ದೇಶದ ಪ್ರಥಮ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ
ಬೆಂಗಳೂರು, 5 ಆಗಸ್ಟ್: ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಸ್ತಾಂತರಿಸಿದರು.
Recommended Video
BS Yediyurappa , Manipal ಆಸ್ಪತ್ರೆಯಿಂದಲೇ ನಿರಂತರ ಕೆಲಸ | Oneindia Kannada
ಇದು ಬಯೋ ಸುರಕ್ಷತೆ ಪ್ರಮಾಣೀಕರಣ ಹೊಂದಿರುವ ಅತ್ಯಂತ ಸುಸಜ್ಜಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಆಗಿದ್ದು ಕೇವಲ 4 ಗಂಟೆಗಳಲ್ಲಿ ಟೆಸ್ಟ್ ವರದಿ ಪಡೆಯಬಹುದಾಗಿದೆ. ದಿನಕ್ಕೆ ಸುಮಾರು 400 ಟೆಸ್ಟ್ ನಡೆಸುವ ಸಾಮರ್ಥ್ಯ ಹೊಂದಿರುವ ಈ ಲ್ಯಾಬ್ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಟೆಸ್ಟ್ ನಡೆಸಲು ಬಳಸಬಹುದಾಗಿದೆ.

ಐಐಎಸ್ ಸಿ ನಿರ್ದೇಶಕರು, ರಾಜೀವ್ ಗಾಂಧಿ ವಿವಿ ಉಪಕುಲಪತಿಗಳಾದ ಡಾ.ಸಚ್ಚಿದಾನಂದ ಅವರು ಉಪಸ್ಥಿತರಿದ್ದರು.












Click it and Unblock the Notifications