ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಚಿಂತನೆ: ಸುಧಾಕರ್

|
Google Oneindia Kannada News

ಬೆಂಗಳೂರು, ಫೆಬ್ರವರಿ 01:ರಾಜ್ಯದ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ರಾಜ್ಯದ 9 ಜಿಲ್ಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡುವುದಾಗಿ ತಿಳಿಸಿದ್ದಾರೆ.

ಲಸಿಕೆ ಹಾಕಿಸಿಕೊಂಡ ನಂತರ ಸೋಂಕು; ಸಚಿವ ಸುಧಾಕರ್ ಸ್ಪಷ್ಟನೆಲಸಿಕೆ ಹಾಕಿಸಿಕೊಂಡ ನಂತರ ಸೋಂಕು; ಸಚಿವ ಸುಧಾಕರ್ ಸ್ಪಷ್ಟನೆ

ಹೊಸ ನಾಲ್ಕು ಕಾಲೇಜುಗಳಲ್ಲಿ ಹೊಸ ಪ್ರವೇಶಾತಿಗೆ ಚಾಲನೆ ನೀಡಿದ್ದೇವೆ ಈ ಬಾರಿಯಿಂದ 150 ಹೆಚ್ಚುವರಿ ಪ್ರವೇಶಾತಿಗೆ ಅವಕಾಶ ಇದೆ. ಎಂಸಿಐ ಅನುಮತಿಯೂ ನಮಗೆ ಸಿಕ್ಕಿದೆ.

 Sudhakar Says Construction Of Medical Colleges On PPP Model In 9 Districts Of The State

ಕೊರೊನಾ ಲಸಿಕೆ ಸಂಪೂರ್ಣ ಭಾರತಕ್ಕೆ ಸೇರಿದ್ದು ನಮ್ಮ ದೇಶದಲ್ಲಿ ತಯಾರಿಕೆ ಮಾಡಲಾಗುತ್ತಿದೆ ನಮ್ಮ ಸಂಶೋಧಕರ ಬಗ್ಗೆ ನಾವು ಹೆಮ್ಮೆ ಪಡಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.

ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲ ಹೀಗಾಗಿ ಸಾರ್ವಜನಿಕ ಹೂಡಿಕೆಯಿಂದ ಕಾಲೇಜು ಸ್ಥಾಪಿಸಲು ಚಿಂತನೆ ನಡೆದಿದೆ.ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಸಚಿವರು, ಕ್ಲಿನಿಕಲ್ ಟ್ರಯಲ್ ಮಾಡುವುದು ಕೇಂದ್ರಕ್ಕೆ ಬಿಟ್ಟದ್ದು, ಕೇಂದ್ರ ಸರ್ಕಾರ ಕ್ಲಿನಿಕಲ್ ಟ್ರಯಲ್ ಮಾಡಿದೆ ನಂತರವೇ ರಾಜ್ಯಗಳಿಗೆ ಲಸಿಕೆ ಅಭಿಯಾನ ಆರಂಭಿಸಿದೆ. ಕೇಂದ್ರದ ಮಾರ್ಗಸೂಚಿಯನ್ನು ನಾವು ಯಥಾವತ್ತಾಗಿ ಪಾಲಿಸಿದ್ದೇವೆ. ಲಸಿಕೆ ಬಗ್ಗೆ ವಿವರವಾದ ಮಾಹಿತಿಗೆ ಕೇಂದ್ರ ಸರ್ಕಾರಕ್ಕೆ ಬರೆಯಬಹುದು ಎಂದರು.

ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದ ವೇಳೆ ರಾಜ್ಯದಲ್ಲಿ ಹೊಸ ಮೆಡಿಕಲ್ ಕಾಲೇಜು ಆರಂಭವಾಗುತ್ತಿವೆ. ಆದರೆ ಚಿಕ್ಕಬಳ್ಳಾಪುರಕ್ಕೆ ಮಾತ್ರ ಯಾಕೆ ಹೆಚ್ಚು ಅನುದಾನ ಹಾವೇರಿ, ಯಾದಗಿರಿ ಹಾಗೂ ಚಿಕ್ಕಮಗಳೂರು ಹೊಸ ಕಾಲೇಜುಗಳಿಗೆ ಅನುದಾನ ಕಡಿಮೆ ಯಾಕೆ ಎಂದು ಎಸ್.ವಿ.ಸಂಕನೂರು ಆರೋಗ್ಯ ಸಚಿವರಿಗೆ ಪ್ರಶ್ನೆ ಕೇಳಿದರು.

Recommended Video

ಚುನಾವಣಾ ರಾಜ್ಯಕ್ಕೆ ಮಾತ್ರ ಸೀಮಿತವಾದ ಬಜೆಟ್ !! | Oneindia Kannada

ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಮೊದಲೇ ಪ್ರಾರಂಭ ಆಗಿದೆ. ಹಾವೇರಿಯಲ್ಲಿ ಜಾಗದ ಸಮಸ್ಯೆ ಇತ್ತು, ಅದಕ್ಕೆ ಪ್ರಗತಿಯಲ್ಲಿ ಹಿಂದುಳಿದಿದೆ. 2022ರ ಜೂನ್ ಅಂತ್ಯಕ್ಕೆ ಕಾಮಗಾರಿ ಮುಗಿಸಲು‌‌ ಕಾಲಮಿತಿ ನೀಡಿದ್ದೇವೆ. ಕೇಂದ್ರ ಸರ್ಕಾರ ಶೇ. 60, ರಾಜ್ಯ ಸರ್ಕಾರ ಶೇ. 40 ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

English summary
Where there are no Government Medical colleges In Karnataka, Government will construct Medical colleges in PPP Model Says Minister K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X