ಬೆಂಗಳೂರು: ಮಾದರಿ ವಾರ್ಡ್ ನಿರ್ಮಾಣಕ್ಕೆ ಡಿಪಿಆರ್ ರೂಪಿಸಲು ಪಾಲಿಕೆ ಸೂಚನೆ

ಬೆಂಗಳೂರು, ಸೆಪ್ಟಂಬರ್ 16: ರಾಜಧಾನಿಯಲ್ಲಿ ಮಾದರಿ ವಾರ್ಡ್ ಸಿದ್ಧಗೊಳ್ಳುತ್ತಿದೆ. ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯ ಸುಂಕೆನಹಳ್ಳಿ ವಾರ್ಡ್ ಅನ್ನು ಮಾದರಿ ವಾರ್ಡ್ ರೂಪಿಸಲು ಕಾರ್ಯ ಸಾಧ್ಯತಾ ವರದಿ ಸಿದ್ಧಪಡಿಸಲು ಆಯುಕ್ತರಾದ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಮಂಗಳವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವುಗೊಳಿಸಿ, ನವೀನ ರೀತಿಯಲ್ಲಿ ಪಾದಚಾರಿ ನಿರ್ಮಾಣ, ಬ್ಲಾಕ್ ಸ್ಪಾಟ್ ಗಳ ತೆರವುಗೊಳಿಸಬೇಕು. ತ್ಯಾಜ್ಯ ನಿರ್ವಹಣೆ ಬಗ್ಗೆ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಬೇಕು. ಪಾದಚಾರಿ ವ್ಯಾಪಾರಿಗಳ ವ್ಯಾಪಾರಕ್ಕೆ ಸ್ಥಳ ನಿಗದಿಪಡಿಸುವುದು ಹಾಗೂ ಪಾದಚಾರಿ ಪಕ್ಕದಲ್ಲಿ ಸಸಿ ನೆಟ್ಟು ಹಸಿರೀಕರಣಗೊಳಿಸುವುದು ಸೇರಿದಂತೆ ಕಾರ್ಯ ಸಾಧ್ಯತಾ ವರದಿ (Action Plan) ಸಿದ್ದಪಡಿಸಿ ಸಲ್ಲಿಸಿ ಎಂದರು.

Sunkenehalli Ward to Be Developed as Model Ward in Bengaluru instruct to prepare DPR

ಗಾಂಧಿ ಬಜಾರ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಈಗಾಗಲೇ ಸ್ಥಳ ನಿಗದಿಪಡಿಸಲಾಗಿದೆ. ನಿಗದಿಪಡಿಸಿದ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಹೆಚ್ಚುವರಿಯಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಪಾದಚಾರಿ ಮಾರ್ಗಗಳಲ್ಲಿ ಪಾರ್ಕಿಂಗ್ ಮಾಡುವುದನ್ನು ತಡೆಯಬೇಕೆಂದು ತಿಳಿಸಿದರು.

ವಾರಕ್ಕೊಮ್ಮೆ ವಾಕಥಾನ್ ಮತ್ತು ತಿಂಗಳಿಗೊಮ್ಮೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಚಿಂತನೆ ನಡೆಸಲಾಗುವುದು. ಗಾಂಧಿ ಬಜಾರ್ ರಸ್ತೆಯಲ್ಲಿ ವಾರಕ್ಕೊಮ್ಮೆ ಸ್ಥಳೀಯರು ಮತ್ತು ವಿದ್ಯಾರ್ಥಿಗಳಿಗೆ ವಾಕಥಾನ್ ಹಾಗೂ ತಿಂಗಳಿಗೊಮ್ಮೆ ವಾಹನಗಳ ಸಂಚಾರ ಮುಕ್ತಗೊಳಿಸಿ ಸಾಂಸ್ಕೃತಿಕ ಚಟುವಟಿಕಗಳನ್ನು ಆಯೋಜಿಸಲು ಸಾಧಕ ಬಾಧಕಗಳ ಬಗ್ಗೆ ರೂಪುರೆಷೆ ಸಿದ್ದಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ಕಾರ್ ಪಾರ್ಕಿಂಗ್ ಕಟ್ಟಡ ಉದ್ಘಾಟನೆಗೆ ಸಿದ್ದತೆ

ಸ್ಮಾರ್ಟ್ ಸಿಟಿ ವತಿಯಿಂದ ಗಾಂಧಿ ಬಜಾರ್ ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಈ ಸಂಬಂಧ ಲೋಕಾರ್ಪಣೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ನಲ್ಲಿ ತಳ ಮಹಡಿ ಹಾಗೂ ನೆಲ ಮಹಡಿಯಲ್ಲಿ ವ್ಯಾಪಾರಕ್ಕಾಗಿ 50 ಮಳಿಗೆಗಳನ್ನು ನಿರ್ಮಿಸಲಾಗಿದೆ. ಮೊದಲನೇ ಮಹಡಿಯಿಂದ 4ನೇ ಮಹಡಿಯವರೆಗೆ ಕಾರ್ ಗಳ ನಿಲುಗಡೆಗೆ ವ್ಯವಸ್ಥೆ (ಒಂದು ಮಹಡಿಯಲ್ಲಿ 31 ವಾಹನ)ಮಾಡಿದ್ದು, ಒಟ್ಟು 124 ವಾಹನಗಳನ್ನು ನಿಲುಗಡೆ ಮಾಡಬಹುದು. ಒಂದು ಲಿಪ್ಟ್, 6 ಶೌಚಾಲಯ, ಸ್ಟೆಪ್ಸ್ ಹಾಗೂ ಮೇಲ್ಚಾವಣಿಯಲ್ಲಿ ಟೆನ್ಸೆಲ್ ರೂಫಿಂಗ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+