ರೈತರ ಬೆಂಬಿಲಿಸಿ ಜನವರಿ 20ರಂದು ಬೃಹತ್ ಹೋರಾಟ: ಡಿಕೆ ಶಿವಕುಮಾರ್

ಬೆಂಗಳೂರು,ಜನವರಿ 19: ದೇಶದ ರೈತರನ್ನು ಬೆಂಬಲಿಸಿ ಜನವರಿ 20ರಂದು ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರೈತರ ಆಗ್ರಹದಲ್ಲಿ ನ್ಯಾಯವಿದೆ. ಕಾಂಗ್ರೆಸ್ ಪಕ್ಷದ ಪರವಾಗಿ ನಾವೆಲ್ಲರೂ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜನವರಿ 20 ರಂದು ಬೃಹತ್ ಹೋರಾಟ ನಡೆಸಲಿದ್ದೇವೆಂದು ತಿಳಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರೊಂದಿಗೆ ನಾವು ನಿಲ್ಲುತ್ತೇವೆ. ಸುಪ್ರೀಂಕೋರ್ಟ್ ಕಾಯ್ದೆಗೆ ತಡೆ ನೀಡಿದೆಯಷ್ಟೇ. ರದ್ದುಪಡಿಸಿಲ್ಲ. ಕಾಯ್ದೆ ರದ್ದುಪಡಿಸುವಂತೆ ಕಾಂಗ್ರೆಸ್ ಆಗ್ರಹಿಸಲಿದೆ ಎಂದರು.

 Supreme Court Shouldn’t Stay But Scrap Farm Laws

ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ .

ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ. ಇದಕ್ಕಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕು. ಯಾವುದೇ ವ್ಯಕ್ತಿಯನ್ನು ಆರಾಧಿಸುವುದಕ್ಕಿಂತ ಪಕ್ಷದ ಪೂಜೆ ಮತ್ತು ಅದರ ನೀತಿಗಳನ್ನು ಪಾಲಿಸುವುದು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಎಲ್ಲರೂ ಸಮಾನರು ಎಂದು ಹೇಳಿದರು.

ರೈತರು, ದೀನ ದಲಿತರು ಮತ್ತು ಕಾರ್ಮಿಕ ವರ್ಗ ಸೇರಿದಂತೆ ಸಾಮಾನ್ಯರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಕಾಂಗ್ರೆಸ್ ಕಾರ್ಯಕರ್ತರು ಜನರ ಬಳಿಗೆ ಹೋಗಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವುಗಳನ್ನು ಪರಿಹರಿಸಲು ಹೋರಾಟ ನಡೆಸಬೇಕು ಎಂದು ಶಿವಕುಮಾರ್ ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+