ಬೆಂಗಳೂರು-ಬೆಳಗಾವಿ ನಡುವೆ ಜೂ.26ರಿಂದಲೇ ರಾತ್ರಿ ರೈಲು ಸಂಚಾರ
ಬೆಂಗಳೂರು, ಜೂನ್ 26 : ಬೆಂಗಳೂರು ಮತ್ತು ಬೆಳಗಾವಿ ನಡುವೆ ಜೂನ್ 26ರಿಂದ ರಾತ್ರಿ ರೈಲು ಸಂಚಾರ ನಡೆಸಲಿದೆ. ಬೆಂಗಳೂರು ನಗರದಿಂದ ರಾತ್ರಿ 9 ಗಂಟೆಗೆ ಬೆಳಗಾವಿಗೆ ರೈಲು ಹೊರಡಲಿದೆ ಎಂದು ನೈಋತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ.
Recommended Video
ಶುಕ್ರವಾರ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ರಾತ್ರಿ ರೈಲು ಸಂಚಾರದ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರು ನಗರದಿಂದ ರಾತ್ರಿ 9 ಗಂಟೆಗೆ ಹೊರಡಲಿರುವ ರೈಲು ಬೆಳಗ್ಗೆ 7.25ಕ್ಕೆ ಬೆಳಗಾವಿಗೆ ತಲುಪಲಿದೆ. ಇಂದಿನಿಂದಲೇ 06549 ರೈಲು ಈ ರೈಲು ಸಂಚಾರ ನಡೆಸಲಿದೆ.
ಬೆಳಗಾವಿಯಿಂದ ರಾತ್ರಿ 9ಕ್ಕೆ ಹೊರಡುವ 06550 ಸಂಖ್ಯೆಯ ರೈಲು ಬೆಳಗ್ಗೆ 7.25ಕ್ಕೆ ಬೆಂಗಳೂರಿಗೆ ಬಂದು ತಲುಪಲಿದೆ. ಪ್ರತಿದಿನ ಈ ರೈಲು ಸಂಚಾರ ನಡೆಸಲಿದೆ ಎಂದು ಇಲಾಖೆ ಹೇಳಿದೆ.

ಹಗಲು ಹೊತ್ತಿನಲ್ಲಿ ಬೆಂಗಳೂರು-ಬೆಳಗಾವಿ ನಡುವೆ ವಾರಕ್ಕೆ ಮೂರು ಬಾರಿ ಸಂಚಾರ ನಡೆಸುತ್ತಿದ್ದ ರೈಲನ್ನು ಸೋಮವಾರದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡುವ ರೈಲು ಯಶವಂತರಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಬೆಳಗಾವಿಗೆ ತಲುಪಲಿದೆ.












Click it and Unblock the Notifications