ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಹೆಚ್ಚಾಗಲು ಕಾರಣ ತಬ್ಲಿಘಿಗಳು -ನಳೀನ್ ಕುಮಾರ್ ಕಟೀಲ್

|
Google Oneindia Kannada News

ಬೆಂಗಳೂರು, ಏಪ್ರಿಲ್ 25: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರದ ಗಡಿ ದಾಟುತ್ತಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಮಟ್ಟಕ್ಕೆ ಕೊರೊನಾ ವೈರಸ್‌ ಹರಡಲು ತಬ್ಲಿಫಿಗಳು ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಯಡಿಯೂರಪ್ಪ ಕೇಂದ್ರ ಸರಕಾರಕ್ಕೂ ಮೊದಲೇ ಲಾಕ್‌ಡೌನ್‌ ಘೋಷಿಸಿ ಕೊರೊನಾ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.'' ಎಂದಿದ್ದಾರೆ.

Tablighis Are Main Reason For Increase of Coronavirus Cases In India Says Nalin Kumar Kateel

''ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಲು ತಬ್ಲಿಘಿಘಿಗಳೇ ಕಾರಣ. ಹೀಗಾಗಿ ತಬ್ಲಿಘಿಘಿಗಳೇ ಪತ್ತೆ ಹಚ್ಚಿ ಅವರನ್ನೆಲ್ಲಾ ಕ್ವಾರಂಟೈನ್‌ ಮಾಡಿ ಸೋಂಕು ತಡೆಯಲು ರಾಜ್ಯ ಸರಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ.'' ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿಶೇಷ ವೇತನ ನೀಡುವಂತೆ ಬಿಜೆಪಿ ನಿಯೋಗವು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಸಲ್ಲಿಸಿದ್ದಾರಂತೆ.

''ಲಾಕ್‌ಡೌನ್‌ ಘೋಷಣೆಯಾದ ನಂತರ ಇದುವರೆಗೆ ರಾಜ್ಯದಲ್ಲಿ 95,02,504 ಆಹಾರ ಪೊಟ್ಟಣಗಳನ್ನು, ನಿತ್ಯ 1.25 ಲಕ್ಷ ರೇಷನ್‌ ಕಿಟ್‌ಗಳನ್ನು ಹಾಗೂ ನಿತ್ಯ ಲಕ್ಷಕ್ಕೂ ಹೆಚ್ಚು ಮಾಸ್ಕ್‌ಗಳನ್ನು ವಿತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಕಷ್ಟದಲ್ಲಿರುವವರ ನೆರವಿಗೆ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ. ಸಾಮಾಜಿಕ ನ್ಯಾಯ ಹಾಗೂ ಬದ್ಧತೆ ತೋರಿದ್ದಾರೆ.'' ಎಂದು ಈ ವೇಳೆ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

English summary
Tablighis are main reason for increase of coronavirus cases in india says BJP state president Nalin Kumar Kateel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X