ಟಿ-20 ಕ್ರಿಕೆಟ್ ಪಂದ್ಯ, ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ
ಬೆಂಗಳೂರು, ಫೆಬ್ರವರಿ 27: ಟಿ-20 ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರವನ್ನು ಅರ್ಧ ಗಂಟೆ ವಿಸ್ತರಣೆ ಮಾಡಲಾಗುತ್ತಿದೆ.
ಬೈಯಪ್ಪನಹಳ್ಳಿ-ಮೈಸೂರು ರಸ್ತೆ, ಯಲಚೇನಹಳ್ಳಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 11.30ಕ್ಕೆ ರೈಲುಗಳು ಹೊರಡುತ್ತವೆ.
ಪಂದ್ಯದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಕೆಎಸ್‌ಸಿಎ ಸ್ಟೇಡಿಯಂ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಮಾರ್ಪಾಡು ಮಾಡಲಾಗಿದೆ.

ಮಧ್ಯಾಹ್ನ 2ರಿಂದ ರಾತ್ರಿ 11.30ರವರೆಗೆ ಕ್ವೀನ್ಸ್ ರಸ್ತೆಯ ಬಾಳೆಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ 2 ಬದಿ ಪಾರ್ಕಿಂಗ್ ನಿಷೇಧಿಸಲಾಗಿದೆ.
ಎಂಜಿ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸಿಟಿಒ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ, ಕಾಮರಾಜ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ, ಮ್ಯೂಸಿಯಂ ರಸ್ತೆ, ಆಶೀರ್ವಾದಂ ವೃತ್ತ, ಕಸ್ತೂರ ಬಾ ರಸ್ತೆ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆಯಿಂದ ಸಿದ್ದಲಿಂಗಯ್ಯ ವೃತ್ತದಿಂದ ಆರ್‌ಆರ್ ಎಂಆರ್ ವೃತ್ತದವರೆಗೆ ಪಾಕಿಂಗ್ ನಿಷೇಧಿಸಲಾಗಿದೆ.












Click it and Unblock the Notifications