Swachh Survekshan 2026: ಕಸ ನಿರ್ವಹಣೆ - ಸ್ವಚ್ಛ ಸರ್ವೇಕ್ಷಣ್ ರ‍್ಯಾಂಕಿಂಗ್‌ಗೆ ಜಿಬಿಎ ಸರ್ಕಸ್
ಬೆಂಗಳೂರು: ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಭಾರೀ ಹಿಂದುಳಿಯುತ್ತಿದೆ. ಇದೀಗ ಸ್ವಚ್ಛ ಸರ್ವೇಕ್ಷಣ್ ರ‍್ಯಾಂಕಿಂಗ್ ಸುಧಾರಿಸಿಕೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸರ್ಕಸ್ ಪ್ರಾರಂಭಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಉತ್ತಮ ಅಂಕಗಳು ಗಳಿಸುವಂತೆ ಎಲ್ಲ ಐದು ನಗರ ಪಾಲಿಕೆಗಳ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸೂಚನೆ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನಕ್ಕೆ ಸಂಬಂಧಿಸಿದಂತೆ ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪ್ರತಿವರ್ಷ ಸ್ವಚ್ಛತಾ ಸರ್ವೇಕ್ಷಣ್ ಆಯೋಜಿಸುತ್ತಿದೆ. ಈ ಸಂಬಂಧ ಪ್ರಸಕ್ತ ಸಾಲಿನಲ್ಲಿ ಜಿಬಿಎ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಎಲ್ಲರೂ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Swachh Survekshan 2026 ಐದು ಪಾಲಿಕೆ ವ್ಯಾಪ್ತಿಯಲ್ಲಿ ಸಿದ್ಧತೆ
ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಭಾಗವಾಗಿ ನಗರದ ಐದು ನಗರ ಪಾಲಿಕೆಗಳಲ್ಲಿ ತೀವ್ರ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಬೇಕು. ವಾಟರ್ ಜೆಟಿಂಗ್ ಯಂತ್ರಗಳ ಮೂಲಕ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿಸಬೇಕು. ಜೊತೆಗೆ ಪಾದಚಾರಿ ಮಾರ್ಗಗಳಲ್ಲಿರುವ ಸಸಿಗಳು ಮತ್ತು ಮರಗಳ ಸುತ್ತ ಗ್ರಾಸ್ ಪೇವರ್ ಅಳವಡಿಸಲು ತಿಳಿಸಿದ್ದಾರೆ. ನಗರದ ಸ್ವಚ್ಛತೆಗಾಗಿ ಕಾರ್ಯನಿರ್ವಹಿಸುವ ಎಲ್ಲಾ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸುವ ಜೊತೆಗೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಒದಗಿಸಬೇಕು. ಅಲ್ಲದೆ, ಆಯಾ ಪಾಲಿಕೆಗಳಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ನಾಗರಿಕರಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಕುರಿತು ಅರಿವು ಮೂಡಿಸುವ ಕೆಲಸ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
Swachh Survekshan 2026: ಮಾರುಕಟ್ಟೆ ಸ್ವಚ್ಛತೆ
ಸ್ವಚ್ಛ ಸರ್ವೇಕ್ಷಣ್ ಅಭಿಯಾನಕ್ಕೆ ಸಂಬಂಧಿಸಿದಂತೆ ನಗರದಲ್ಲಿನ ಸ್ಟಾರ್ ಹೋಟೆಲ್‌ಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಗಳು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ 5 ನಗರ ಪಾಲಿಕೆಗಳಲ್ಲಿ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಜೊತೆಗೆ ಮಾರುಕಟ್ಟೆ ಪ್ರದೇಶಗಳಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯಾಚರಣೆ ನಡೆಸಲು ನಿರ್ದೇಶನ ನೀಡಿದರು.
ನಗರದಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು ತರಬೇಕು. ಎಲ್ಲಿಯೂ ಕಸ ಸುರಿಯುವ ಸ್ಥಳಗಳು (ಬ್ಲಾಕ್ ಸ್ಪಾಟ್‌ಗಳು) ಇರದಂತೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಮನೆ-ಮನೆಗೆ ಕಸ ಸಂಗ್ರಹಣಾ ವ್ಯವಸ್ಥೆ ಸಮರ್ಪಕವಾಗಿ ಜಾರಿಗೊಳಿಸುವಂತೆ ಸೂಚನೆ ನೀಡಿದ ಅವರು, ಈ ಎಲ್ಲಾ ಅಂಶಗಳನ್ನು ಒಳಗೊಂಡ ಸಮಗ್ರ ಕ್ರಿಯಾ ಯೋಜನೆ (ಆಕ್ಷನ್ ಪ್ಲಾನ್) ಸಿದ್ಧಪಡಿಸಲು ನಿರ್ದೇಶನ ನೀಡಿದರು.
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ಅವರು ಮಾತನಾಡಿ, ಸ್ವಚ್ಛ ಸರ್ವೇಕ್ಷಣ್ ಅಭಿಯಾನಕ್ಕಾಗಿ ಐದು ನಗರ ಪಾಲಿಕೆಗಳು ಹಾಗೂ ಬೆಂಗಳೂರು ಜಲಮಂಡಳಿಯಿಂದ ನೋಡಲ್ ಅಧಿಕಾರಿಗಳ ನಿಯೋಜನೆ ಮಾಡುವಂತೆ ತಿಳಿಸಿದರು.
ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಉತ್ತಮ ಅಂಕ ಪಡೆಯುವ ಉದ್ದೇಶದಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸ್ವಚ್ಛ ಸರ್ವೇಕ್ಷಣ್ ತಂತ್ರಾಂಶದಲ್ಲಿ ದಾಖಲಾಗುವ ದೂರುಗಳನ್ನು ಆಯಾ ನಗರ ಪಾಲಿಕೆಗಳು ತಕ್ಷಣವೇ ಇತ್ಯರ್ಥಪಡಿಸಬೇಕು ಎಂದು ಹೇಳಿದರು.
ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಒಟ್ಟು 12,500 ಅಂಕಗಳಿದ್ದು, ಅದರಲ್ಲಿ ಓಡಿಎಫ್/ ಓಡಿಎಫ್ ಪ್ಲಸ್/ ಓಡಿಎಫ್ ಪ್ಲಸ್ ಪ್ಲಸ್/ವಾಟರ್ ಪ್ಲಸ್‌ಗೆ 1,000 ಅಂಕಗಳು, ಕಸಮುಕ್ತ ನಗರಕ್ಕೆ 1,000 ಅಂಕಗಳು ಹಾಗೂ ನಾಗರಿಕರ ಪ್ರತಿಕ್ರಿಯೆ ಮತ್ತು ಆನ್‌ಗ್ರೌಂಡ್ ಮೌಲ್ಯಮಾಪನಕ್ಕಾಗಿ 10,500 ಅಂಕಗಳಿವೆ. ಈ ಬಾರಿ ಎಲ್ಲಾ ವಿಭಾಗಗಳಲ್ಲಿಯೂ ಉತ್ತಮ ಅಂಕ ಗಳಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ಜಿಬಿಎ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಲ್ಲಿ ಈಗಾಗಲೇ ಕಸ ಸಂಗ್ರಹಣೆಗೆ 10 ಕಿಯೋಸ್ಕ್‌ಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ 60 ಸ್ಥಳಗಳಲ್ಲಿ ಕಿಯೋಸ್ಕ್ ಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನಗರ ಪಾಲಿಕೆಗಳ ಆಯುಕ್ತರುಗಳಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಅಭಿವೃದ್ಧಿ ಹೆಚ್ಚುವರಿ ಆಯುಕ್ತರಾದ ದಲ್ಜಿತ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications