ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಜೆಸ್ಟಿಕ್ To ವಿಮಾನ ನಿಲ್ದಾಣಕ್ಕೆ 3 ಜೋಡಿ ಹೆಚ್ಚುವರಿ ರೈಲು

|
Google Oneindia Kannada News

ಬೆಂಗಳೂರು, ನವೆಂಬರ್.30: ನೈಋತ್ಯ ರೈಲ್ವೆ ವಿಭಾಗವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರಕ್ಕೆ ಮೂರು ಜೋಡಿ ರೈಲುಗಳ ಸಂಚಾರವನ್ನು ಆರಂಭಿಸಿದೆ. ಸಿಲಿಕಾನ್ ಸಿಟಿಯಿಂದ 5 ಕಿಲೋ ಮೀಟರ್ ದೂರದಲ್ಲಿರುವ ವಿಮಾನ ನಿಲ್ದಾಣಕ್ಕೆ ಇತ್ತೀಚಿಗಷ್ಟೇ ರೈಲ್ವೆ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ನೂತನ ರೈಲ್ವೆ ನಿಲ್ದಾಣವು ಬಳಕೆಗೆ ಅಣಿಯಾಗಿದೆ.

ಕೊರೊನಾವೈರಸ್ ಸೋಂಕಿನಿಂದ ಲಾಕ್ ಡೌನ್ ಘೋಷಣೆಗೂ ಮೊದಲು ವಿಮಾನ ನಿಲ್ದಾಣ ಹಾಗೂ ನಗರದ ನಡುವೆ ನಾಲ್ಕು ಜೋಡಿ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಇದರ ಜೊತೆಗೆ ಹೆಚ್ಚುವರಿಯಾಗಿ ಮೂರು ಜೋಡಿ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಇನ್ಮುಂದೆ ನಗರದಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಒಂದೇ ಗಂಟೆ ಸಾಕುಇನ್ಮುಂದೆ ನಗರದಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಒಂದೇ ಗಂಟೆ ಸಾಕು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲದ ದೃಷ್ಟಿಯಿಂದ ಈ ರೈಲುಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆಯು ತಿಳಿಸಿದೆ.

SWR To Run Three More Pairs Of Trains To Bengaluru Airport From City

ವಿಮಾನ ನಿಲ್ದಾಣಕ್ಕೆ ವಿಶೇಷ ರೈಲುಗಳ ವ್ಯವಸ್ಥೆ:

ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಯಲಹಂಕ ಹಾಗೂ ಯಶವಂತಪುರದಿಂದ ಒಂದೊಂದು ರೈಲನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಡಲಾಗುತ್ತದೆ. ಬೆಳಗ್ಗೆ 4.45ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ವಿಮಾನ ನಿಲ್ದಾಣಕ್ಕೆ ತೆರಳಲಿದೆ. ಯಲಹಂಕದಿಂದ ಬೆಳಗ್ಗೆ 7 ಗಂಟೆ ಹಾಗೂ ಯಶವಂತಪುರದಿಂದ 7 ಗಂಟೆಗೆ ಒಂದು ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ವಿಮಾನ ನಿಲ್ದಾಣ ಸಿಬ್ಬಂದಿಗೆ ಅನುಕೂಲ:

ಭಾರತೀಯ ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂಡಳಿಯಿಂದ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ಅನುಮೋದನೆ ಪಡೆದುಕೊಳ್ಳಲಾಗಿದೆ. ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣಾಧಿಕಾರಿಗಳ ಜೊತೆಗೆ ಚರ್ಚಿಸಲಾಗಿದ್ದು, ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ರೈಲುಗಳ ಸಮಯವನ್ನು ನಿಗದಿಗೊಳಿಸಲಾಗಿದೆ ಎಂದು ನೈಋತ್ಯ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ಇ. ವಿಜಯ್ ಹೇಳಿದ್ದಾರೆ.

ಮೆಜೆಸ್ಟಿಕ್ ನಿಂದ ಏರ್ ಪೋರ್ಟ್ ಗೆ 30 ರೂಪಾಯಿ:

ಬೆಂಗಳೂರಿನ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಕೇವಲ 30 ರೂಪಾಯಿ ಸಾಕಾಗುತ್ತದೆ. ಇನ್ನು, ಯಲಹಂಕದಿಂದ 10 ರೂಪಾಯಿ ಟಿಕೆಟ್ ನಲ್ಲೇ ಏರ್ ಪೋರ್ಟ್ ತಲುಪುವುದಕ್ಕೆ ಸಾಧ್ಯವಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

English summary
Sourth Western Railwals To Run Three More Pairs Of Trains To Bengaluru Airport From City.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X