ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಮ್ಮ ಸಾಧನೆಗೆ ಕಾರಣ ವಿವರಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!

|
Google Oneindia Kannada News

ಬೆಂಗಳೂರು, ನ. 18: ಕರ್ನಾಟಕ ಗ್ರಂಥಾಲಯ ಇಲಾಖೆ ಇಡೀ ದೇಶದಲ್ಲೇ ಮಂಚೂಣಿಯಲ್ಲಿದೆ. ರಾಜ್ಯದ ಡಿಜಿಟಲ್ ಗ್ರಂಥಾಲಯಕ್ಕೆ 6.50 ಲಕ್ಷ ಸದಸ್ಯರು ಚಂದಾದಾರರಾಗಿದ್ದಾರೆಂದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರಕ ವ್ಯಾಪ್ತಿಯ ದೊಡ್ಡನೆಕ್ಕುಂದಿ ವಾರ್ಡಿನ ತೂಬರಹಳ್ಳಿಯಲ್ಲಿ ಪಂಡಿತ ದೀನದಯಾಳ ಡಿಜಿಟಲ್ ಗ್ರಂಥಾಲಯದ ನೂತನ ಕಟ್ಟಡ ಮತ್ತು ಪುಸ್ತಕ ಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪ್ರತಿಯೊಬ್ಬರೂ ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ಜ್ಞಾನಾಧಾರಿತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದರು.

ನಳಂದಾ ವಿಶ್ವವಿದ್ಯಾನಿಲಯ ಆ ಕಾಲದಲ್ಲಿಯೇ ಜ್ಞಾನ ಪ್ರಸಾರಕ್ಕೆ ಹೆಸರಾಗಿತ್ತು. ಅಪಾರ ಪುಸ್ತಕ ಸಂಗ್ರಹ ಹೊಂದಿದ್ದ ಆ ವಿಶ್ವವಿದ್ಯಾನಿಲಯ ಜ್ಞಾನ ಪ್ರಸಾರದಲ್ಲಿ ಮಂಚೂಣಿಯಲ್ಲಿತ್ತು ಎಂದರು. ಗ್ರಂಥಾಲಯದೊಂದಿಗಿನ ತಮ್ಮ ಸಂಬಂಧವನ್ನು ಸುರೇಶ್ ಕುಮಾರ್ ನೆನಪಿಸಿಕೊಂಡರು. ನನ್ನ ಜೀವನದಲ್ಲಿ ನಾನೇನಾದರೂ ಸಾಧನೆ ಮಾಡಿದ್ದರೆ, ಅದರ ಎಲ್ಲ ಶ್ರೇಯಸ್ಸು ಸಾರ್ವಜನಿಕ ಗ್ರಂಥಾಲಯಕ್ಕೆ ಸೇರಬೇಕು. ಗ್ರಂಥಾಲಯದ ಓದಿನ ಮೂಲಕವೇ ನಾನು ಕಾನೂನು ಪದವಿ ಪಡೆಯುವಂತಾಯಿತು. ಗ್ರಂಥಾಲಯ ಎಂಬುದು ಶ್ರೀಸಾಮಾನ್ಯನ ಒಂದು ವಿಶ್ವವಿದ್ಯಾಲಯವಿದ್ದಂತೆ ಎಂದರು.

ರಾಜ್ಯದಲ್ಲಿ ಡಿಜಿಟಲ್ ಗ್ರಂಥಾಲಯ

ರಾಜ್ಯದಲ್ಲಿ ಡಿಜಿಟಲ್ ಗ್ರಂಥಾಲಯ

ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ 273 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿವೆ. ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಲಕ್ಷಕ್ಕೂ ಮೀರಿದ ಪುಸ್ತಕಗಳು

ಲಕ್ಷಕ್ಕೂ ಮೀರಿದ ಪುಸ್ತಕಗಳು

ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆಪ್ನ್ನು ಲೋಕಾರ್ಪಣೆಗೊಳಿಸಿದ್ದು, ಇಂದು ಆರುವರೆ ಲಕ್ಷಕ್ಕೂ ಹೆಚ್ಚು ಜನ ಈ ಆಪ್ ಬಳಸುತ್ತಿದ್ದಾರೆ. ಇದು ಸಾರ್ವಕಾಲಿಕ ದಾಖಲೆಯಾಗಿದ್ದು, ಒಂದು ಲಕ್ಷಕ್ಕೂ ಮೀರಿದ ಪುಸ್ತಕಗಳು ಈ ಆ್ಯಪ್‌ನಲ್ಲಿ ಲಭ್ಯವಿವೆ.

ಮಾದರಿ ಗ್ರಂಥಾಲಯ ವ್ಯವಸ್ಥೆ

ಮಾದರಿ ಗ್ರಂಥಾಲಯ ವ್ಯವಸ್ಥೆ

ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6841 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವರ್ಗದ ಜನರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳನ್ನು ಅವಶ್ಯಕ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು.

ಬದಲಾದ ಪರಿಸ್ಥಿತಿ

ಬದಲಾದ ಪರಿಸ್ಥಿತಿ

ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಜಾರಿಯಾದಾಗ ಏಕಾಏಕಿ ಸಾರ್ವಜನಿಕ ಗ್ರಂಥಾಲಯಗಳನ್ನು ಮುಚ್ಚಲಾಗಿತ್ತು. ಆಗ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಿತು. ಇದೀಗ ಲಕ್ಷಾಂತರ ಪುಸ್ತಕಗಳು ಡಿಜಿಟಲ್ ಗ್ರಂಥಾಲಯದಲ್ಲಿವೆ. ಲಕ್ಷಾಂತರ ಓದುಗರು ಅವುಗಳ ಉಪ ಯೋಗ ಪಡೆಯುತ್ತಿದ್ದಾರೆ.

English summary
The Karnataka Library Department is in full swing. The Minister of Education S Sureshkumar said that 6.50 lakh members subscribed to the State Digital Library, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X