ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಕೋವಿಡ್ ಪ್ರಕರಣ ದಿಢೀರ್ ಹೆಚ್ಚಳ; ಬಿಬಿಎಂಪಿ ಅಲರ್ಟ್

|
Google Oneindia Kannada News

ಬೆಂಗಳೂರು, ಆಗಸ್ಟ್ 01; ಬೆಂಗಳೂರು ನಗರದಲ್ಲಿನ ಹೊಸ ಕೋವಿಡ್ ಪ್ರಕರಣಗಳ ಏರಿಳಿತ ಆತಂಕಕ್ಕೆ ಕಾರಣವಾಗಿದೆ. ಶನಿವಾರ 450 ಹೊಸ ಪ್ರಕರಣಗಳು ನಗರದಲ್ಲಿ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8529ಕ್ಕೆ ಏರಿಕೆಯಾಗಿದೆ. ನಗರದಲ್ಲಿ 11 ಜನರು ಮೃತಪಟ್ಟಿದ್ದಾರೆ.

ಪ್ರಸ್ತುತ ಬೆಂಗಳೂರು ನಗರದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1227339. ಇದುವರೆಗೂ ನಗರದಲ್ಲಿ 1202937 ಜನರು ಡಿಸ್ಚಾರ್ಜ್ ಆಗಿದ್ದಾರೆ. 15,872 ಜನರು ಮೃತಪಟ್ಟಿದ್ದಾರೆ. ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಬಿಬಿಎಂಪಿ ತಲೆ ನೋವಿಗೆ ಕಾರಣವಾಗಿದೆ.

 ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಕೈ ಮೀರಿದೆಯೇ, ಸರ್ಕಾರದ ತಜ್ಞರು ಹೇಳಿದ್ದೇನು? ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಕೈ ಮೀರಿದೆಯೇ, ಸರ್ಕಾರದ ತಜ್ಞರು ಹೇಳಿದ್ದೇನು?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತ ಈ ಕುರಿತು ಮಾತನಾಡಿದ್ದಾರೆ, "ಕೆಲವು ಬಡಾವಣೆಗಳಲ್ಲಿ, ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಧಿಕಾರಿಗಳಿಗೆ ಹೊಸ ಪ್ರಕರಣಗಳ ಪ್ರಯಾಣದ ಮಾಹಿತಿ ಸಂಗ್ರಹ ಮಾಡುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ.

ಕರ್ನಾಟಕದ ಈ 5 ಜಿಲ್ಲೆಗಳೇ ಕೊರೊನಾವೈರಸ್ ಹಾಟ್ ಸ್ಪಾಟ್! ಕರ್ನಾಟಕದ ಈ 5 ಜಿಲ್ಲೆಗಳೇ ಕೊರೊನಾವೈರಸ್ ಹಾಟ್ ಸ್ಪಾಟ್!

ಬೆಂಗಳೂರು ನಗರದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿಗೆ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ. ಕೋವಿಡ್ ಸೋಂಕು ತಗುಲಿದ ವ್ಯಕ್ತಿಯ ಸಂಪರ್ಕದಲ್ಲಿದ್ದ 10-15 ಜನರನ್ನು ತಪಾಸಣೆ ಮಾಡಲಾಗುತ್ತಿತ್ತು. ಈಗ 20 ಜನರನ್ನು ತಪಾಸಣೆಗೆ ಒಳಪಡಿಸಲು ಬಿಬಿಎಂಪಿ ತೀರ್ಮಾನಿಸಿದೆ.

ಕೊರೊನಾ ಏರಿಕೆ; ಹತ್ತು ರಾಜ್ಯಗಳಲ್ಲಿ ಪರಿಶೀಲನೆಗೆ ಮುಂದಾದ ಕೇಂದ್ರಕೊರೊನಾ ಏರಿಕೆ; ಹತ್ತು ರಾಜ್ಯಗಳಲ್ಲಿ ಪರಿಶೀಲನೆಗೆ ಮುಂದಾದ ಕೇಂದ್ರ

5 ದಿನದ ಹೊಸ, ಸಕ್ರಿಯ ಪ್ರಕರಣಗಳು

5 ದಿನದ ಹೊಸ, ಸಕ್ರಿಯ ಪ್ರಕರಣಗಳು

ಬೆಂಗಳೂರು ನಗರದಲ್ಲಿ ಜುಲೈ 31ರ ಶನಿವಾರ 450 ಹೊಸ ಪ್ರಕರಣ ದಾಖಲಾಗಿದೆ, ಸಕ್ರಿಯ ಪ್ರಕರಣ 8,529 ಆಗಿದೆ. ಜುಲೈ 30ರ ಶುಕ್ರವಾರ 426 ಹೊಸ ಪ್ರಕರಣ, 8,467 ಸಕ್ರಿಯ ಪ್ರಕರಣವಿತ್ತು. ಜುಲೈ 27ರಂದು 354 ಹೊಸ ಪ್ರಕರಣ, 8,047 ಸಕ್ರಿಯ ಪ್ರಕರಣ ಪತ್ತೆಯಾಗಿತ್ತು. ಜುಲೈ 28ರಂದು 376 ಹೊಸ ಪ್ರಕರಣ, 8,176 ಸಕ್ರಿಯ ಪ್ರಕರಣ ದಾಖಲಾಗಿತ್ತು. ಜುಲೈ 29ರಂದು 506 ಹೊಸ ಪ್ರಕರಣ 8416 ಸಕ್ರಿಯ ಪ್ರಕರಣ ಪತ್ತೆಯಾಗಿತ್ತು.

ಪಕ್ಕದ ರಾಜ್ಯ ತಂದ ಆತಂಕ

ಪಕ್ಕದ ರಾಜ್ಯ ತಂದ ಆತಂಕ

ಕರ್ನಾಟಕದಲ್ಲಿ ಅನ್‌ಲಾಕ್ ಜಾರಿಗೆ ಬಂದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವಾಗಲೇ ಅಕ್ಕ-ಪಕ್ಕದ ರಾಜ್ಯಗಳಿಂದ ಆತಂಕ ಉಂಟಾಗಿದೆ. ಅದರದಲ್ಲೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕೇರಳದಿಂದ ಬೆಂಗಳೂರು ನಗರಕ್ಕೆ ಬರುವ ಜನರ ಸಂಖ್ಯೆಯೂ ಹೆಚ್ಚು. ಆದ್ದರಿಂದ ಬಿಬಿಎಂಪಿ ನಗರದಲ್ಲಿ ಕೋವಿಡ್ ಸೋಂಕು ಮತ್ತೆ ಹರಡದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಂತರರಾಜ್ಯ ಪ್ರಯಾಣಿಕರ ಮೇಲೆ ಸಹ ಹಲವಾರು ನಿರ್ಬಂಧಗಳನ್ನು ಹೇರಲಾಗಿದೆ.

ಸಾರ್ವಜನಿಕ ಸ್ಥಳಗಳು ಹಾಟ್‌ ಸ್ಪಾಟ್

ಸಾರ್ವಜನಿಕ ಸ್ಥಳಗಳು ಹಾಟ್‌ ಸ್ಪಾಟ್

ಬೆಂಗಳೂರು ನಗರದಲ್ಲಿ ಈಗ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದೆ. ಮಾರುಕಟ್ಟೆ, ಮದುವೆ ಸಮಾರಂಭ, ಹೆಚ್ಚು ಜನರು ಸೇರುವ ಪ್ರದೇಶಗಳು ಕೋವಿಡ್ ಹರಡುವಿಕೆ ಹಾಟ್ ಸ್ಪಾಟ್ ಆಗಿವೆ. ಆದ್ದರಿಂದ ಬಿಬಿಎಂಪಿ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಎಚ್ಚರಿಕೆ ವಹಿಸಲಿದೆ. ಅಗತ್ಯವಿದ್ದರೆ 7 ದಿನಗಳ ಕಾಲ ಸಮಾರಂಭಗಳನ್ನು ನಿಷೇಧಿಸಿ ಆದೇಶ ಹೊರಡಿಸುವ ಸಾಧ್ಯತೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಸರ್ಕಾರದ ಸಂಪೂರ್ಣ ಸಹಕಾರ

ಸರ್ಕಾರದ ಸಂಪೂರ್ಣ ಸಹಕಾರ

ಬೆಂಗಳೂರು ನಗರದಲ್ಲಿ ಕೋವಿಡ್ ಹರಡುವಿಕೆ ನಿಯಂತ್ರಿಸಲು ಬಿಬಿಎಂಪಿಗೆ ಸಂಪೂರ್ಣ ಅಧಿಕಾರವನ್ನು ಸರ್ಕಾರ ನೀಡಿದೆ. ಈಗಾಗಲೇ ಸೋಂಕಿತರು ಇರುವ ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಬಿಬಿಎಂಪಿ ವಾರಾಂತ್ಯದ ಕರ್ಫ್ಯೂವನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ರಾತ್ರಿ ಕರ್ಫ್ಯೂ ಅವಧಿಯನ್ನು ಇಳಿಕೆ ಮಾಡುವ ನಿರೀಕ್ಷೆ ಇದೆ.

Recommended Video

ಗಡ್ಡ ಹಾಗೂ ತಿಲಕಾನೆ ನನ್ನ IDENTITY !! C T RAVI | Oneindia Kannada
ರಸ್ತೆಗಳು ಬಂದ್ ಆಗುವ ಸಾಧ್ಯತೆ

ರಸ್ತೆಗಳು ಬಂದ್ ಆಗುವ ಸಾಧ್ಯತೆ

ಬೆಂಗಳೂರು ನಗರದಲ್ಲಿ ಒಂದು ಮನೆ ಅಥವ ಒಂದೇ ಪ್ರದೇಶದಲ್ಲಿ 10 ಅಥವ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾದರೆ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ. ಇಡೀ ರಸ್ತೆಯನ್ನು ಸೀಲ್ ಡೌನ್ ಮಾಡಿ ಬೇರೆ ಪ್ರದೇಶಕ್ಕೆ ಸೋಂಕು ಹರಡದಂತೆ ತಡೆಯಲಾಗುತ್ತದೆ ಮತ್ತು ಈ ಪ್ರದೇಶಕ್ಕೆ ಬಿಬಿಎಂಪಿಯೇ ಅಗತ್ಯ ವಸ್ತು ಸರಬರಾಜು ಮಾಡುವ ಸಾಧ್ಯತೆ ಇದೆ.

English summary
The Bruhat Bengaluru Mahanagara Palike was shocked after sudden spike in new Covid cases in Bengaluru city. Infection is spreading through crowded areas said BBMP officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X