ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ
ಬೆಂಗಳೂರು, ಡಿ.18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಆದೇಶಕ್ಕೆ ಸುಪ್ರೀಂಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು.
ರಾಜ್ಯ ಚುನಾವಣಾ ಆಯೋಗ ಹಾಗೂ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದ ಪ್ರಮುಖ ಅರ್ಜಿದಾರರಾದ ಎಂ ಶಿವರಾಜು, ಅಬ್ದುಲ್ ವಾಜಿದ್ ಮತ್ತು ರವಿ ಜಗನ್ ಅವರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಪೀಠವು ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಮೂರನೇ ತಿದ್ದುಪಡಿ ಕಾಯಿದೆ - 2020ಯ (ತಿದ್ದುಪಡಿ ಕಾಯಿದೆ) ಸಿಂಧುತ್ವವನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 4ರಂದು ಚುನಾವಣೆ ನಡೆಸಲು ಸೂಚಿಸಿದ್ದಲ್ಲದೆ, ಹಾಲಿ ಬೆಂಗಳೂರು ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243ಕ್ಕೆ ಏರಿಕೆ ಮಾಡಲು ಅಗತ್ಯ ತಿದ್ದುಪಡಿಗೆ ನಿರ್ದೇಶಿಸಿತ್ತು.

ತಿದ್ದುಪಡಿ ಕಾಯಿದೆಯ ಅನ್ವಯ ವಾರ್ಡ್‌ಗಳ ಸಂಖ್ಯೆಯನ್ನು198 ರಿಂದ 243ಕ್ಕೆ ಏರಿಕೆ ಮಾಡಿದ್ದರೂ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಿರ್ದೇಶಿಸಿದೆ ಎಂದು ರಾಜ್ಯ ಸರ್ಕಾರವು ವಕೀಲ ಶುಭ್ರಾಂಶು ಪಧಿ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿ, ನ್ಯಾಯಯುತ ಮತ್ತು ಸರ್ವಾನುಮತದಿಂದ ಜಾರಿಗೆ ತರಲಾದ ಶಾಸನಕ್ಕೆ ವಿರುದ್ಧವಾದ ರೀತಿಯಲ್ಲಿ ಚುನಾವಣೆ ನಡೆಸಲು ಹೈಕೋರ್ಟ್ ರಾಜ್ಯಕ್ಕೆ ನಿರ್ದೇಶನ ನೀಡಿದೆ ಎಂದು ವಾದಿಸಿದ್ದರು.
1976 ಕೆಎಂಸಿ ಕಾಯಿದೆಗೆ ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಈ ಹಿಂದಿನ ಚುನಾಯಿತ ಕೌನ್ಸಿಲ್ ಅವಧಿ ಮುಗಿಯುವ ಮುನ್ನ (2020ರ ಸೆಪ್ಟೆಂಬರ್ 10) ನಡೆಸಿರಲಿಲ್ಲ.
Recommended Video
ದೇಶದ ಪ್ರಮುಖ ಮಹಾನಗರಗಳಲ್ಲಿ ಒಂದಾದ ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ವಾರ್ಡ್‌ಗಳ ಸಂಖ್ಯೆಯನ್ನು ಕನಿಷ್ಠ 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕೆಎಂಸಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ.












Click it and Unblock the Notifications