Get Updates
Get notified of breaking news, exclusive insights, and must-see stories!

BMTC: ಬಸ್‌ಗಳಲ್ಲಿ ಅಪ್ರಾಪ್ತರ ಓಡಾಟ, ಮಾರ್ಗಸೂಚಿ

ಬೆಂಗಳೂರು, ಜನವರಿ 25: ಬೆಂಗಳೂರು ನಗರದ ಜೀವನಾಡಿಯಾದ ಬಿಎಂಟಿಸಿ ಬಸ್‌ಗಳಲ್ಲಿ ಅಪ್ರಾಪ್ತರ ಓಡಾಟದ ಕುರಿತು ಚರ್ಚೆ ನಡೆಯುತ್ತಿದೆ. ಆದ್ದರಿಂದ ಬಿಎಂಟಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು (ಆ) ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಆದೇಶ ಬಸ್ಸುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ/ ಅನುಮಾನಾಸ್ಪದವಾಗಿ ಪ್ರಯಾಣಿಸುವುದನ್ನು ಗಮನಿಸಿ, ಸಂಬಂಧಪಟ್ಟದಲ್ಲಿ ಗಮನಕ್ಕೆ ತರುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

Supervision Of Minors In BMTC Bus Guidelines

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಪ್ರಯಾಣಿರಿಕರಿಗೆ ದಕ್ಷ, ಉತ್ತಮ, ಸುಲಭ ಸಾರಿಗೆ ಸೇವೆಯನ್ನು ಒದಗಿಸುವ ಧ್ಯೇಯದೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ.

ಪ್ರತಿದಿನ 5,575 ಬಸ್ಸುಗಳಿಂದ 57,699 ಸುತ್ತುವಳಿಗಳನ್ನು 11.35 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ವಿಶ್ವಾಸನೀಯ ಸೇವೆಯನ್ನು ಒದಗಿಸುವಲ್ಲಿ ಸಂಸ್ಥೆಯು ಮುಂಚೂಣಿಯಲ್ಲಿದ್ದು, ಇದರಲ್ಲಿ ಸಂಸ್ಥೆಯ ಚಾಲನಾ ಸಿಬ್ಬಂದಿಗಳ ಪಾತ್ರ ಅಧಿಕವಾಗಿರುತ್ತದೆ.

ಇತ್ತೀಚಿನ ದಿನಗಳಲ್ಲಿ ಪೋಷಕರ/ ಪಾಲಕರ ಒತ್ತಡದ ಬದುಕು, ವೇಳೆಯ ಅಭಾವ, ಮಕ್ಕಳ ಮೊಂಡುತನ, ಅಪ್ರಬುದ್ಧತೆ ಇತ್ಯಾದಿ ಕಾರಣಗಳಿಂದ ಅಪ್ರಾಪ್ತ ವಯಸ್ಸಿನ ಮಕ್ಕಳು ಪಾಲಕರಿಗೆ ಗೊತ್ತಾಗದಂತೆ ಮನೆಯಿಂದ ಹೊರಗೆ ಹೋಗುತ್ತಿರುವುದರಿಂದ, ಪೋಷಕರು/ ಪಾಲಕರಿಗೆ ಆತಂಕವಾಗುತ್ತಿರುವುದಲ್ಲದೇ ಸಮಾಜದ ಸ್ವಾಸ್ಥ್ಯ ಹಾಳಾಗುವುದಕ್ಕೂ ಪ್ರಮುಖ ಕಾರಣವಾಗುತ್ತಿದೆ.

ಆದ್ದರಿಂದ ಬಸ್ಸುಗಳಲ್ಲಿ ಪಾಲಕರ ರಹಿತ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಚಾಲನಾ ಸಿಬ್ಬಂದಿಗಳು ಕೆಳಕಂಡಂತೆ ಕ್ರಮ
ವಹಿಸಲು ಸೂಚಿಸಿದೆ.

ಕೈಗೊಳ್ಳಬೇಕಾದ ಕ್ರಮಗಳು

* ಬಸ್ಸುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ (ಶಾಲಾ ಸಮಯದಲ್ಲಿ ಸಮವಸ್ತ್ರದಲ್ಲಿರುವ ಮಕ್ಕಳನ್ನು ಹೊರತುಪಡಿಸಿ), ಪ್ರಯಾಣಿಸುತ್ತಿರುವುದನ್ನು ಗಮನಿಸುವುದು.

* ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದ್ದಲ್ಲಿ, ಅನುಮಾನಾಸ್ಪದವಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಗುರುತಿಸಿ, ಪಾಲಕರ ಬಗ್ಗೆ ವಿಚಾರಿಸುವುದು.

* ಮಕ್ಕಳು ಗೊಂದಲದ ಉತ್ತರವನ್ನು ನೀಡಿದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡುವುದು ಅಥವಾ ಹತ್ತಿರದ ಪೊಲೀಸ್‌ ಠಾಣೆಗೆ ಸದರಿ ಮಕ್ಕಳನ್ನು ಕರೆದೊಯ್ಯುವುದು ಅಥವಾ ಮಕ್ಕಳಿಂದ ಪಾಲಕರ ದೂರವಾಣಿ ಸಂಖ್ಯೆ ಪಡೆದು ಮಾಹಿತಿ ನೀಡುವುದು.

ತಮ್ಮ ವಲಯ/ ಘಟಕ ವ್ಯಾಪ್ತಿಯ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಮೇಲ್ಕಂಡ ಅಂಶಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಕುರಿತು ಎಲ್ಲಾ ವಲಯಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲಾ ವಲಯಗಳ ವಿಭಾಗೀಯ ಸಂಚಾರ ಅಧಿಕಾರಿಗಳು, ಹಿರಿಯ/ ಘಟಕ ವ್ಯವಸ್ಥಾಪಕರು, ಘಟಕ-2 ರಿಂದ 51 ಬೆಂಮಸಾಸಂಸ್ಥೆ, ಬೆಂಗಳೂರು ಇವರಿಗೆ ಆದೇಶದ ಪ್ರತಿ ಕಳಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+