10 ದಿನಗಳ ಕಾಲ ಸುಮನಹಳ್ಳಿ ಮೇಲ್ಸೇತುವೆ ಬಂದ್, ಪರ್ಯಾಯ ಮಾರ್ಗ?
ಬೆಂಗಳೂರು, ನವೆಂಬರ್ 2: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬೃಹದಾಕಾರದ ಹೊಂಡ ಇರುವ ಕಾರಣ ರಸ್ತೆ ಕಾಮಗಾರಿಗಾಗಿ ಹತ್ತು ದಿನಗಳ ಕಾಲ ಮೇಲ್ಸೇತುವೆಯನ್ನು ಬಿಬಿಎಂಪಿ ಮುಚ್ಚಿದೆ.
ನಾಯಂಡಹಳ್ಳಿಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಹೊರ ವರ್ತುಲ ರಸ್ತೆಯಲಲ್ಲಿರುವ ಸಮುನಹಳ್ಳಿ ಮೇಲ್ಸೇತುವೆಯಲ್ಲಿ ಸುಮಾರು 6 ಅಡಿ ಅಗಲದಷ್ಟು ದೊಡ್ಡ ಗುಂಡಿಯಾಗಿದೆ.
ಕೇವಲ ಗುಂಡಿ ಮಾತ್ರವಲ್ಲ ಅದು ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ಅದರ ಅಡಿ ಇರುವ ಕಬ್ಬಿಣದ ಸರಳುಗಳು ಕೂಡ ಕಾಣುತ್ತಿವೆ. ಅಂದರೆ ಬಿಬಿಎಂಪಿಯ ಕಳಪೆ ಕಾಮಗಾರಿ ಎಷ್ಟಿದೆ ಎಂದು ಆ ಹೊಂಡವನ್ನು ನೋಡಿಯೇ ಅರಿಯಬಹುದಾಗಿದೆ.
ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿ ಕಡೆ ಹೋಗುವ ವಾಹನಗಳು ಎಂದಿನಂತೆ ಫ್ಲೈಓವರ್ ಮೇಲೆ ಸಂಚರಿಸಬಹುದಾಗಿದೆ.

ಬಿಬಿಎಂಪಿ ಅಧಿಕಾರಿಗಳು ಕಳೆದ 4 ವರ್ಷಗಳಿಂದ ಸೇತುವೆ ನಿರ್ವಹಣೆ ಮಾಡಿರಲಿಲ್ಲ. ಈ ಬ್ರಿಡ್ಜ್ ನಿರ್ಮಾಣ ಮಾಡಿದ ಚೆನ್ನೈ ಮೂಲದ ಖಾಸಗಿ ಸಂಸ್ಥೆ ಇಸಿಸಿಐ 3 ರಾಜ್ಯಗಳಲ್ಲಿ ಕಪ್ಪು ಪಟ್ಟಿಯಲ್ಲಿದೆ. ಈ ಸೇತುವೆ ಹಾಳಾಗಳು ಅಧಿಕಾರಿಗಳ ಬೇಜಾವಾಬ್ದಾರಿ ಕಾರಣ ಎಂದು ನೇರವಾಗಿ ಹೇಳಿದ್ದಾರೆ.
ಸುಮನಹಳ್ಳಿ ಸಿಗ್ನಲ್‍ನಲ್ಲಿ ವಿಜಯನಗರ, ಮಾರುಕಟ್ಟೆ ಕಡೆಯಿಂದ ಸುಂಕದಕಟ್ಟೆ, ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆಗೆ ವಾಹನಗಳು ಸಂಚರಿಸುತ್ತವೆ. ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ 2007ರಲ್ಲಿ ಬಿಡಿಎ ಫ್ಲೈಓವರ್ ಕಾಮಗಾರಿಯ ಗುತ್ತಿಗೆಯನ್ನು ಚೆನ್ನೈ ಮೂಲದ ಇಸಿಸಿಐ ಕಂಪನಿಗೆ ನೀಡಿತ್ತು.
2010ರಲ್ಲಿ ಉದ್ಘಾಟನೆಯಾದ ಬಳಿಕ 2016ರವರೆಗೆ ಬಿಡಿಎ ನಿರ್ವಹಣೆ ಮಾಡಿ ನಂತರ ಬಿಬಿಎಂಪಿಗೆ ನೀಡಿತ್ತು. ಆದರೆ ಬಿಬಿಎಂಪಿ ಅಧಿಕಾರಿಗಳು ನಿರ್ವಹಣೆ ಸರಿ ಮಾಡದ ಪರಿಣಾಮ ರಸ್ತೆ ಗುಂಡಿ ಬಿದ್ದಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ವತಃ ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಮೇಲ್ಸೇತುವೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications