ಟಿ-20 ಕ್ರಿಕೆಟ್: ವಿಶೇಷ ಬಸ್‌ಗಳು ವ್ಯವಸ್ಥೆ, ಪಾರ್ಕಿಂಗ್‌ಗೆ ನಿರ್ಬಂಧ
ಬೆಂಗಳೂರು, ಡಿಸೆಂಬರ್ 3: ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ಟಿ 20 ಪಂದ್ಯವನ್ನು ವೀಕ್ಷಿಸಲು ಬರುವ ಕ್ರಿಕೆಟ್ ಅಭಿಮಾನಿಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಎಂಟಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊಸೂರ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಇದಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಜಯದೇವ ಆಸ್ಪತ್ರೆ ಮೂಲಕ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಂಸಿಟಿಸಿ ನಾಯಂಡನಹಳ್ಳಿ ಮಾರ್ಗವಾಗಿ ಕೆಂಗೇರಿ ಕೆಎಚ್‌ಬಿ ಕಾಲೋನಿ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಮಾರ್ಗವಾಗಿ ಜನಪ್ರಿಯ ಟೌನ್‌ಶಿಪ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಯಶವಂತಪುರ ಮಾರ್ಗವಾಗಿ ನೆಲಮಂಗಲಕ್ಕೆ ಬಸ್ ವ್ಯವಸ್ಥೆ ಮಾಡಲಾಗಿರುತ್ತದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತ, ನಾಗವಾರ, ಟ್ಯಾನರಿ ರಸ್ತೆ ಮೂಲಕ ಆರ್‌ಕೆ ಹೆಗಡೆ ನಗರ ಯಲಹಂಕ, ಹೆಣ್ಣೂರು ರಸ್ತೆ ಮಾರ್ಗವಾಗಿ ಬಾಗಲೂರು, ಟಿನ್ ಫ್ಯಾಕ್ಟರಿ ಮಾರ್ಗವಾಗಿ ಹೊಸಕೋಟೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪಾರ್ಕಿಂಗ್ ನಿಷೇಧ:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ಟಿ20 ಕ್ರಿಕೆಟ್ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಕ್ರೀಡಾಂಗಣದ ಸುತ್ತ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ನಿಷೇಧಿಸಿದ್ದಾರೆ.
ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಎಂಜಿ ರಸ್ತೆಯ ಎರಡೂ ಬದಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ರಸ್ತೆವರೆಗೆ, ಸಿಟಿಒ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ರಾಜಭವನ ರಸ್ತೆ, ಸಿಟಿಒ ವೃತ್ತದಿಂದ ಡಿಕನ್ಸನ್ ರಸ್ತೆ ಜಂಕ್ಷನ್‌ವರೆಗೆ ಕಬ್ಬನ್ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ಸೆಂಟ್ರಲ್ ಸ್ಟ್ರೀಟ್, ಕ್ವೀನ್ಸ್ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ಕಸ್ತೂರಬಾ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್ ವೃತ್ತದವರೆಗೆ ಮಲ್ಲಯ್ಯ ರಸ್ತೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಮತ್ತು ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಶಿವಾಜಿನಗರದಲ್ಲಿ ಪೇ ಮತ್ತು ಪಾರ್ಕ್ ತಾಣಗಳು ಲಭ್ಯವಿರುತ್ತವೆ.
ಮೆಟ್ರೋ ವಿಸ್ತರಣೆ:
ಭಾನುವಾರ (ಡಿಸೆಂಬರ್ 3) ನಗರದ ಚಿನ್ನಸ್ಚಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯ ನಡುವೆ ಅಂತಿಮ ಟಿ-20 ಕದನ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ವೀಕ್ಷಣೆ ಮಾಡಲು ಕ್ರಿಕೆಟ್ ಅಭಿಮಾನಿ ದಂಡೇ ಆಗಮಿಸುವ ನಿರೀಕ್ಷೆಯಿದೆ. ಆದ್ದರಿಂದ ಬೆಂಗಳೂರು ಮೆಟ್ರೋ ರೈಲು ನಿಗಮವು ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ.
ನೇರಳೆ ಮತ್ತು 8 ಹಸಿರು ಮಾರ್ಗದಲ್ಲಿರುವ ರೈಲುಗಳ ಸೇವೆಯನ್ನು ರಾತ್ರಿ 11:45ರ ವರೆಗೆ ವಿಸ್ತರನೆ ಮಾಡಲಾದೆ. ಡಿಸೆಂಬರ್ 3ರಂದು ಪೇಪರ್ ಟಿಕೆಟ್ಗಳನ್ನು ಹಂಚಲಾಗುತ್ತದೆ ಎಂದು ತಿಳಿಸಿದೆ. ಬರುವ ಮತ್ತು ಹೋಗುವ ಪ್ರಯಾಣಕ್ಕೆ 50 ರೂಪಾಯಿ ಟಿಕೆಟ್ ನಿಗದಿಪಡಿಸಿ ಬೆಂಗಳೂರು ಮೆಟ್ರೋ ರೈಲು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಪೇಪರ್ ಟಿಕೆಟ್ ಸಿಗಲಿದೆ. ಕಾರ್ಡ್ಗಳ ಜೊತೆಗೆ ಸ್ಮಾರ್ಟ್ ಕಾರ್ಡ್ ಹಾಗೂ ಎನ್ಸಿಎಂಸಿ ವ್ಯವಸ್ಥೆಯನ್ನು ಕೂಡ ಪ್ರಯಾಣಿಕರು ಉಪಯೋಗಿಸಬಹುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications