ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ 299 ಕಟ್ಟಡಗಳು ಸಕ್ರಮ

|
Google Oneindia Kannada News

ಬೆಂಗಳೂರು, ಮೇ 20: ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ 15ನೆಯ ವರದಿಯನ್ನು ಅಂಗೀಕರಿಸಿ 299 ಕಟ್ಟಡಗಳನ್ನು ಸಕ್ರಮಗೊಳಿಸಿ ಸರ್ವೋಚ್ಛ ನ್ಯಾಯಾಲಯವು ಆದೇಶ ಹೊರಡಿಸಿದೆ. ಇಲ್ಲಿಯವರೆಗೆ ಒಟ್ಟು 3124 ಕಟ್ಟಡಗಳು ಸಕ್ರಮಗೊಂಡಿವೆ.

ನ್ಯಾಯಾಲಯದ ಆದೇಶದಂತೆ ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಕಟ್ಟಡಗಳ ಮಾಲೀಕರಿಗೆ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ನೇತೃತ್ವದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಕ್ರಮ ಪ್ರಮಾಣ ಪತ್ರವನ್ನು ವಿತರಿಸುವಂತೆಯೂ ಹಾಗೂ ಕಾನೂನು ರೀತ್ಯ ಬೆಟರ್ ಮೆಂಟ್ ಶುಲ್ಕ ವಿಧಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಕ್ರಮಗೊಂಡ ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಮೇ 13 ರಿಂದ ವಿತರಿಸಲು ಆರಂಭಿಸಿದೆ. ಸೋಮವಾರ ದಿಂದ ಶುಕ್ರವಾರದ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 3;00 ಗಂಟೆಯವರೆಗೆ ಸಕ್ರಮ ಪ್ರಮಾಣ ಪತ್ರ ವಿತರಣೆ ಕಾರ್ಯ ನಡೆಯುತ್ತಿದ್ದು, ಆಯಾ ದಿನಕ್ಕೆ ಹಾಗೂ ಸಮಯಕ್ಕೆ ಸಾರ್ವಜನಿಕರು ಹಾಜರಾಗುವ ಕುರಿತು ಎಸ್.ಎಮ್.ಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ.

Supreme Court regularises 299 houses in Dr Shivaram Karanth Layout

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್. ಸಾಫ್ಟ್ ಕಾಪಿ ಹಾಗೂ ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

14ನೆಯ ವರದಿಯನ್ನು ಅಂಗೀಕರಿಸಿ:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ 14ನೆಯ ವರದಿಯನ್ನು ಅಂಗೀಕರಿಸಿ 480 ಕಟ್ಟಡಗಳನ್ನು ಸಕ್ರಮಗೊಳಿಸಿ ಸರ್ವೋಚ್ಛ ನ್ಯಾಯಾಲಯವು ಆದೇಶ ಹೊರಡಿಸಿತ್ತು. 2018 ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳ ಮೇಲೆ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ನೀಡಿದ 14ನೇಯ ವರದಿಯನ್ನು ಅಂಗೀಕರಿಸಿದ ಸರ್ವೋಚ್ಛ ನ್ಯಾಯಾಲಯ ಈ ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ.

Supreme Court regularises 299 houses in Dr Shivaram Karanth Layout

ಯಾವ ದಾಖಲಾತಿಗಳು ಅಗತ್ಯ?

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್., ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Recommended Video

ನಮ್ಮ ಲೆಕ್ಕಾಚಾರವನ್ನು ಮ್ಯಾಕ್ಸ್ವೆಲ್ ಹೇಗೆ ಉಲ್ಟಾ ಮಾಡಿದ್ರು ಅಂತ ಹೇಳಿದ ಹಾರ್ದಿಕ್ | OneIndia Kannada

English summary
Dr Shivaram Karanth Layout of the Bangalore Development Authority (BDA), the Supreme Court ordered the regularisation of 299 houses. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X