Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್

Swachh Survey: ಸ್ವಚ್ಛ ಸರ್ವೇಕ್ಷಣ 2025-26ರ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 38 ಉದ್ಯಾನವನ ಹಾಗೂ 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಹೇಳಿದ್ದಾರೆ.

ಸಾರ್ವಜನಿಕರು, ವಯೋವೃದ್ಧರು, ಮಕ್ಕಳು, ಮಹಿಳೆಯರು ವಾಯುವಿಹಾರಕ್ಕೆ, ನಡಿಗೆಗೆ ಹಾಗೂ ವಿಶ್ರಾಂತಿಗಾಗಿ ನೈರ್ಮಲ್ಯಕರ ಸ್ಥಳವಾಗಿ ಮಾರ್ಪಾಡಿಗಾಗಿ ಪಾರ್ಕ್‌ಗ ಸ್ವಚ್ಛತೆ ಮಾಡಲಾಗಿದೆ. ಮಕ್ಕಳು, ಕ್ರೀಡಾರ್ಥಿಗಳ ಆಟೋಟಕ್ಕೆ ಅನುಕೂಲಕರ ಹಾಗೂ ನೈರ್ಮಲ್ಯ ವಾತಾವರಣ ಸಲುವಾಗಿ ಮೈದಾನಗಳ ಶುಚಿಗೊಳಿಸಲಾಗಿದೆ ಎಂದು ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.

Swachh Survey

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದ್ದು, ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ರೂಪಿಸಲಾಗಿರುವ ಕಾರ್ಯಯೋಜನೆಯ (ಆ್ಯಕ್ಷನ್ ಪ್ಲಾನ್ನ) 2ನೇ ಭಾಗವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 38 ಉದ್ಯಾನವನ ಹಾಗೂ 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರವಾರು ಶುಚಿಗೊಳಿಸಲಾದ ಪಾರ್ಕ್‌ಗಳ ಸಂಖ್ಯೆ ವಿವರ

1) ಶಾಂತಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 3

2) ಸಿ. ವಿ. ರಾಮನ್ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ- 14

3) ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-5

4) ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-5

5) ಚಿಕ್ಕಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-7,

6) ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-5

ಒಟ್ಟು 38 ಪಾರ್ಕ್ ಗಳ ಸ್ವಚ್ಛತೆ

ವಿಧಾನಸಭಾ ಕ್ಷೇತ್ರವಾರು ಶುಚಿಗೊಳಿಸಲಾದ ಆಟದ ಮೈದಾನಗಳ ಸಂಖ್ಯೆ ವಿವರ

1) ಶಾಂತಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-7

2) ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-1

3) ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-1

4) ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-2

ಒಟ್ಟು 11 ಆಟದ ಮೈದಾನಗಳ ಸ್ವಚ್ಛತೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ವಯೋವೃದ್ಧರು, ಮಕ್ಕಳು, ಮಹಿಳೆಯರು ವಾಯುವಿಹಾರಕ್ಕೆ, ನಡಿಗೆಗೆ ಉದ್ಯಾನವನಗಳಿಗೆ ಹೆಚ್ಚಾಗಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹೋಗುತ್ತಾರೆ. ಉದ್ಯಾನವನದಲ್ಲಿ ಸ್ವಚ್ಛತೆ ಹಾಗೂ ಉತ್ತಮ ವಾತಾವರಣ ನಿರ್ಮಿಸಿ, ವಿಶ್ರಾಂತಿಗಾಗಿ ಕುಳಿತುಕೊಳ್ಳಲು ಆಸನಗಳ ಸ್ವಚ್ಛತೆ ಕಾಪಾಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನದ 2ನೇ ಭಾಗವಾಗಿ ಪಾರ್ಕ್‌ಗಳನ್ನು ಆಯ್ಕೆ ಮಾಡಿಕೊಂಡು ಒಟ್ಟು 38 ಪಾರ್ಕ್‌ಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಮಾಹಿತಿ ನೀಡಿದ್ದಾರೆ.

ಅದೇ ರೀತಿಯಲ್ಲಿ ಮಕ್ಕಳು, ಕ್ರೀಡಾರ್ಥಿಗಳ ಆಟದ ಮೈದಾನಗಳಿಗೆ ಆಟೋಟಕ್ಕಾಗಿ ಅನುಕೂಲಕರ ವಾತಾವರಣ ಹಾಗೂ ನೈರ್ಮಲ್ಯ ಕಾಪಾಡುವ ಸಲುವಾಗಿ ಮೈದಾನಗಳನ್ನು ಸ್ವಚ್ಛಗೊಳಿಸಲು ಯೋಜನೆ ರೂಪಿಸಿದ ಶುಚಿಗೊಳಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಅವರ ಮೇಲುಸ್ತುವಾರಿಯಲ್ಲಿ ನಡೆದ ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಆಯಾಯ ವಿಭಾಗಗಳ ಎಜಿಎಂ ಗಳು, ಪೌರಕಾರ್ಮಿಕರು, ಆಟೋ ಟಿಪ್ಪರ್ ಸಿಬ್ಬಂದಿ ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+