ಬೆಂಗಳೂರು ನಗರದಲ್ಲಿ ಭಾನುವಾರದ ಕರ್ಫ್ಯೂ ಮತ್ತೆ ಜಾರಿ
ಬೆಂಗಳೂರು, ಜುಲೈ 21 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ಘೋಷಣೆ ಮಾಡಿದ್ದ ಲಾಕ್ ಡೌನ್ ಬುಧವಾರ ಮುಂಜಾನೆ 5 ಗಂಟೆಗೆ ಅಂತ್ಯಗೊಳ್ಳಲಿದೆ. ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.
Recommended Video
ಬೆಂಗಳೂರು ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಆಗುವುದಿಲ್ಲ. ಆದರೆ, ಭಾನುವಾರದ ಕರ್ಫ್ಯೂ ಮತ್ತೆ ಜಾರಿಗೆ ಬರಲಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಕರ್ನಾಟಕ ಸರ್ಕಾರ ಜುಲೈ 14ರಿಂದ 22ರ ಬೆಳಗ್ಗೆ 5ಗಂಟೆ ತನಕ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿತ್ತು. ಬುಧವಾರ ಬೆಳಗ್ಗೆ 5 ಗಂಟೆಗೆ ಲಾಕ್ ಡೌನ್ ಅವಧಿ ಮುಗಿಯಲಿದೆ.
ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಸೋಮವಾರ ಸರ್ಕಾರ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹ ಇದನ್ನು ಹೇಳಿದ್ದರು. ಲಾಕ್ ಡೌನ್ ಅವಧಿಯಲ್ಲಿ ಒಂದು ಭಾನುವಾರ ಕರ್ಫ್ಯೂ ನಿಂದ ನಗರಕ್ಕೆ ವಿನಾಯಿತಿ ಸಿಕ್ಕಿತ್ತು.

ಭಾನುವಾರದ ಕರ್ಫ್ಯೂ
ಆಗಸ್ಟ್ ತನಕ ಭಾನುವಾರದ ಕರ್ಫ್ಯೂವನ್ನು ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆಸಲು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಆದ್ದರಿಂದ, ಬೆಂಗಳೂರು ನಗರದಲ್ಲಿ ಲಾಕ್ ಡೌನ್ ತೆರವುಗೊಂಡರೂ ಶನಿವಾರ ರಾತ್ರಿಯಿಂದ ಕರ್ಫ್ಯೂ ಜಾರಿಗೆ ಬರಲಿದೆ.

ವಾಣಿಜ್ಯ ವಹಿವಾಟು ಬಂದ್
ಕರ್ನಾಟಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಭಾನುವಾರದ ಕರ್ಫ್ಯೂ ವೇಳೆ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ವಾಣಿಜ್ಯ ವಹಿವಾಟು ಸಹ ಬಂದ್ ಆಗಲಿದೆ. ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗಳಿಗೆ ಮಾತ್ರ ಅವಕಾಶ ಇರುತ್ತದೆ. ಅನಗತ್ಯವಾಗಿ ಸಂಚಾರ ನಡೆಸುವಂತಿಲ್ಲ.

ಶನಿವಾರ ರಾತ್ರಿಯಿಂದ ಕರ್ಫ್ಯೂ
ಕರ್ನಾಟಕದ ಸರ್ಕಾರದ ಮಾರ್ಗಸೂಚಿ ಅನ್ವಯ ಭಾನುವಾರದ ಕರ್ಫ್ಯೂ ಎಂದರೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ವೇಳೆ ಅಂತರ ಜಿಲ್ಲಾ ಬಸ್ ಸಂಚಾರ ಸಹ ಸ್ಥಗಿತಗೊಳ್ಳಲಿದೆ.

ಅಷ್ಟೇನೂ ಯಶಸ್ವಿಯಾಗಿಲ್ಲ
ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಭಾನುವಾರದ ಕರ್ಫ್ಯೂ ಜಾರಿಗೊಳ್ಳುತ್ತಿದೆ. ಆದರೆ, ಇದು ಹೇಳಿಕೊಳ್ಳುವ ಮಟ್ಟಿಗೆ ಯಶಸ್ವಿಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಜನರು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿಲ್ಲ.












Click it and Unblock the Notifications