ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದೇ ಜಾತ್ಯತೀತತೆ ಎಂದುಕೊಂಡಿದ್ದಾರೆ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 28: ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದರಿಂದ ಏನು ಸಧಿಸುತ್ತಾರೆ, ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷವಾಗಿ ಶಿಕ್ಷಣ ಸಚಿವ ಕಿಡಿ ಕಾರಿದ್ದು, 'ಅಣ್ಣಾ, ಇವತ್ತು ಹನುಮ ಜಯಂತಿ' ಎಂದು ನೆನಪಿಸಿದ ಗ್ರಾಮಸ್ಥನಿಗೆ, 'ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನ' ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು.

ಇದು ಅಗತ್ಯವಿತ್ತೇ? ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ 'ರಾಮನ birth certificate ಎಲ್ಲಿ' ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ. ಅದಕ್ಕಾಗಿಯೇ ಈ ನೆಲದ ನಂಬಿಕೆಗಳ ಬಗ್ಗೆ ಗೌರವ ಇರುವ ಅಸಂಖ್ಯಾತ ಜನತೆಯಿಂದ ದೂರ ಸರಿಯುತ್ತಿದ್ದಾರೆ ಎಂದು ಹೇಳಿದ್ದಾರೆ.

Suresh Kumar Says What They Will Achieve By Insulting The Belief Of This Land

ಭಾನುವಾರ ಗ್ರಾಮಪಂಚಾಯತ್ ಮತದಾನ ಮಾಡಿದ ಬಳಿಕ ಮೈಸೂರಿನ ಆಪ್ತರ ಮನೆಯಲ್ಲಿ ಬಾಡೂಟ ಸವಿಯುತ್ತಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಬೆಂಬಲಿಗನೊಬ್ಬ ಇಂದು ಹನುಮ ಜಯಂತಿ ಎಂದು ನೆನಪಿಸಿದ್ದ.

ಇದಕ್ಕೆ ಎಂದಿನಂತೆ ತಮ್ಮ ಶೈಲಿಯಲ್ಲಿ ಸಹಜವಾಗಿ ಉತ್ತರಿಸಿದ್ದ ಸಿದ್ದರಾಮಯ್ಯ, ಹನುಮ ಹುಟ್ಟಿದ ದಿನಾಂಕ ನಿನಗೆ ಗೊತ್ತಾ? ಏನಾಗಲ್ಲ ಚಿಕನ್ ತಿನ್ನು ಎಂದು ಉತ್ತರಿಸಿದ್ದರು. ಈ ವಿಚಾರ ಸುದ್ದಿಯಾಗ್ತಿದ್ದಂತೆ ಸಚಿವ ಸುರೇಶ್‌ ಕುಮಾರ್ ಸಿದ್ದರಾಮಯ್ಯ ವಿರುದ್ಧ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರಿಗೂ ಧಾರ್ಮಿಕ ನಂಬಿಕೆಗಳಿಗೂ ಅಷ್ಟಕ್ಕೆ ಅಷ್ಟೇ ಎಂಬುದು ತಿಳಿದಿರುವಂಥಹದ್ದೇ... ಈ ಹಿಂದೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಮೀನು ತಿಂದಿದ್ದು ವಿವಾದವಾಗಿತ್ತು.

ಈಗ ಮೈಸೂರಿನ ಸಿದ್ದರಾಮನ ಹುಂಡಿಗೆ ಗ್ರಾಮಪಂಚಾಯ್ತಿ ಚುನಾವಣೆ ಹಿನ್ನೆಲೆ ಭೇಟಿ ನೀಡಿದ ವೇಳೆ ಸಿದ್ದರಾಮಯ್ಯ ಹನುಮ ಜಯಂತಿಯ ಬಗ್ಗೆ ಮಾತನಾಡಿದ್ದರು.

ಈ ಮೊದಲು ನಾನು ದಿನಕ್ಕೆ 2 ಬಾರಿ ನಾನ್ ವೆಜ್ ಊಟ ಮಾಡುತ್ತಿದ್ದೆ. ಆಂಜಿಯೋಗ್ರಾಮ್ ಆದ ಬಳಿಕ ಈಗ ವಾರಕ್ಕೆ 3 ದಿನವಷ್ಟೇ ನಾನ್ ವೆಜ್ ಊಟ ಮಾಡುತ್ತಿದ್ದೇನೆ ಎಂದು ತಮ್ಮ ಆಹಾರದ ಕ್ರಮದ ಬಗ್ಗೆ ಹೇಳಿಕೊಂಡಿದ್ದರು.

English summary
Education minister S Suresh kumar asked that Will They Achieve By Insulting The Belief Of This Land.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X