ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

10 ದಿನಗಳ ಕಾಲ ಸುಮನಹಳ್ಳಿ ಮೇಲ್ಸೇತುವೆ ಬಂದ್, ಪರ್ಯಾಯ ಮಾರ್ಗ?

|
Google Oneindia Kannada News

ಬೆಂಗಳೂರು, ನವೆಂಬರ್ 2: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬೃಹದಾಕಾರದ ಹೊಂಡ ಇರುವ ಕಾರಣ ರಸ್ತೆ ಕಾಮಗಾರಿಗಾಗಿ ಹತ್ತು ದಿನಗಳ ಕಾಲ ಮೇಲ್ಸೇತುವೆಯನ್ನು ಬಿಬಿಎಂಪಿ ಮುಚ್ಚಿದೆ.

ನಾಯಂಡಹಳ್ಳಿಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಹೊರ ವರ್ತುಲ ರಸ್ತೆಯಲಲ್ಲಿರುವ ಸಮುನಹಳ್ಳಿ ಮೇಲ್ಸೇತುವೆಯಲ್ಲಿ ಸುಮಾರು 6 ಅಡಿ ಅಗಲದಷ್ಟು ದೊಡ್ಡ ಗುಂಡಿಯಾಗಿದೆ.

ಕೇವಲ ಗುಂಡಿ ಮಾತ್ರವಲ್ಲ ಅದು ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ಅದರ ಅಡಿ ಇರುವ ಕಬ್ಬಿಣದ ಸರಳುಗಳು ಕೂಡ ಕಾಣುತ್ತಿವೆ. ಅಂದರೆ ಬಿಬಿಎಂಪಿಯ ಕಳಪೆ ಕಾಮಗಾರಿ ಎಷ್ಟಿದೆ ಎಂದು ಆ ಹೊಂಡವನ್ನು ನೋಡಿಯೇ ಅರಿಯಬಹುದಾಗಿದೆ.

ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬೃಹತ್ ಗುಂಡಿ, ಸಂಚಾರದ ದಿಕ್ಕು ಬದಲು ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬೃಹತ್ ಗುಂಡಿ, ಸಂಚಾರದ ದಿಕ್ಕು ಬದಲು

ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿ ಕಡೆ ಹೋಗುವ ವಾಹನಗಳು ಎಂದಿನಂತೆ ಫ್ಲೈಓವರ್ ಮೇಲೆ ಸಂಚರಿಸಬಹುದಾಗಿದೆ.

Sumanahalli Flyover Closed For 10 Days

ಬಿಬಿಎಂಪಿ ಅಧಿಕಾರಿಗಳು ಕಳೆದ 4 ವರ್ಷಗಳಿಂದ ಸೇತುವೆ ನಿರ್ವಹಣೆ ಮಾಡಿರಲಿಲ್ಲ. ಈ ಬ್ರಿಡ್ಜ್ ನಿರ್ಮಾಣ ಮಾಡಿದ ಚೆನ್ನೈ ಮೂಲದ ಖಾಸಗಿ ಸಂಸ್ಥೆ ಇಸಿಸಿಐ 3 ರಾಜ್ಯಗಳಲ್ಲಿ ಕಪ್ಪು ಪಟ್ಟಿಯಲ್ಲಿದೆ. ಈ ಸೇತುವೆ ಹಾಳಾಗಳು ಅಧಿಕಾರಿಗಳ ಬೇಜಾವಾಬ್ದಾರಿ ಕಾರಣ ಎಂದು ನೇರವಾಗಿ ಹೇಳಿದ್ದಾರೆ.

ಸುಮನಹಳ್ಳಿ ಸಿಗ್ನಲ್‍ನಲ್ಲಿ ವಿಜಯನಗರ, ಮಾರುಕಟ್ಟೆ ಕಡೆಯಿಂದ ಸುಂಕದಕಟ್ಟೆ, ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆಗೆ ವಾಹನಗಳು ಸಂಚರಿಸುತ್ತವೆ. ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ 2007ರಲ್ಲಿ ಬಿಡಿಎ ಫ್ಲೈಓವರ್ ಕಾಮಗಾರಿಯ ಗುತ್ತಿಗೆಯನ್ನು ಚೆನ್ನೈ ಮೂಲದ ಇಸಿಸಿಐ ಕಂಪನಿಗೆ ನೀಡಿತ್ತು.

2010ರಲ್ಲಿ ಉದ್ಘಾಟನೆಯಾದ ಬಳಿಕ 2016ರವರೆಗೆ ಬಿಡಿಎ ನಿರ್ವಹಣೆ ಮಾಡಿ ನಂತರ ಬಿಬಿಎಂಪಿಗೆ ನೀಡಿತ್ತು. ಆದರೆ ಬಿಬಿಎಂಪಿ ಅಧಿಕಾರಿಗಳು ನಿರ್ವಹಣೆ ಸರಿ ಮಾಡದ ಪರಿಣಾಮ ರಸ್ತೆ ಗುಂಡಿ ಬಿದ್ದಿದೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ವತಃ ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಮೇಲ್ಸೇತುವೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

English summary
A huge pothole on the Sumanahalli Flyover BBMP Closed For 10 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X