Money Laundering Case: ಇಡಿ 120B ಪ್ರಕರಣ ರದ್ದುಗೊಳಿಸಿದ ಸುಪ್ರೀಂ: ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್!
ಬೆಂಗಳೂರು ಮಾರ್ಚ್ 5: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ ಶಿವಕುಮಾರ್ ಅವರ ಮೇಲಿದ್ದ ಇಡಿ 120 B ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಲಾಗಿದೆ. ಇದರಿಂದಾಗಿ ಇಡಿ ತನಿಖೆಯಿಂದ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಶಿವಕುಮಾರ್ ಅವರಿಗೆ ಸೇರಿದ ದಿಲ್ಲಿಯ ಅಪಾರ್ಟ್‌ವೊಂದರಲ್ಲಿ 8.59 ಕೋಟಿ ರೂಪಾಯಿ ನಗದು ವಶಕ್ಕೆ ಪಡೆದಿದ್ದ ಜಾರಿ ನಿರ್ದೇಶನಾಲಯವು, ಅನಂತರ ಪ್ರಕರಣ ದಾಖಲಿಸಿತ್ತು. 2018ರಲ್ಲಿ ದಾಖಲಾದ ಪ್ರಕರಣದ ಆಧಾರದಲ್ಲಿ 2019ರ ಸೆಪ್ಟೆಂಬರ್ 3ರಂದು ಶಿವಕುಮಾರ್ ಅವರನ್ನು ಇ.ಡಿ ಬಂಧಿಸಿತ್ತು. ದೆಹಲಿ ಹೈಕೋರ್ಟ್ 2019ರ ಅಕ್ಟೋಬರ್ 23ರಂದು ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಆದೇಶಿಸಿತು. ಅನಂತರ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದರು.













Click it and Unblock the Notifications