ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತೀಯ ಸಶಸ್ತ್ರ ಪಡೆಗೆ ಪ್ರಶಸ್ತಿ ಮೊತ್ತ ಅರ್ಪಿಸಿದ ಸುಧಾಮೂರ್ತಿ

|
Google Oneindia Kannada News

ಬೆಂಗಳೂರು, ನ. 26: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ, ಸಾಹಿತಿ, ಉದ್ಯಮಿ ಸುಧಾಮೂರ್ತಿಯವರಿಗೆ 21ನೇ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ ಲಭಿಸಿರುವುದು ಗೊತ್ತಿರಬಹುದು, ಇತ್ತೀಚೆಗೆ ಉಪ ರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರು ಇನ್ಫೋಸಿಸ್ ಫೌಂಡೇಶನ್ ಸೇವೆಯನ್ನು ಹೊಗಳಿ, ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ಪ್ರಶಸ್ತಿ ಮೊತ್ತವನ್ನು ಸುಧಾಮೂರ್ತಿ ಅವರು ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸುಧಾಮೂರ್ತಿ, "ಈ ಪ್ರಶಸ್ತಿ ಸ್ವೀಕರಿಸಲು ನನಗೆ ಅತೀವ ಸಂತಸವಾಗುತ್ತಿದೆ. ಈ ಪ್ರಶಸ್ತಿಯನ್ನು ಸ್ವೀಕರಿಸಿದವರ ಪಟ್ಟಿಯನ್ನು ನಾನು ನೋಡಿದಾಗ, ನಾನು ತೀರಾ ಚಿಕ್ಕವಳು ಎನಿಸಿತು. ನನ್ನ ಕಾರ್ಯ ಮತ್ತು ಸಂಸ್ಥೆಯನ್ನು ಗುರುತಿಸಿದ್ದಕ್ಕಾಗಿ ಧನ್ಯವಾದಗಳು. ಶ್ರೇಷ್ಠರಾದ ಶಾಸ್ತ್ರೀಜಿಯವರು ಹೇಗಿದ್ದರು ಎನ್ನುವುದನ್ನು ನಾನು ಕಂಡುಕೊಂಡಿದ್ದೇನೆ. ನಾನು ಇಂದು ಸ್ವೀಕರಿಸಿದ ಪ್ರಶಸ್ತಿಯನ್ನು ನಮ್ಮ ಕಾಳಜಿ ವಹಿಸಿರುವವರಿಗೆ ಸಮರ್ಪಿಸುತ್ತಿದ್ದೇನೆ. ಪ್ರಶಸ್ತಿ ರೂಪದಲ್ಲಿ ನೀಡಿದ ನಗದು ಹಣವನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಸಮರ್ಪಿಸುತ್ತಿದ್ದೇನೆ" ಎಂದು ನುಡಿದರು.

ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರಿಗೆ ಗೌರವದ ಮತ್ತೊಂದು ಗರಿ!ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರಿಗೆ ಗೌರವದ ಮತ್ತೊಂದು ಗರಿ!

ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು 2020ನೇ ಸಾಲಿನ 21ನೇ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿಯನ್ನು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಪ್ರದಾನ ಮಾಡಿದರು. ಮಾನವೀಯ ಕಾರ್ಯಗಳ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ, ಸುಧಾಮೂರ್ತಿಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಲಾಲ್‍ಬಹದ್ದೂರ್ ಶಾಸ್ತ್ರಿ ವ್ಯವಸ್ಥಾಪನಾ ಸಂಸ್ಥೆ ಈ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿತ್ತು. ಸುಧಾಮೂರ್ತಿಯವರಿಗೆ ಪ್ರಶಸ್ತಿ ಫಲಕ ಮತ್ತು ಸನ್ಮಾನಪತ್ರ ನೀಡಿ ಗೌರವಿಸಲಾಯಿತು. ಸುಧಾಮೂರ್ತಿಯವರು ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ ಭಾರತದ ಸಶಸ್ತ್ರ ಪಡೆಗಳಿಗೆ ಸಮರ್ಪಣೆ ಮಾಡಿದರು.

Sudha Murty dontoes Lal Bahadur Shastri Award for Excellence Cash to Army

Recommended Video

ಯಡಿಯೂರಪ್ಪಗೆ ತಲೆ ಕೆಟ್ಟಿದೆ!! | Oneindia Kannada

ಈ ಸಂದರ್ಭದಲ್ಲಿ ಮಾತನಾಡಿದ ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು, ಈ ಅಪೂರ್ವ ಕ್ಷಣ ದೇಶಕ್ಕೆ ಸದಾ ಸ್ಫೂರ್ತಿ ಎನಿಸಿದ ಮಾಜಿ ಪ್ರಧಾನಿ ಶ್ರೀ ಲಾಲ್‍ಬಹದ್ದೂರ್ ಶಾಸ್ತ್ರಿ ಹಾಗೂ ಅವರ ಸರಳತೆ, ಸಮಗ್ರತೆ, ಪ್ರೀತಿ ಮತ್ತು ಸಹಿಷ್ಣುತೆಯನ್ನು ನೆನಪಿಸಿದೆ. ಇಡೀ ದೇಶ ಒಂದು ಒಗ್ಗೂಡಿ ಶಾಂತಿಯನ್ನು ಉತ್ತೇಜಿಸಬೇಕಾದ ಅಗತ್ಯವಿದೆ. ಅಂತೆಯೇ ಬಡತನ ನಿರ್ಮೂಲನೆ, ಜನಸಮೂಹದ ಸಾಮಾಜಿಕ- ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಭಯೋತ್ಪಾದನೆಯ ಪಿಡುಗು ತೊಡೆದುಹಾಕಲು ಪಣ ತೊಡಬೇಕಿದೆ ಎಂದು ಸಲಹೆ ಮಾಡಿದರು. ಭಯೋತ್ಪಾದನೆಗೆ ಧರ್ಮವಿಲ್ಲ; ಇದನ್ನು ನಿಭಾಯಿಸಲು ಭಾರತಕ್ಕೆ ಇದು ಸಕಾಲ ಎಂದು ಹೇಳಿದರು.

English summary
Infosys foundation president Sudha Murty was awarded the 21st Lal Bahadur Shastri National Award for Excellence in Philanthropic work. Sudha Murthy donoted cash prize to Indian Army.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X