ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತ ಅಗಲುವಿಕೆಯಿಂದ ಉತ್ತಮ ರಾಜಕೀಯ ಬಡವಾಗಿದೆ: ಸುರೇಶ್ ಕುಮಾರ್

|
Google Oneindia Kannada News

Recommended Video

Ananth Kumar Demise : ಅನಂತ್ ಕುಮಾರ್ ಸಾವಿಗೆ ಸಂತಾಪ ಸೂಚಿಸಿದ ಬಿಜೆಪಿ ನಾಯಕ ಸುರೇಶ್ ಕುಮಾರ್ |Oneindia Kannada

ಬೆಂಗಳೂರು, ನವೆಂಬರ್ 12: ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಮಲ್ಲೇಶ್ವರ ಶಾಸಕ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಹಲವು ವರ್ಷದ ಸ್ನೇಹ ಅವರ ಅಗಲುವಿಕೆಯ ನೋವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.

ಮನಸ್ಸು, ಹೃದಯ ತುಂಬಾ ಭಾರವಾಗಿದೆ . ಪ್ರೀತಿಯ ಸ್ನೇಹಿತ , ಸಹೋದರ , ಅನಂತಕುಮಾರ್ ಇನ್ನಿಲ್ಲವೆಂಬ ಸತ್ಯ ಎಷ್ಟೊಂದು ಕಠೋರ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ನನ್ನ 32 ವರ್ಷದ ರಾಜಕೀಯ ಕ್ಷೇತ್ರದಲ್ಲಿನ ಗೆಳೆಯ ಅನಂತ ಕುಮಾರ್ ಇನ್ನಿಲ್ಲ ಎಂದು ಇದೀಗ ತಿಳಿದು‌ ಈ ಬೆಳಗ್ಗಿನ ಜಾವ ತೀವ್ರ ಆಘಾತವಾಗಿದೆ.‌ ಅನಂತ್ ಇಲ್ಲದ ಬಿಜೆಪಿಯನ್ನು ಊಹಿಸಲಿಕ್ಕೂ ಆಗುವುದಿಲ್ಲ.

ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

ಜಯನಗರದ ನಮ್ಮ‌ ವಿಜಯಕುಮಾರ್ ರವರನ್ನು‌ ಕಳೆದುಕೊಂಡ ಕೆಲವೇ ತಿಂಗಳುಗಳಲ್ಲಿ ನಾವು‌ ನಮ್ಮ ಅನಂತ ಕುಮಾರರನ್ನೂ ಕಳೆದುಕೊಂಡಿದ್ದೇವೆ.‌ ಉತ್ತಮ ರಾಜಕೀಯ ಇನ್ನಷ್ಟು ಬಡವಾಗಿದೆ ಎಂದು ನೋವಿನಿಂದ ಬರೆದುಕೊಂಡಿದ್ದಾರೆ.

ರಾಜ್ಯ ನಾಯಕರ ಮನದಲ್ಲಿ 'ಅನಂತ'ಭಾವರಾಜ್ಯ ನಾಯಕರ ಮನದಲ್ಲಿ 'ಅನಂತ'ಭಾವ

ಅನಂತ ಕುಮಾರ್ ಸಾವಿನ ಸುದ್ದಿ ತಿಳಿದು ಆಘಾತ

ಅನಂತ ಕುಮಾರ್ ಸಾವಿನ ಸುದ್ದಿ ತಿಳಿದು ಆಘಾತ

ನನ್ನ 32 ವರ್ಷದ ರಾಜಕೀಯ ಕ್ಷೇತ್ರದಲ್ಲಿನ ಗೆಳೆಯ ಅನಂತ ಕುಮಾರ್ ಇನ್ನಿಲ್ಲ ಎಂದು ಇದೀಗ ತಿಳಿದು‌ ಈ ಬೆಳಗ್ಗಿನ ಜಾವ ತೀವ್ರ ಆಘಾತವಾಯಿತು. ಅನಂತ್ ಇಲ್ಲದ ಬಿಜೆಪಿಯನ್ನು ಊಹಿಸಲಿಕ್ಕೂ ಸಾಧ್ಯವಿಲ್ಲ.‌

ಕೇಂದ್ರ ಸರಕಾರದಲ್ಲಿ ಅನ್ಯಾನ್ಯ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಸಚಿವರಾಗಿದ್ದವರು ಅನಂತ ಕುಮಾರ್.

1986 ರ ಸೆಪ್ಟೆಂಬರ್ ಇರಬೇಕು, ಸಂಘದ ಕಾರ್ಯಾಲಯ ಕೇಶವ ಕೃಪದಲ್ಲಿ ಭೇಟಿಯಾಗಿ ಅನಂತ್ ಕುಮಾರ್ ಇನ್ನು ಮುಂದೆ "ನಿಮ್ಮೊಡನೆ ಬಿಜೆಪಿಯಲ್ಲಿ ಕಾರ್ಯ ಮಾಡುತ್ತೇನೆ" ಎಂಬ ಸುದ್ದಿ ತಿಳಿಸಿದ್ದರು.‌

ವಿದ್ಯಾರ್ಥಿ ಪತಿಷತ್ತಿನ ನಾಯಕರಾಗಿದ್ದಗಿನಿಂದ ಒಡನಾಟ

ವಿದ್ಯಾರ್ಥಿ ಪತಿಷತ್ತಿನ ನಾಯಕರಾಗಿದ್ದಗಿನಿಂದ ಒಡನಾಟ

ಅದಕ್ಕೆ ಮುನ್ನ ಅವರನ್ನು ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನಾಗಿ ನೋಡಿದ್ದೆ. ಅಂದಿನಿಂದ ನಮ್ಮ‌ಒಡನಾಟ.‌ ಎಷ್ಟೋ ವಿಚಾರಗಳನ್ನು ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುತ್ತಲೇ ಚರ್ಚಿಸಿದ್ದೇವೆ.‌ ಅನೇಕ ಕಾರ್ಯಕ್ರಮಗಳಲ್ಲಿ ಜೊತೆಗೂಡಿದ್ದೇವೆ.

'ತಾನು ನಿರ್ಮಿಸಿದ ರಾಕೆಟ್ ಎಲ್ಲಿಗೆ ತಲುಪಬೇಕು ಅಂತ ದೇವರೇ ನಿರ್ಧರಿಸುತ್ತಾನೆ''ತಾನು ನಿರ್ಮಿಸಿದ ರಾಕೆಟ್ ಎಲ್ಲಿಗೆ ತಲುಪಬೇಕು ಅಂತ ದೇವರೇ ನಿರ್ಧರಿಸುತ್ತಾನೆ'

ಅನಂತ ಕುಮಾರ್ ಸೋಲಿಲ್ಲದ ಸರದಾರ

ಅನಂತ ಕುಮಾರ್ ಸೋಲಿಲ್ಲದ ಸರದಾರ

1996 ರಿಂದ 1998, 1999, 2004, 2009, 2014.... ಹೀಗೆ 6 ಬಾರಿ ಬೆಂಗಳೂರಿನ ದಕ್ಷಿಣ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಅನಂತ್ ಸೋಲಿಲ್ಲದ ಸರದಾರನೆಂದೇ ಪ್ರಸಿದ್ಧ.

ಅವರಿಗಿದ್ದ ಹಾಸ್ಯಪ್ರಜ್ಞೆ, ಸೂಕ್ಷ್ಮತೆ, ರಾಜಕೀಯ ಪ್ರೌಢಿಮೆ, ಭಾಷಣಕಲೆ.......ಇನ್ನು ಕೇವಲ ನೆನಪಷ್ಟೇ! ಮೊನ್ನೆ ತಾನೇ ಪಬ್ಲಿಕ್ ಟಿವಿ ರಂಗ ಹೇಳುತ್ತಿದ್ದರು. "ದೆಹಲಿಯ ಅನಂತಕುಮಾರ್ ಮನೆ ಕರ್ನಾಟಕದವರಿಗೆಲ್ಲಾ ಒಂದು ಮನೆಯಾಗಿತ್ತು.‌ ಕರ್ನಾಟಕದ ಯಾವುದೇ ಸಮಸ್ಯೆ ಪರಿಹಾರ, ಕಡತ ಪ್ರಗತಿ, ಕಾರ್ಯ ವಾಗಬೇಕಾದರೆ ಅನಂತ್ ಕಚೇರಿ ದೊಡ್ಡ ಸಾಧನವಾಗಿತ್ತು.‌ಅವರಿಗೆ ಹೇಳಿಬಿಟ್ಟರೆ ನಾವು ನಿಶ್ಚಿಂತೆಯಿಂದ ಯಿರಬಹುದಿತ್ತು" ಎಂದು.‌

ಬಡವರಿಗಾಗಿ ಸಾಕಷ್ಟು ಯೋಜನೆ

ಬಡವರಿಗಾಗಿ ಸಾಕಷ್ಟು ಯೋಜನೆ

ಬಡ ಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ಅವರು ಒತ್ತುಕೊಟ್ಟ ಜನೌಷಧಿ ಕೇಂದ್ರಗಳು, ಅತ್ಯಂತ ಕಡಿಮೆ ದರದ ಹೃದಯ ರೋಗ ಸಂಬಂಧಿ ಸ್ಟಂಟ್ ಗಳು‌ ಅನಂತ ಕುಮಾರ್ ರವರ ದೊಡ್ಡ ಕೊಡುಗೆ.

ದೆಹಲಿಯ ಕನ್ನಡ ಸಂಘಕ್ಕಂತೂ ಅನಂತ ಕುಮಾರ್ ರವರ ಸಹಕಾರ ಅನನ್ಯ.‌ 1988 ರಲ್ಲಿ ನನ್ನ‌ ಮದುವೆಯ ಪುಟ್ಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಪ್ರಮುಖರಲ್ಲಿ ಅನಂತ್ ಕುಮಾರ್‌ ಸಹ ಒಬ್ಬರು.‌

'ನೀಲಿಕಣ್ಣಿನ ಹುಡುಗ'ನ ಒಡನಾಟದ ಬಗ್ಗೆ ದಿನೇಶ್ ಅಮಿನ್ ಮಟ್ಟು ಭಾವುಕ ಮಾತುಗಳು... 'ನೀಲಿಕಣ್ಣಿನ ಹುಡುಗ'ನ ಒಡನಾಟದ ಬಗ್ಗೆ ದಿನೇಶ್ ಅಮಿನ್ ಮಟ್ಟು ಭಾವುಕ ಮಾತುಗಳು...

ಬಿಜೆಪಿ ಅಗ್ರಗಣ್ಯ ನಾಯಕನನ್ನು ಕಳೆದುಕೊಂಡಿದೆ

ಬಿಜೆಪಿ ಅಗ್ರಗಣ್ಯ ನಾಯಕನನ್ನು ಕಳೆದುಕೊಂಡಿದೆ

ಕರ್ನಾಟಕ ರಾಜ್ಯದ ಬಿಜೆಪಿ ಇಂದು ಅಗ್ರಗಣ್ಯ ನಾಯಕನನ್ನು ಕಳೆದುಕೊಂಡಿದೆ.‌ ಕಳೆದ ಕೆಲವು ತಿಂಗಳಿಂದ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸುದ್ದಿ ಕೇಳಿಯೇ ಅನೇಕರು ಮಾನಸಿಕವಾಗಿ ಆಘಾತಗೊಂಡಿದ್ದರು.‌ ವಿದೇಶದಿಂದ ವಾಪಸ್ಸು ಬಂದ ಮೇಲೆ ಅವರಿಗೆ ಯಾವುದೇ ಸೋಂಕು ತಗುಲದಿರಲು ನಮಗೆಲ್ಲಾ ಬಂದ "ಮನವಿ" ಯಂತೆ ನಾನು ಅವರನ್ನು ಹೋಗಿ ಕಂಡಿರಲಿಲ್ಲ. ಆದರೆ ಅವರು ಬೇಗ ಗುಣಮುಖರಾಗಿ‌ ಬೇಗ ಸಂಸದೀಯ ಖಾತೆಯನ್ನು ಈ ಮುಂಚಿನ ರೀತಿಯಲ್ಲಿಯೇ ಯಶಸ್ವಿಯಾಗಿ ನಿರ್ವಹಿಸಲಿ ಎಂದು ಹಾರೈಸಿದ್ದೆ.‌

ನಿನ್ನೆ ರಾತ್ರಿ ನಿಶ್ಚಯಿಸಿದ್ದೆ, ಕೊನೆ ಪಕ್ಷ ಅವರ ಮನೆಯವರನ್ನಾದರೂ ಇಂದು ಹೋಗಿ‌ ಮಾತನಾಡಿಸಲೇಬೇಕು ಎಂದು.‌ ಅದಕ್ಕಾಗಿ ಗೆಳೆಯ ಸುಬ್ಬಣ್ಣನವರ ಜೊತೆ ಮಾತನಾಡಿಯೂ ಇದ್ದೆ.‌ಇಂದು 11 ಗಂಟೆಗೆ ಹೋಗಿ ಎಂದು ಅವರು ಸಲಹೆ ಮಾಡಿದ್ದರು.‌

English summary
Former minister Suresh Kumar has described good politics is no more as we lost senior leader Ananth Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X