ ತಪಾಸಣೆ ನಡೆಸಿದೆ. ಮಂಗಳೂರು ಬಾಂಬ್ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಪರಿಶೀಲನೆ ತಪಾಸಣೆ ನಡೆಸುತ್ತಿದ್ದೇವೆ ಎಂದು ತಪಾಸಣಾ ತಂಡದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆದರೆ ಏಕಾಏಕಿ ಬಾಂಬ್ ತಪಾಸಣಾ ತಂಡ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಕ್ಕೆ ಮೆಟ್ರೋ ಅಧಿಕಾರಿಗಳು ಕೂಡ ಒಂದು ಕ್ಷಣ ಗಾಬರಿಗೊಂಡರು.












Click it and Unblock the Notifications