Swachh Survey: ಬೆಂಗಳೂರಿನಲ್ಲಿ ಸ್ವಚ್ಛ ಸರ್ವೇಕ್ಷಣ್: ನಗರದ 34 ಕೊಳಗೇರಿಗಳಲ್ಲಿ ದೊಡ್ಡ ಮಟ್ಟದ ಸ್ವಚ್ಛತಾ ಅಭಿಯಾನ
Swachh Survey: ಬೆಂಗಳೂರಿನಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಭಾಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 34 ಕೊಳಗೇರಿ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಕೊಳಗೇರಿ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಸ್ಲಂ ನಿವಾಸಿಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆ ರೂಪಿಸುವ ಉದ್ದೇಶದಿಂದ ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ರೂಪಿಸಲಾದ ಕಾರ್ಯ ಯೋಜನೆಯ (ಆಕ್ಷನ್ ಪ್ಲಾನ್) ಅನ್ವಯ 10ನೇ ಭಾಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೊಳಗೇರಿಗಳ ಸ್ವಚ್ಛತೆ ಅತಿ ಮುಖ್ಯ ಎಂದು ಮನಗಂಡು 36 ಸ್ಲಂಗಳು ಹಾಗೂ ಬ್ಯಾಕ್ ಲೇನ್ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಹಾಗೂ ಸುತ್ತಮುತ್ತ ತ್ಯಾಜ್ಯ ಹಾಕದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಒಟ್ಟು 275 ಪೌರಕಾರ್ಮಿಕರು ಹಾಗೂ 88 ಜನ ಇತರೆ ಸ್ವಚ್ಛತೆ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಸುಮಾರು 12.8 ಕ್ವಿಂಟಲ್ ತ್ಯಾಜ್ಯವನ್ನು ಸಂಗ್ರಹಿಸಿ ಸುರಕ್ಷಿತವಾಗಿ ವಿಲೇವಾರಿ ಮಾಡಲಾಗಿದೆ. ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್ ಸಂಬಂಧಿತ ವಿಭಾಗದ ಎ.ಜಿ.ಎಂ ಗಳು ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಇತರೆ ಸಿಬ್ಬಂದಿ ಭಾಗಿಯಾಗಿದ್ದರು.
221 ಜನ ಪೌರಕಾರ್ಮಿಕರು ಇತರೆ ಸ್ವಚ್ಛತೆ ಸಿಬ್ಬಂದಿ ಭಾಗಿ
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆ ರೂಪಿಸುವ ಉದ್ದೇಶದಿಂದ ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರೂಪಿಸಲಾದ ಕಾರ್ಯ ಯೋಜನೆಯ (ಆಕ್ಷನ್ ಪ್ಲಾನ್) ಅನ್ವಯ 9ನೇ ಭಾಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 28 ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಸ್ಥಳ ಹಾಗೂ ಗುಟಕಾ/ ಪಾನ್ ಪರಾಗ್ ತಿಂದು ಉಗಿಯುವ ಸ್ಥಳ ಹಾಗೂ ಸುತ್ತಮುತ್ತಲಿನ ಸ್ಥಳ (Red Spot & Yellow Spot) ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.
ಈ ಸ್ಥಳಗಲ್ಲಿ ರಂಗೋಲಿ ಬಿಡಿಸಿ ಸುಂದರೀಕರಣಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಗುಟಕಾ ತಿಂದು ಉಗಿಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಒಟ್ಟು 221 ಜನ ಪೌರಕಾರ್ಮಿಕರು ಹಾಗೂ ಇತರೆ ಸ್ವಚ್ಛತೆ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಸುಮಾರು 7 ಕ್ವಿಂಟಾಲ್ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಗುಟಕಾ, ಪಾನ್ ಮಸಾಲಾ ತಿಂದು ಉಗಿಯದಂತೆ ಮನವಿ ಮಾಡಲಾಗಿದೆ. ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಸಂಬಂಧಿತ ವಿಭಾಗದ ಎ.ಜಿ.ಎಂ ಗಳು ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಇತರೆ ಸಿಬ್ಬಂದಿ ಭಾಗಿಯಾಗಿದ್ದರು.












Click it and Unblock the Notifications