ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ
Bengaluru-Mysuru National Highway: ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲಿದೆ. ಇನ್ನೂ ಈ ಹಿನ್ನೆಲೆ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್‌ನ ರಸ್ತೆ ಸುರಕ್ಷತಾ ಸಲಹಾ ಸಮಿತಿ ತಂಡ ಪರಿಶೀಲನೆ ನಡೆಸಿತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣ ಮಾಡಲು ತೆಗೆದುಕೊಳ್ಳಬೇಕಾದ ಹೆಚ್ಚಿನ ಕ್ರಮಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಯಿತು. ಮೊದಲಿಗೆ ಎಐ ಕ್ಯಾಮೆರಾಗಳನ್ನು ಅಳವಡಿಕೆ ನಂತರ ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳು ಕಡಿಮೆಯಾಗಿದೆ. ಈ ಬಗ್ಗೆ ಪರಿಶೀಲಿಸಿ, ಪ್ರಶಂಶೆ ವ್ಯಕ್ತಪಡಿಸಿದರು. ಇನ್ನೂ ಬಳಿಕ ರಸ್ತೆ ಅಪಘಾತಗಳು ಹೆಚ್ಚಳ ಆಗಿರುವ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಪಟ್ಟಿ ಮಾಡಿದರು.

ಹೆದ್ದಾರಿಯಲ್ಲಿ ಅಳವಡಿಕೆ ಮಾಡಿರುವ ಎಐ ಕ್ಯಾಮೆರಾಗಳ ಸ್ಥಿತಿಯ ಪರಿಶೀಲನೆ ನಡೆಸಿ ಕ್ಯಾಮೆರಾಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುಚಂತೆ ಸೂಚಿಸಲಾಯಿತು. ಕ್ಯಾಮೆರಾಗಳು ಸರಾಗವಾಗಿ ಕಾರ್ಯನಿರ್ವಹಿಸಲು ಡಿವೈಸ್‌ಗಳ ತಾಂತ್ರಿಕ ಅಪ್ಡೇಟ್‌ಗಳನ್ನು ಮಾಡುತ್ತಿರಬೇಕು. ಈ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ನಡೆಯಬೇಕು ಎಂದು ಸೂಚಿಸಿದರು.
ಅಗತ್ಯ ಕ್ರಮಗಳ ಬಗ್ಗೆ ಸೂಚನೆಗಳು
* ಹೆದ್ದಾರಿಯಲ್ಲಿ ವಾಹನದ ಹೆಚ್ಚಿನ ವೇಗವನ್ನು ನಿಯಂತ್ರಿಸಲು ಡಿಜಿಟಲ್ ವೇಗ ನಿಯಂತ್ರಣಗಳನ್ನು ಅಳವಡಿಕೆ ಮಾಡಬೇಕು. * ವೇಗ ನಿಯಂತ್ರಣ ಮಾನಿಟರಿಂಗ್ ವ್ಯವಸ್ಥೆಯಲ್ಲಿನ ಕ್ರಮಗಳನ್ನು ಇನನೂ ಕಠಿಣಗೊಳಿಸಬೇಕು.
* ಹೆಚ್ಚು ಅಪಘಾತಗಳು ನಡೆಯುವ ಪ್ರದೇಶಗಳಲ್ಲಿ, ಚುಟುಕು ಮತ್ತು ಸ್ಪಷ್ಟ ಗಾತ್ರದ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಬೇಕು.
* ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ನಡೆಸಬೇಕು.
* ಹೆಚ್ಚಿನ ವೇಗ ನಿಯಂತ್ರಣಕ್ಕೆ ರೋಡ್ ಲೈನ್ ಡಿಸಪ್ಲೀನ್ ಕ್ರಮಗಳನ್ನು ಪಾಲಿನೆ ಮಾಡಬೇಕು ಸೂಚಿಸಿದರು.
ರಸ್ತೆಗಳ ದುರಸ್ತಿ: ಮುಂಗಾರು ವೇಳೆ ಭಾರೀ ಮಳೆ ಸುರಿದ ಪರಿಣಾಮ ಹಲವೆಡೆ ಹೆದ್ದಾರಿಗಳು ದುರಸ್ತಿ ಹಂತಕ್ಕೆ ತಲುಪಿದ್ದು, ಇನ್ನೂ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಈ ನಡುವೆಯೇ ಕೆಲವೆಡೆ ವೇಗ ಪಡೆದುಕೊಂಡಿವೆ. ಈ ಸಾಲಿಗೆ ಮಲ್ಪೆ-ಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ಸೇರಿಕೊಂಡಿದೆ. ಈ ಕುರಿತು ಬಿಗ್ ಅಪ್ಡೇಟ್‌ವೊಂದು ಇಲ್ಲಿದೆ ತಿಳಿಯಿರಿ.
ರಾಷ್ಟ್ರೀಯ ಹೆದ್ದಾರಿ ಜಾಲವೂ ವಿಸ್ತರಣೆ ಆಗುತ್ತಲಿದೆ. ಮತ್ತೊಂದೆಡೆ ಮಳೆಯಿಂದ ಹಾಳಾಗಿರುವ ಹೆದ್ದಾರಿಗಳ ಕಾಮಗಾರಿಗಳು ಕೂಡ ನಡೆಯುತ್ತಿವೆ. ಇದೀಗ ಮಲ್ಪೆ-ಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗ ಪಡೆದುಕೊಂಡಿದೆ.
ಮಳೆಗಾಲ ಬಂತೆಂದರೆ ಸಾಕು ಕರಾವಳಿ ಭಾಗದಲ್ಲಿ ಕೆಲ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುತ್ತಲೇ ಇರುತ್ತವೆ. ಪರಿಣಾಮ ಗುಡ್ಡದ ಮಣ್ಣು ಹೆದ್ದಾರಿಗೆ ಬಿದ್ದು, ವಾಹನ ಸವಾರರು ಸಮಸ್ಯೆಗಳನ್ನು ಎದುರಿಸುತ್ತಾ ಬರುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕೇಳಿದರೂ ಅಧಿಕಾರಿಗಳು ಯಾವುದೋ ನೆಪ ಹೇಳಿ ಸುಮ್ಮನಾಗಿಬಿಡುತ್ತಾರೆ. ಆದರೆ, ಯಾರಾದರೂ ಗಣ್ಯ ವ್ಯಕ್ತಿಗಳು ಬಂದಾಗ ಮಾತ್ರ ಹಾಳಾದ ರಸ್ತೆಗಳ ದುರಸ್ತಿಗೆ ವೇಗ ನೀಡುತ್ತಾರೆ ಎಂದು ಈ ಭಾಗದ ಜನರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ತಕ್ತಪಡಿಸುತ್ತಿದ್ದಾರೆ.
ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ಕ್ಕೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದ ಹಿನ್ನೆಲೆ ನಗರದ ರಸ್ತೆಗಳ ದುರಸ್ತಿ ಕಾರ್ಯಕ್ಕೆ ವೇಗ ನೀಡಲಾಗಿತ್ತು.
ಮೋದಿ ಭೇಟಿ ಹಿನ್ನೆಲೆ ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ವೇಗ ನೀಡಲಾಗಿತ್ತು. ಕರಾವಳಿ ಬೈಪಾಸ್ ಬಳಿ ರಸ್ತೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಕೃಷ್ಣಮಠದವರೆಗೂ ರಾಷ್ಟ್ರೀಯ ಹೆದ್ದಾರಿಯಲ್ಲೇ ವಾಹನ ಸಂಚಾರ ಮಾಡಬೇಕಿತ್ತು. ಆದ್ದರಿಂದ ಮಲ್ಪೆ-ಮೊಳಕಾಲ್ಮೂರು ರಸ್ತೆ ಕಾಮಗಾರಿಗೆ ವೇಗ ನೀಡಲಾಗಿದೆ ಎಂದು ತಿಳಿದುಬಂದಿತ್ತು. ಇದೆ.
ಮುಂಗಾರು ವೇಳೆ ಉಡುಪಿ ಜಿಲ್ಲೆಯಲ್ಲಿ ಈ ಭಾರೀ ಅತಿ ಹೆಚ್ಚು ಮಳೆಯಾಗಿದೆ. ಮೇ ತಿಂಗಳ ಮಧ್ಯದಿಂದಲೂ ನಿರಂತರ ಸುರಿದ ಮಳೆಯಿಂದಾಗಿ, ರಾಷ್ಟ್ರೀಯ ಹೆದ್ದಾರಿ ಅಷ್ಟೇ ಅಲ್ಲದೆ, ಲೋಕೋಪಯೋಗಿ ಹಾಗೂ ಗ್ರಾಮ ಪಂಚಾಯತ್ ರಸ್ತೆಗಳು ಸಹ ಹಾಳಾಗಿವೆ. ಇದರಿಂದ ವಾಹನ ಸವಾರರಿಗೆ ಪೀಕಲಾಟ ಶುರುವಾಗಿದ್ದು, ಇದನ್ನು ದುರಸ್ತಿಪಡಿಸುವಂತೆ ಎಷ್ಟೇ ಕೇಳಿಕೊಂಡರೂ ಜಿಲ್ಲಾಡಳಿತ ಸ್ಪಂದಿಸಿರಲಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು.
ಅಷ್ಟೇ ಅಲ್ಲದೆ, ಅಪಘಾತಗಳ ಸಂಖ್ಯೆ ಸಹ ಹೆಚ್ಚಾಗಿತ್ತು. ಮಳೆ ಪ್ರಮಾಣ ತಗ್ಗಿದ ಬಳಿಕ ಇನ್ಮೇಲಾದರೂ ರಸ್ತೆ ಕಾಮಗಾರಿ ಮಾಡಬಹುದಲ್ಲ ಎಂದು ಸಾರ್ವಜನಿಕರು ಪ್ರಶ್ನಿಸುತ್ತಲೇ ಇದ್ದರು. ಇನ್ನೂ ಮಳೆ ಹಾನಿ ಪರಿಹಾರಕ್ಕೆ ಹಣ ಇದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಆದರೆ, ರಸ್ತೆ ಮಾತ್ರ ದುರಸ್ತಿ ಆಗುತ್ತಿಲ್ಲ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications