ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬರಗೂರು ರಾಮಚಂದ್ರಪ್ಪ ಅವರೊಂದಿಗೆ ಮಾತನಾಡಿದ್ದೇನೆ, ಧರಣಿ ಕೈಬಿಡಿ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಅ. 15: ಪಿಯು ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಕುರಿತಂತೆ ಸರ್ಕಾರಕ್ಕೆ ಅಪಾರ ಕಾಳಜಿಯಿದ್ದು, ಕಾಲೇಜುಗಳು ಆರಂಭವಾದ ಕೂಡಲೇ ನೇಮಕಾತಿ ಆದೇಶ ನೀಡಲಾಗುವುದು. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ನೇಮಕಾತಿ ಆದೇಶಕ್ಕಾಗಿ ಆಗ್ರಹಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಮುಂದೆ ಧರಣಿ ನಡೆಸುತ್ತಿರುವ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪ್ರತಿನಿಧಿಗಳೊಂದಿಗೆ ಸದ್ಯ ತಾವು ಕ್ವಾರಂಟೈನ್‌ನಲ್ಲಿರುವ ಕಾರಣ ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನನೆಗುದಿಗೆ ಬಿದ್ದಿದ್ದ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಚುರುಕು ಮುಟ್ಟಿಸಿ ಪ್ರಕ್ರಿಯೆ ಪೂರ್ಣಗೊಳಿಸಿದ್ದನ್ನು ವಿವರಿಸಿದರು. ಜೊತೆಗೆ ಸರ್ಕಾರದ ಭರವಸೆಯ ಹಿನ್ನೆಲೆಯಲ್ಲಿ ಧರಣಿ ಕೈಬಿಡಬೇಕೆಂದು ಮನವಿ ಮಾಡಿದರು.

20-30 ವರ್ಷ ಪಾಠ ಹೇಳುವ ಜವಾಬ್ದಾರಿಯಿದೆ

20-30 ವರ್ಷ ಪಾಠ ಹೇಳುವ ಜವಾಬ್ದಾರಿಯಿದೆ

ಈ ಕುರಿತಂತೆ ನಮ್ಮ ಸರ್ಕಾರವು ತೆಗೆದುಕೊಂಡಿರುವ ಆಸ್ಥೆ ಮತ್ತು ತೆಗೆದುಕೊಂಡಿರುವ ಕ್ರಮಗಳ ಕುರಿತು ತಮಗೆಲ್ಲ ಗೊತ್ತಿದೆ. ತಾವೆಲ್ಲ ಮುಂದೆ ಕನಿಷ್ಠ 20-30 ವರ್ಷಗಳ ಕಾಲ ನಮ್ಮೆಲ್ಲಾ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಜವಾಬ್ದಾರಿಯುಳ್ಳವರು. ಕೊರೋನಾ ಹಿನ್ನೆಲೆಯಲ್ಲಿ ಅಸ್ತಿತ್ವದಲ್ಲಿರುವ ಆರ್ಥಿಕ ಮಿತವ್ಯಯ ಆದೇಶದ ಮಧ್ಯೆಯೂ ಆರ್ಥಿಕ ಇಲಾಖೆಯ ವಿಶೇಷ ಅನುಮತಿ ಪಡೆದು ಸರ್ಕಾರ, ಕೌನ್ಸೆಲಿಂಗ್ ಸೇರಿದಂತೆ ನೇಮಕಾತಿಯ ಎಲ್ಲ ಪೂರ್ವಭಾವಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ ಎಂದು ಸುರೇಶ್ ಕುಮಾರ್ ಧರಣಿ ನಿರತ ಉಪನ್ಯಾಸಕರಿಗೆ ವಿವರಿಸಿದರು.

ಧರಣಿ ನಿರತ ಉಪನ್ಯಾಸಕರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಮಹತ್ವದ ಭರವಸೆ!ಧರಣಿ ನಿರತ ಉಪನ್ಯಾಸಕರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಮಹತ್ವದ ಭರವಸೆ!

ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ

ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ

ಶಾಲಾ ಕಾಲೇಜುಗಳು ಆರಂಭವಾದ ಕೂಡಲೇ ಸ್ಥಳ ನಿಯುಕ್ತಿ ಪಡೆದಿರುವ ಎಲ್ಲ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ತಮ್ಮ ಕೋರಿಕೆ ಮೇರೆಗೆ ಉನ್ನತ ಶಿಕ್ಷಣ ಇಲಾಖೆ ಸಚಿವರೂ ಆಗಿರುವ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಧರಣಿ ನಿರತರನ್ನುದ್ದೇಶಿಸಿ ಮಾತನಾಡಿದ್ದಾರೆ. ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಉಪನ್ಯಾಸಕರ ನೇಮಕ ಪ್ರಕ್ರಿಯೆ ಕುರಿತಂತೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣವೇ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದ್ದಾರೆಂದು ಸಹ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಯಾವುದೇ ಆತಂಕಕ್ಕೆ ಅವಕಾಶವಿಲ್ಲ!

ಯಾವುದೇ ಆತಂಕಕ್ಕೆ ಅವಕಾಶವಿಲ್ಲ!

ಈ ಕುರಿತು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ಈಗಾಗಲೇ ಭರವಸೆ ನೀಡಿದ್ದು, ಯಾವುದೇ ಆತಂಕಕ್ಕೆ ಅವಕಾಶವಿಲ್ಲ. ಸರ್ಕಾರದ ಮನವಿಗೆ ಸ್ಪಂದಿಸಿ ಧರಣಿ ಕೈಬಿಡಬೇಕೆಂಬುದು ಸಚಿವರು ಮನವಿ ಮಾಡಿದ್ದಾರೆ.

Recommended Video

RR Nagar By election ಮೂಲಕ ಜೆಡಿಎಸ್ ಸಮಾಧಿ ಮಾಡಲು ಹೊರಟ್ರಾ ಡಿಕೆಶಿ! | Oneindia Kannada
ಬರಗೂರು ರಾಮಚಂದ್ರಪ್ಪ ಅವರಿಗೂ ಹೇಳಿದ್ದೇನೆ

ಬರಗೂರು ರಾಮಚಂದ್ರಪ್ಪ ಅವರಿಗೂ ಹೇಳಿದ್ದೇನೆ

ಇಂದು ಈ ವಿಷಯವಾಗಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರೂ ನನ್ನೊಂದಿಗೆ ಮಾತನಾಡಿದಾಗ ಅವರಿಗೂ ಆತಂಕಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದೇನೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

English summary
Primary and Secondary Education Minister Suresh Kumar requested to the 1203 PU lecturers who have been protesting in front of PU Board in Bengaluru reagarding their appointment order. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X