Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಈ ವಿಷಯಗಳ ಮೇಲೆ ಕೆಲಸ ಮಾಡಲು ಮುಂದೆ ಬಂದ ಸ್ವಿಟ್ಜರ್ಲೆಂಡ್ ಕಂಪನಿಗಳು

ಬೆಂಗಳೂರು, ಜುಲೈ 25: ಕರ್ನಾಟಕ ರಾಜ್ಯದಲ್ಲಿ ವಿಜ್ಞಾನ ಮತ್ತು ಸಂಶೋಧನೆ ಹಾಗೂ ನಾವೀನ್ಯತೆ ವಿಷಯದಲ್ಲಿ ಜೊತೆಯಾಗಿ ಕೆಲಸ ಮಾಡಲು ಸ್ವಿಟ್ಜರ್ಲೆಂಡ್ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿದೆ. ಇದರಿಂದ ಭವಿಷ್ಯದಲ್ಲಿ ಉತ್ತಮ ಯೋಜನೆಗಳು ಸಾಕಾರಗೊಳ್ಳಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳೀದರು.

ಈ ಕುರಿತು ಸೋಮವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸ್ವಿಟ್ಜರ್ಲೆಂಡ್ ಕಾನ್ಸುಲ್‌ ಜನರಲ್‌ ಜೋನಾಸ್ ಬ್ರನ್ಶ್‌ವಿಗ್‌ ಅವರು ಎಂ ಬಿ ಪಾಟೀಲ್ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು.

Switzerland Companies Interested Work With Karnataka In Science, Research And Innovation

ಈ ವೇಳೆ ಮಾತನಾಡಿದ ಬ್ರನ್ಶ್‌ವಿಗ್‌ ಅವರು, ಸ್ವಿಟ್ಜರ್ಲೆಂಡ್‌ ಮತ್ತು ಕರ್ನಾಟಕದ ನಡುವೆ ಇರುವ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಇಂಡೋ-ಸ್ವಿಸ್‌ ಇನ್ನೋವೇಶನ್‌ ಪ್ಲಾಟ್‌ಫಾರಂ ಎನ್ನುವ ಸಾಂಸ್ಥಿಕ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ. ಅದಕ್ಕೆ ಬೆಂಗಳೂರಿನಲ್ಲಿರುವ ನ್ಯಾಷನಲ್‌ ಸೆಂಟರ್‍‌ ಫಾರ್‍‌ ಬಯಲಾಜಿಕಲ್‌ ಸೈನ್ಸಸ್‌(ಎನ್‌ಸಿಬಿಎಸ್‌)ನಲ್ಲಿ ಮೂರು ದಿನಗಳ ಸಮಾವೇಶ ನಡೆಸುವ ಮೂಲಕ ಈ ವೇದಿಕೆಗೆ ಚಾಲನೆ ನೀಡಲಾಗುವುದು. ಇದರಲ್ಲಿ ಭಾರತ ಮತ್ತು ಸ್ವಿಸ್‌ಗಳ ತಲಾ 25 ಪರಿಣತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ 49 ಕಂಪನಿಗಳು ಸಕ್ರಿಯ

ಕರ್ನಾಟಕದಲ್ಲಿ ಸ್ವಿಟ್ಜರ್ಲೆಂಡ್‌ನ 49 ಕಂಪನಿಗಳು ಸಕ್ರಿಯವಾಗಿದ್ದು, 17,800 ಉದ್ಯೋಗಾವಕಾಶ ಸೃಷ್ಟಿಯಾಗಿವೆ. ಇದರ ಪೈಕಿ ಸರಿಸುಮಾರು 40 ಕಂಪನಿಗಳು ರಾಜ್ಯದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿವೆ. ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಸಮಾವೇಶದಲ್ಲಿ ಆಂಟಿಮೈಕ್ರೋಬಯಲ್‌ ರೆಸಿಸ್ಟೆನ್ಸ್‌ (AMR) ಕುರಿತು ಹೆಚ್ಚಿನ ಗಮನ ಹರಿಸುವುದು ಮುಖ್ಯ ಉದ್ದೇಶವಾಗಿದೆ. ಇದು ಅಂತಿಮವಾಗಿ ಶಿಕ್ಷಣ ಕ್ಷೇತ್ರ ಮತ್ತು ಉದ್ಯಮದ ನಡುವಿನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ಸಚಿವರಿಗೆ ಮಾಹಿತಿ ನೀಡಿದ್ದಾರೆ.

Switzerland Companies Interested Work With Karnataka In Science, Research And Innovation

ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಹಲವು ಸ್ವಿಸ್‌ ಉದ್ದಿಮೆಗಳಿವೆ. ಒಟ್ಟಾರೆಯಾಗಿ ತಮ್ಮ ದೇಶದ ಕಂಪನಿಗಳು ಭಾರತದಲ್ಲಿ ಹೂಡುತ್ತಿರುವ ಬಂಡವಾಳ ಪ್ರಮಾಣವು 2015ರಿಂದ 2022ರ ನಡುವೆ ಶೇಕಡ 53ರಷ್ಟು ಏರಿಕೆ ಕಂಡಿದೆ. ಹಾಗೆಯೇ ಭಾರತದ ಕಂಪನಿಗಳು ಸ್ವಿಸ್‌ನಲ್ಲಿ ಹೂಡುತ್ತಿರುವ ಬಂಡವಾಳದಲ್ಲೂ ಕಳೆದ ಏಳು ವರ್ಷಗಳಲ್ಲಿ ಶೇಕಡ 9ರಷ್ಟು ಬೆಳವಣಿಗೆ ಕಂಡು ಬಂದಿದೆ ಎಂದು ಅವರು ವಿವರಿಸಿದರು.

ಸಚಿವರು ಹೇಳಿದ್ದೇನು?

ಮಾಹಿತಿ ಪಡೆದು ಬಳಿಕ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಭಾರತ ಒಂದು ಬೃಹತ್‌ ರಾಷ್ಟ್ರ, ಇಲ್ಲಿ ರಚನಾತ್ಮಕ ಪರಿವರ್ತನೆಗಳು ಕಾಣಿಸುತ್ತಿವೆ. ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಮಂದಿರದಂತಹ ಹತ್ತಾರು ಅತ್ಯುತ್ತಮ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿವೆ. ಸ್ವಿಸ್‌ ಕಂಪನಿಗಳು ಇವುಗಳ ಜತೆಗೂಡಿ ಅಧ್ಯಯನ ಮತ್ತು ಸಹಭಾಗಿತ್ವ ನಡೆಸಬೇಕು. ಇದಕ್ಕೆ ಸರ್ಕಾರ ಮುಕ್ತ ಅವಕಾಶ ನೀಡಲಿದೆ ಎಂದರು.

ಡಿಕಾರ್ಬನೈಸೇಷನ್‌, ಪರಿಸರಸ್ನೇಹಿ ಇಂಧನ ಇವೆಲ್ಲವೂ ಇಲ್ಲಿ ನಡೆಯಬೇಕಿದೆ. ಇದಕ್ಕಾಗಿ ಎಲ್ಲೆಡೆ ಹಸಿರು ಕವಚವನ್ನು ಸೃಷ್ಟಿಸಬೇಕು. ಇಂತಹ ಆಸಕ್ತಿ ಸಾರ್ವಜನಿಕರಲ್ಲೂ ಹುಟ್ಟಬೇಕು. ಮಂಗಳೂರಿನಲ್ಲಿ ಹಸಿರು ಇಂಧನ ಉತ್ಪಾದಿಸಲು ಸರಕಾರ ಮುಂದಡಿ ಇಟ್ಟಿದ್ದು, ಅಪಾರ ಪ್ರಮಾಣದ ಹೂಡಿಕೆ ಹರಿದು ಬರುತ್ತಿದೆ ಎಂದು ತಿಳಿಸಿದರು.

ಇನ್ನೂ ನನ್ನ ಸ್ವಂತ ಜಿಲ್ಲೆಯಾದ ವಿಜಯಪುರದಲ್ಲಿ ತಾವು ಸ್ವಯಂ ಆಸಕ್ತಿಯಿಂದ 1.5 ಕೋಟಿ ಸಸಿ ನೆಟ್ಟಿರುವ ಕೋಟಿ ವೃಕ್ಷ‌ ಅಭಿಯಾನದ ವಿಡಿಯೋ ತುಣಕನ್ನು ಸ್ವಿಸ್‌ ಕಾನ್ಸುಲ್‌ ಜನರಲ್‌ಗೆ ಪ್ರದರ್ಶಿಸಿದರು.

ಈ ವೇಳೆ ರಾಜ್ಯ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್‌ ಕೃಷ್ಣ, ಉದ್ಯೋಗ ಮಿತ್ರದ ಸಿಇಒ ದೊಡ್ಡ‌ ಬಸವರಾಜ ಮತ್ತಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+