ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜರಾಜೇಶ್ವರಿನಗರದಲ್ಲಿ ಸ್ವರಮೇಧಾ ಮ್ಯೂಸಿಕ್ ಫೆಸ್ಟಿವಲ್

|
Google Oneindia Kannada News

ಬೆಂಗಳೂರು, ಫೆಬ್ರವರಿ 04: ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ 2018-19ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವವನ್ನು ಇತ್ತೀಚೆಗೆ ರಾಜರಾಜೇಶ್ವರಿನಗರದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕಾಲೇಜಿನ ಒಳಾಂಗಣ ಸಭಾಂಗಣದಲ್ಲಿ "ಸ್ವರಮೇಧಾ ಮ್ಯೂಸಿಕ್ ಫೆಸ್ಟಿವಲ್ 2018-19' ಎಂಬ ಶೀರ್ಷಿಕೆಯಡಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ ಒಂಬತ್ತು ಗಂಟೆಯವರೆಗೆ ಒಟ್ಟು ನಾಲ್ಕು ಅವಧಿಗಳಲ್ಲಿ ವಿದ್ಯಾಲಯದ ಜ್ಯೂನಿಯರ್, ಸೀನಿಯರ್ ಹಾಗೂ ವಿದ್ವತ್ ವಿಭಾಗದ ನೂರಾರು ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಗಳು ನಡೆಯಿತು. ಪಕ್ಕವಾದ್ಯದಲ್ಲಿ ಪಿಟೀಲಿನಲ್ಲಿ ಸುಮುಖ, ರಾಘವೇಂದ್ರ ಹಾಗೂ ಮೃದಂಗದಲ್ಲಿ ಪ್ರಜ್ವಲ್, ವಿದ್ಯಾ ಶಂಕರ್ ಸಹಕರಿಸಿದರು.

SWARAMEDHA MUSIC FESTIVAL 2018-19 at GIT, Rajarajeshwari Nagar

ಸಂಜೆ 6-30ಕ್ಕೆ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ಡಾ.ಅನುಪ್ ದಯಾನಂದ್ ಸಾಧು, ಸುಪ್ರಸಿದ್ಧ ಲೆಕ್ಕ ಪರಿಶೋಧಕ ಸಿ.ಎ ಗೋಪಾಲಕೃಷ್ಣ ಹೆಗಡೆ, ಉದ್ಯಮಿ ರಾಜೇಶ್ ಬಾಬು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶಾಸ್ತ್ರೀಯ ಸಂಗೀತಸ ಸಾಧನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ಅವರ ಪಾಲಕರನ್ನು ಮುಕ್ತ ಕಂಠದಿಂದ ಶ್ಲಾಘಿಸಿ ಅಭಿನಂದಿಸಿದರು.

ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ ಸಂಸ್ಥಾಪಕ, ಪ್ರಾಂಶುಪಾಲಕ ಡಾ. ಚಿನ್ಮಯ ಎಂ.ರಾವ್ ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಲೆಕ್ಕ ಪರಿಶೋಧಕ ಸಿ.ಎ ಭರತ್ ರಾವ್ ಕೆ.ಎಸ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿರಲಿದ್ದಾರೆ.

ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ ಕಿರುಪರಿಚಯ : ಯುವ ಸಂಗೀತ ನಿರ್ದೇಶಕ ಹಾಗೂ ದಕ್ಷಿಣಾದಿ ಶಾಸ್ತ್ರೀಯ ಸಂಗೀತ ಕಲಾವಿದ ಡಾ. ಚಿನ್ಮಯ ಎಂ.ರಾವ್ ಅವರ ಪರಿಕಲ್ಪನೆಯಲ್ಲಿ 2015ರಲ್ಲಿ ಸಂಸ್ಥಾಪಿಸಲ್ಪಟ್ಟ ಸಂಸ್ಥೆಯೇ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ.

ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ವಿವಿಧ ಶಾಖೆಗಳನ್ನು ಹೊಂದಿದ್ದು ಅಲ್ಲೆಲ್ಲಾ ಸ್ವತಹ ಚಿನ್ಮಯ ಎಂ.ರಾವ್ ಅವರೇ ನೂರಾರು ವಿದ್ಯಾರ್ಥಿಗಳಿಗೆ ಸಂಗೀತ ಪಾಠವನ್ನು ಮಾಡುತ್ತಿದ್ದಾರೆ. ಸಂಸ್ಥೆಯ ಪ್ರಾಂಶುಪಾಲಕರಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ವಿಶೇಷವಾಗಿ ಯುವಪೀಳಿಗೆಗೆ ಹಸ್ತಾಂತರಿಸುತ್ತಿದ್ದಾರೆ. ಯುವಪೀಳಿಗೆಯನ್ನು ಶಾಸ್ತ್ರೀಯ ಸಂಗೀತದ ಸಾಧನೆಯತ್ತ ಕೊಂಡೊಯ್ಯಲು ಸಂಸ್ಥೆ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.

English summary
SWARAMEDHA MUSIC FESTIVAL 2018-19 and annual day celebration of Global Academy of Technology(GIT), RajarajeshwariNagar, Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X