ಜಯನಗರದಲ್ಲಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ: ಇಲ್ಲಿದೆ ದಿನಾಂಕ, ಸಮಯಗಳ ವಿವರ

ಬೆಂಗಳೂರು: ಕಲಾಭಿಮಾನಿಗಳಿಗೆ ಮತ್ತು ಉದಯೋನ್ಮುಖ ಗಾಯಕರಿಗೆ ಇಲ್ಲೊಂದು ಸುವರ್ಣಾವಕಾಶ ಇದೆ. 'ಪರಮ್ ಕಲ್ಚರ್' ಹಾಗೂ 'ಹರಿವಂಶ ಗ್ರೂಪ್' ಸಹಯೋಗದೊಂದಿಗೆ ಜಯನಗರದ ಯುವಕರ ಸಂಘದಲ್ಲಿ ಜೂನ್ 12 ಮತ್ತು 13ರಂದು ಎರಡು ದಿನವೂ ಸಂಜೆ 6ರಿಂದ 8 ಗಂಟೆಯವರೆಗೆ ವಿಶೇಷ ಪ್ರಿ-ಕನ್ಸರ್ಟ್ ಸಂಗೀತ ಕಾರ್ಯಾಗಾರ 'ಭಜ ಮನ'ವನ್ನು (Pre-Concert workshop) ಹಮ್ಮಿಕೊಳ್ಳಲಾಗಿದೆ. ಜಾಗತಿಕ ಮಟ್ಟದಲ್ಲಿ ಭಕ್ತಿ ಸಂಗೀತದ ಮೂಲಕ ಸನ್ಸೇಷನ್ ಸೃಷ್ಟಿಸಿರುವ ಖ್ಯಾತ ಯುವ ಶಾಸ್ತ್ರೀಯ ಗಾಯಕಿ ಸೂರ್ಯಗಾಯತ್ರಿ ಅವರು ಈ ಕಾರ್ಯಾಗಾರವನ್ನು ಮುನ್ನಡೆಸಲಿದ್ದಾರೆ.

ಈ ಕಾರ್ಯಾಗಾರದಲ್ಲಿ ಭಾಗವಹಿಸುವ ಆಸಕ್ತರಿಗೆ ಸೂರ್ಯಗಾಯತ್ರಿ ಅವರಿಂದ ನೇರವಾಗಿ ಭಜನೆಗಳು, ದಾಸರ ಪದಗಳು ಮತ್ತು ಅಭಂಗ್‌ಗಳನ್ನು ಕಲಿಯುವ ಅಪೂರ್ವ ಅವಕಾಶ ಸಿಗಲಿದೆ. ಜೊತೆಗೆ ಅವರ ಕಲಾ ಜರ್ನಿ ಮತ್ತು ಭಕ್ತಿ ಸಂಗೀತದ ಅನುಭವಗಳನ್ನು ನೇರವಾಗಿ ಅವರಿಂದಲೇ ಕೇಳಿ ತಿಳಿಯಬಹುದು. ಒಟ್ಟು 4 ಗಂಟೆಗಳ ಕಾಲ ನೇರ ಕಲಿಕೆ ಇರಲಿದ್ದು, ಕಲಿಕೆಗೆ ಅಗತ್ಯವಿರುವ ವಿಶೇಷ ಸಾಹಿತ್ಯ ಹಾಗೂ ನೋಟ್ಸ್‌ಗಳನ್ನೂ ಇಲ್ಲಿ ಪಡೆಯಬಹುದಾಗಿದೆ.

Surya Gayathri Music Workshop

ವೇದಿಕೆ ಹಂಚಿಕೊಳ್ಳುವ ಸುವರ್ಣಾವಕಾಶ

ಕಾರ್ಯಾಗಾರವು ಕೇವಲ ಕಲಿಕೆಗೆ ಸೀಮಿತವಾಗಿರದೆ, ಪ್ರದರ್ಶನಕ್ಕೂ ದಾರಿ ಮಾಡಿಕೊಡಲಿದೆ. ಇಲ್ಲಿ ಭಾಗವಹಿಸುವ ಪ್ರತಿಭಾವಂತ ಕಲಾಭಿಮಾನಿಗಳನ್ನು ಜೂನ್ 14ರಂದು ಸಂಜೆ 5 ಗಂಟೆಯಿಂದ ಮೀನಾಕ್ಷಿ ರಂಗಮಂಚದಲ್ಲಿ ನಡೆಯಲಿರುವ ಭವ್ಯ ಲೈವ್ ಕನ್ಸರ್ಟ್‌ನಲ್ಲಿ ಸೂರ್ಯಗಾಯತ್ರಿ ಅವರೊಂದಿಗೆ ವೇದಿಕೆ ಹಂಚಿಕೊಂಡು ಹಾಡಲು ಪರಿಗಣಿಸುವ ಬಂಪರ್ ಚಾನ್ಸ್ ಇರಲಿದೆ.

ಮೈಸೂರು: ಇಂದು ಭಾರತೀಯ ಸಂಗೀತಶಾಸ್ತ್ರ ದಿನಾಚರಣೆ; ಡಾ. ರಾ.ಸ ಸತ್ಯನಾರಾಯಣ ಶತಮಾನೋತ್ಸವ
ಮೈಸೂರು: ಇಂದು ಭಾರತೀಯ ಸಂಗೀತಶಾಸ್ತ್ರ ದಿನಾಚರಣೆ; ಡಾ. ರಾ.ಸ ಸತ್ಯನಾರಾಯಣ ಶತಮಾನೋತ್ಸವ

ಉಚಿತ ಕನ್ಸರ್ಟ್ ಪಾಸ್ ಲಭ್ಯ

ಈ ಕಾರ್ಯಾಗಾರದಲ್ಲಿ ಕೇವಲ ಕಲಿಕೆ ಮಾತ್ರವಲ್ಲದೆ ಹೆಚ್ಚುವರಿ ಸೌಲಭ್ಯಗಳೂ ಸೇರಿವೆ. ಭಾಗವಹಿಸುವ ಪ್ರತಿಯೊಬ್ಬರಿಗೂ ಉಚಿತ ಕಲಿಕಾ ಸಾಮಗ್ರಿಗಳ ಜೊತೆಗೆ ಜೂನ್ 14ರಂದು ನಡೆಯಲಿರುವ ಸೂರ್ಯಗಾಯತ್ರಿ ಅವರ ಭವ್ಯ ಲೈವ್ ಕನ್ಸರ್ಟ್‌ನ ಕಂಪ್ಲಿಮೆಂಟರಿ ಪಾಸ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.

Surya Gayathri Music Workshop

ಜಾಗತಿಕ ತಾರೆಯ ಮಾರ್ಗದರ್ಶನ

ಸೂರ್ಯಗಾಯತ್ರಿ ಅವರು ಮುಂಬೈನ ಷಣ್ಮುಖಾನಂದ ಸಭಾದಿಂದ ಕಿರಿಯ ವಯಸ್ಸಿನಲ್ಲೇ ಪ್ರತಿಷ್ಠಿತ ಎಂ.ಎಸ್. ಸುಬ್ಬುಲಕ್ಷ್ಮಿ ಫೆಲೋಶಿಪ್ ಪುರಸ್ಕೃತರಾಗಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕದ 29 ನಗರಗಳ ಯಶಸ್ವಿ ಪ್ರವಾಸ ಮುಗಿಸಿ ಬಂದಿರುವ ಹಾಗೂ ದೇಶ-ವಿದೇಶಗಳಲ್ಲಿ 500ಕ್ಕೂ ಹೆಚ್ಚು ಲೈವ್ ಪ್ರದರ್ಶನಗಳನ್ನು ನೀಡಿದ್ದಾರೆ.

Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್‌ ಹಾಡುಗಳಿವು
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್‌ ಹಾಡುಗಳಿವು

ಸಂಗೀತದಲ್ಲಿ ಆಸಕ್ತಿ ಇರುವವರು ಮತ್ತು ಉದಯೋನ್ಮುಖ ಗಾಯಕರಿಗೆ ಈ ಕಾರ್ಯಾಗಾರ ಕಲಿಕೆ ಹಾಗೂ ಪ್ರದರ್ಶನ ಎರಡಕ್ಕೂ ಉತ್ತಮ ವೇದಿಕೆಯಾಗಿದೆ. ಆಸಕ್ತರು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+