ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿ

By Sachhidananda Acharya
|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 22: ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.

ಕ್ರೀಡಾ ಕ್ಷೇತ್ರದಿಂದ ಬೆಂಗಳೂರಿನ ಪದ್ಮಶ್ರೀ ಡಾ.ಮಾಲತಿ ಹೊಳ್ಳ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್, ಕಲಾ ಕ್ಷೇತ್ರದಿಂದ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಅಂಕೋಲದ ಸುಕ್ರಿ ಬೊಮ್ಮಗೌಡ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಿಂದ ತುಮಕೂರಿನ ಡಾ.ಡಿ.ಕೆ.ರಾಜೇಂದ್ರ, ಸಂಸ್ಕೃತ ಮತ್ತು ಸಾಹಿತ್ಯ ಕ್ಷೇತ್ರದಿಂದ ಬೆಂಗಳೂರಿನ ಪ್ರೊ. ಶಿವರಾಮ್ ಅಗ್ನಿಹೋತ್ರಿಯವರನ್ನು ಚುಂಚಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Sukri Bommagowda, Sakshi Malik and 3 more to receive Chuncha Shri Award 2017

ಇದೇ ಭಾನುವಾರ ಆದಿಚುಂಚನಗಿರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭದಲ್ಲಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಲೋಕಸಭಾ ಸದಸ್ಯ ಕೆ.ಎಚ್.ಮುನಿಯಪ್ಪ, ಶಾಸಕ ಚೆಲುವರಾಯಸ್ವಾಮಿ, ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಮತ್ತಿತರರು ಭಾಗವಹಿಸಲಿದ್ದಾರೆ.

ಪ್ರಶಸ್ತಿಯು ತಲಾ 50ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

English summary
Five elite members have been selected for the Chuncha Shri Award – 2017, awarded by Adichunchanagiri Math. Dr Malathi Holla, Sakshi Mallik, Sukri Bommagowda, DK Rajendra, Prof. Shivaram Agnihotri was selected for the Chunchashri award.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X