ಪ್ರತಿಮಾ ಕೊಲೆ ಪ್ರಕರಣ: ಶಾಸಕ ಮುನಿರತ್ನ ವಿಚಾರಣೆ ಮಾಡುವಂತೆ ಒತ್ತಾಯ
ಶನಿವಾರ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ರಿಯಲ್ ಎಸ್ಟೇಟ್ ಮಾಫಿಯಾ, ರಾಜಕಾಲುವೆ ಒತ್ತುವರಿ ವಿಚಾರಗಳು ಮುನ್ನಲೆಗೆ ಬರುತ್ತಿವೆ, ಈ ಬೆನ್ನಲ್ಲೇ ಶಾಸಕ ಮುನಿರತ್ನ ಹೆಸರು ಕೂಡ ಕೇಳಿ ಬಂದಿದೆ.
ಪ್ರತಿಮಾ ಕೊಲೆ ಸಂಬಂಧ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿಚಾರಣೆ ಮಾಡಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಆಗ್ರಹಿಸಿದ್ದಾರೆ.

ಹುಣಸಮಾರನಹಳ್ಳಿಯಲ್ಲಿ ಪರವಾನಗಿ ಪಡೆಯದೆ ಬಂಡೆಗಳನ್ನು ಸ್ಫೋಟಿಸಲಾಗಿತ್ತು, ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಿದ್ದ ಪ್ರತಿಮಾ, ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ನೀಡಿದ್ದರು. ವಿಶೇಷ ಎಂದರೆ ಈ ಪ್ರಕರಣದಲ್ಲಿ ಶಾಸಕ ಮುನಿರತ್ನ 2ನೇ ಆರೋಪಿಯಾಗಿದ್ದಾರೆ ಎಂದು ಮುಕುಂದರಾಜ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು, ಸರ್ಕಾರಕ್ಕೆ ಬರಬೇಕಿದ್ದ ರಾಜಸ್ವಧನದಲ್ಲೂ ನಷ್ಟ ಉಂಟು ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು, ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಬಗ್ಗೆ ಹಲವು ಅನುಮಾನಗಳಿದ್ದು, ಎಲ್ಲಾ ಆಯಾಮದಲ್ಲೂ ತನಿಖೆಯಾಗಬೇಕು, ಬಿಜೆಪಿ ಶಾಸಕ ಮುನಿರತ್ನಗೆ ನೋಟಿಸ್ ನೀಡಿ ತನಿಖೆ ನಡೆಸಿ ಎಂದು ಸೂರ್ಯ ಮುಕುಂದರಾಜ್ ಒತ್ತಾಯಿಸಿದ್ದಾರೆ.
ಸೂರ್ಯ ಮುಕುಂದರಾಜ್ ಹೇಳಿದ್ದೇನು?
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸೂರ್ಯ ಮುಕುಂದರಾಜ್, ದಾಖಲೆಗಳನ್ನು ಕೂಡ ಹಂಚಿಕೊಂಡಿದ್ದಾರೆ. ಇದರಲ್ಲಿ ಪ್ರತಿಮಾ ನೀಡಿದ ವರದಿಯನ್ನು ನೀಡಬಹುದಾಗಿದ್ದು, ಶಾಸಕ ಮುನಿರತ್ನ ಹೆಸರು ಕೂಡ ಇದೆ.
"ಕೊಲೆಯಾಗಿರುವ ಹಿರಿಯ ಭೂವಿಜ್ಞಾನಿ ಪ್ರತಿಮಾ ಅವರು ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಶಾಸಕ ಸಿಡಿ ಕಂಪನಿಗಳ ಮಾಲೀಕ ಮುನಿರತ್ನ ವಿರುದ್ಧ ಅಕ್ರಮ ಸ್ಪೋಟಕ ಬಳಕೆ ಮಾಡಿ ಕಲ್ಲು ಶಿಲೆಗಳನ್ನು ಪುಡಿ ಮಾಡಿದ್ದ ಸಂಬಂಧ ಹಾಗೂ ಸರ್ಕಾರಕ್ಕೆ 25 ಲಕ್ಷ ರಾಯಧನ ನಷ್ಟ ಮಾಡಿದ್ದ ಕಾರಣಕ್ಕೆ ಹುಣಸಮಾರನಹಳ್ಳಿ ಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು. ಬಹುಶಃ ಇವರ ಸಹೋದರನ ಹಳೆ ನಂಟು ಈ ಕೊಲೆ ಪ್ರಕರಣದಲ್ಲಿ ಏನಾದರೂ ಹಸ್ತಕ್ಷೇಪ ಮಾಡಿರಬಹುದು ಪೊಲೀಸರು ತನಿಖೆ ನಡೆಸಬಹುದು" ಎಂದು ಭಾವಿಸುತ್ತೇನೆ ಎಂದು ದಾಖಲೆಗಳ ಜೊತೆ ಮಾಹಿತಿ ನೀಡಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications