ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಬಿ ಸಮಾಧಿ ಮುಂದೆ ನಾಮಪತ್ರಕ್ಕೆ ಪೂಜೆ, ಭಾವುಕರಾದ ಸುಮಲತಾ

|
Google Oneindia Kannada News

ಬೆಂಗಳೂರು, ಮಾರ್ಚ್ 19 : ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಅಂಬರೀಶ್ ಸಮಾಧಿ ಮುಂದೆ ನಾಪಮತ್ರಕ್ಕೆ ಪೂಜೆ ಸಲ್ಲಿಸಿದರು. ಮಾ.20ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿ ಮುಂದೆ ಮಂಗಳವಾರ ಸಂಜೆ ಸುಮಲತಾ ಅವರು ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಮಂಡ್ಯದ ಬಗ್ಗೆ ಗುಪ್ತಚರ ವರದಿ, ಜೆಡಿಎಸ್‌ ಹಾದಿ ಸುಲಭವಲ್ಲ!ಮಂಡ್ಯದ ಬಗ್ಗೆ ಗುಪ್ತಚರ ವರದಿ, ಜೆಡಿಎಸ್‌ ಹಾದಿ ಸುಲಭವಲ್ಲ!

ಸುಮಲತಾ ಅವರು ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾ.20ರಂದು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಅದಕ್ಕೂ ಮೊದಲು ಅಂಬರೀಶ್ ಸಮಾಧಿ ಮುಂದೆ ನಾಮಪತ್ರವನ್ನು ಇಟ್ಟು ಅವರು ಪೂಜೆ ಸಲ್ಲಿಸಿದರು.

Sumalatha offer prayers at Ambareesh memorial in Kanteerava Studio

ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಿದೆ. ಮಂಗಳವಾರ ಪಕ್ಷೇತರ ಅಭ್ಯರ್ಥಿಯಾಗಿ ಕೌಡ್ಲೆ ಚನ್ನಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಸಂಯುಕ್ತ ಜನತಾ ದಳ ಪಕ್ಷದಿಂದ ಒಬ್ಬರು, ಸಮಾಜವಾದಿ ಪಕ್ಷದಿಂದ ಒಬ್ಬರು ಮಂಡ್ಯದಿಂದ ನಾಮಪತ್ರವನ್ನು ಸಲ್ಲಿಸಿದ್ದಾರೆ.

ವಿಶ್ಲೇಷಣೆ : ಮಂಡ್ಯದಲ್ಲಿ ಮೈತ್ರಿಕೂಟದ ಆಟ ನಡೆಯೋದು ಬಲು ಕಷ್ಟ! ವಿಶ್ಲೇಷಣೆ : ಮಂಡ್ಯದಲ್ಲಿ ಮೈತ್ರಿಕೂಟದ ಆಟ ನಡೆಯೋದು ಬಲು ಕಷ್ಟ!

ಮಾ.26ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ.29 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಸುಮಲತಾ ವರ್ಸಸ್ ನಿಖಿಲ್ ಕುಮಾರಸ್ವಾಮಿ; ಯಾರಿಗುಂಟು ಗ್ರಹ ಬಲ? ಸುಮಲತಾ ವರ್ಸಸ್ ನಿಖಿಲ್ ಕುಮಾರಸ್ವಾಮಿ; ಯಾರಿಗುಂಟು ಗ್ರಹ ಬಲ?

ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ. ಮಾ.25ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

English summary
Sumalatha offered prayer at Ambareesh memorial in Kanteerava Studio, Bengaluru on March 19, 2019. On March 20 she will be filing nomination papers for Lok sabha elections 2019 from Mandya as independent candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X