ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 5ರಿಂದ ಕರ್ನಾಟಕದಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್?

|
Google Oneindia Kannada News

ಬೆಂಗಳೂರು, ಜೂನ್ 27: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.

Recommended Video

Community spreading started in India ? The stats are scary | Oneindia Kannada

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಭಾನುವಾರ ಸಂಪೂರ್ಣವಾಗಿ ರಾಜ್ಯವನ್ನು ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗಿನ ಸಭೆ ಬಳಿಕ ಅಶೋಕ್ ಹೇಳಿದ್ದಾರೆ.

sunday-complete-lockdown-from-july-5th-at-karnataka

ಈ ಕುರಿತು ಸಿಎಂ ಜೊತೆ ಸಮಾಲೋಚನೆ ಮಾಡಲಾಗಿದೆ. ಅಂತಿಮ ನಿರ್ಧಾರವನ್ನು ಸಿಎಂ ಘೋಷಿಸಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ. ಸದ್ಯ, ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯುತ್ತಿರುವುದರಿಂದ, ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಜುಲೈ 4ರ ನಂತರ ಮತ್ತಷ್ಟು ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಲಾಕ್‌ಡೌನ್? ಅಥವಾ ಸೀಲ್‌ಡೌನ್? ಸಚಿವರ ಸ್ಪಷ್ಟನೆಬೆಂಗಳೂರು ಲಾಕ್‌ಡೌನ್? ಅಥವಾ ಸೀಲ್‌ಡೌನ್? ಸಚಿವರ ಸ್ಪಷ್ಟನೆ

ಸರ್ಕಾರಿ ನೌಕರರು ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಮಾಡಲಿದ್ದಾರೆ. ಶನಿವಾರ ಮತ್ತು ಭಾನುವಾರ ರಜೆ ಇರಲಿದೆ. ಜುಲೈ 4ರಿಂದ ಎಲ್ಲಾ ಭಾನುವಾರವೂ ಲಾಕ್‌ಡೌನ್‌ ಜಾರಿಯಾಗಲಿದೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಎಂದು ಸಚಿವ ಅಶೋಕ್ ಹೇಳಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವೂ ಸಂಪೂರ್ಣವಾಗಿ ಬಂದ್ ಆಗಲಿದೆ. ಆಟೋ, ಟ್ಯಾಕ್ಸಿ, ಬಸ್ ಸಂಚಾರ ಇರುವುದಿಲ್ಲ ಎಂದು ಹೇಳಿದ್ದಾರೆ.

English summary
Karnataka Govt has decided to implement Complete Lockdown on Sunday from July 5th Said Minister R Ashok.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X