Explosion: ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ: ಓರ್ವ ಬಾಲಕ ಸಾವು, 8ಕ್ಕೂ ಅಧಿಕ ಮಂದಿಗೆ ಗಾಯ

Bengaluru Suspicious explosion: ಅನುಮಾನಾಸ್ಪದ ವಸ್ತು ಸ್ಫೋಟಗೊಂಡು 8 ವರ್ಷದ ಓರ್ವ ಬಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಭೀಕರ ಘಟನೆ ನಗರದ ವಿಲ್ಸನ್‌ ಗಾರ್ಡ್‌ನಲ್ಲಿ ಬರುವ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಇನ್ನು ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 8ಕ್ಕೂ ಅಧಿಕ ಜನರು ಘಟನೆಯಲ್ಲಿ ಗಾಯಗೊಂಡಿದ್ದು, ಇವರನ್ನು ಸಂಜಯ್​ಗಾಂಧಿ ಹಾಗೂ ಜಯನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Suspicious Explosion in Bengaluru One Boy Dead Over Eight Injured

ಗಾಯಾಳು ಕಸ್ತೂರಿ ಎಂಬುವವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗು ಇದೆ. ಇದೀಗ ಅವರಿಗೆ ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸ ಇದ್ದರು ಎಂದು ತಿಳಿದುಬಂದಿದೆ.

ಭಾರೀ ಸ್ಫೋಟದಿಂದಾಗಿ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದ ಪರಿಣಾಮ ಮಕ್ಕದ 8ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಆಡುಗೋಡಿ ಠಾಣೆ ಪೊಲೀಸರು ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. ಇದಕ್ಕೆ ನಿಖರ ಕಾರಣ ಏನೆಂದು ಇನ್ನೂ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಹಾಗೂ ಬೆಂಗಳೂರು ಕಮಿಷನರ್ ಸೀಮಂತ್​ ಕುಮಾರ್​​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿ ಆಗಿದ್ದು, ಬಾಲಕ ಮುಬಾರಕ್​​ ಎಂಬಾತ ಸಾವನ್ನಪ್ಪಿದ್ದಾನೆ.

ಬೆಂಗಳೂರು ಕಮಿಷನರ್​ ಸೀಮಂತ್ ಕುಮಾರ್​ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮೃತ ಬಾಲಕನ ಕುಟುಂಬಕ್ಕೆ 5,00,000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಗಾಯಗೊಂಡವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ ಎಂದು ಹೇಳಿದ್ದಾರೆ ಅಂತಾ ತಿಳಿದುಬಂದಿದೆ.

ಇದು ಸಿಲಿಂಡರ್ ಸ್ಫೋಟಕ ಆಗಿದೆ ಎಂದು ಮೋಲ್ನೋಟಕ್ಕ ಕಂಡುಬರುತ್ತಿದೆ. ಇಲ್ಲಿನ ಅಕ್ಕಪಕ್ಕದ ಮನೆಗಳಿಗೆ ಅಪಾರ ಹಾನಿಯಾಗಿದೆ. ಮನೆಗಳ ರಿಪೇರಿಗೆ ಸೂಚನೆ ನೀಡಲಾಗಿದೆ. ಸದ್ಯ ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಈ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಈ ಘಟನೆಗೆ ನಿಖರ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+