ಗಾಯಕಿ ಸುಶ್ಮಿತಾ ಆತ್ಮಹತ್ಯೆ; ಪತಿ, ಕುಟುಂಬದವರು ನಾಪತ್ತೆ
ಬೆಂಗಳೂರು, ಫೆಬ್ರವರಿ 18 : ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಸುಶ್ಮಿತಾ ಪತಿ ಮತ್ತು ಕುಟುಂಬ ಸದಸ್ಯರು ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ.
ಸುಶ್ಮಿತಾ ಪತಿ ಶರತ್ ಕುಮಾರ್, ಆತನ ದೊಡ್ಡಮ್ಮ ವೈದೇಹಿ, ಸಹೋದರಿ ಗೀತಾ ಸಾವಿನ ಸುದ್ದಿ ತಿಳಿದ ಬಳಿಕ ನಾಪತ್ತೆಯಾಗಿದ್ದಾರೆ. ಸುಶ್ಮಿತಾ ಅವರು ಸಾವಿಗೂ ಮುನ್ನ ಬರೆದಿದ್ದಾರೆ ಎಂಬ ಡೆತ್ ನೋಟ್‌ನಲ್ಲಿ ಮೂವರ ಹೆಸರು ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಶರಣಾಗುವ ಮುನ್ನ ತಾಯಿಗೆ ಸುಶ್ಮಿತಾ ತಾಯಿಗೆ ವಾಟ್ಸಪ್ ಸಂದೇಶ ಕಳಿಸಿದ್ದರು. ಅದರಲ್ಲಿ ಪತಿ ಮತ್ತು ಅವರ ಕುಟುಂಬದವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆದ್ದರಿಂದ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಸುಗಮ ಸಂಗೀತ ಗಾಯಕಿಯಾದ ಸುಶ್ಮಿತಾ ಚಲನಚಿತ್ರ ಮತ್ತು ಧಾರಾವಾಹಿಗಳಲ್ಲಿಯೂ ಹಾಡಿದ್ದರು. ಶರತ್ ಎಂಬುವವರನ್ನು ಪ್ರೀತಿಸಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು. ಸೋಮವಾರ ಮಾಳಗಾದಲ್ಲಿರುವ ತಾಯಿ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಸುಶ್ಮಿತಾ ಪತಿಯ ಜೊತೆ ನಾಗರಭಾವಿಯಲ್ಲಿನ ನಿವಾಸದಲ್ಲಿ ನೆಲೆಸಿದ್ದರು. ಸುಶ್ಮಿತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕ ಬಳಿಕ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.












Click it and Unblock the Notifications