ಬೆಂಗಳೂರಿನಲ್ಲಿ ತಮಿಳುನಾಡಿನ ಡಿಎಂಕೆ ನಾಯಕನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು
ಬೆಂಗಳೂರು ಸೆಪ್ಟೆಂಬರ್ 5:ತಮಿಳುನಾಡಿನ ಡಿಎಂಕೆ ನಾಯಕ ಎಂಕೆ ಅಳಗಿರಿಯ ಆಪ್ತ ಮಧುರೈನ ವಿಕೆ ಗುರುಸ್ವಾಮಿ ಮೂರ್ತಿ ಮೇಲೆ ಐದು ಜನರ ಗುಂಪು ದಾಳಿ ಮಾಡಿದೆ.
ಗುರುಸ್ವಾಮಿ ಮೂರ್ತಿ ಕಾನೂನು ಸಮಸ್ಯೆ ಇರುವ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದರು. ಭಾನುವಾರ ವಿಮಾನದ ಮೂಲಕ ಬಂದು ಹೋಟೆಲ್‌ನಲ್ಲಿ ರೂ ಮಾಡಿಕೊಂಡಿದ್ದರು. ಸೋಮವಾರ ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು ಹೋಟೆಲ್‌ಗೆ ಹೋಗಿದ್ದರು. ಬ್ರೋಕರ್ ಜೊತೆ ಮಾತುಕತೆ ನಡೆಸುತ್ತಿದ್ದಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ ಐದು ಜನರ ಗುಂಪು ಅವರ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿದೆ.

ಗುರುಸ್ವಾಮಿ ಮೂರ್ತಿ ತಮ್ಮ ಇಪ್ಪತ್ತನೇ ವಯಸ್ಸಿನಲ್ಲೇ ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿದ್ದರು. ಜೀವ ಬೆದರಿಕೆ ಇದ್ದ ಹಿನ್ನೆಲೆ ಆತನ ಎಲ್ಲಯೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಮಧಯರೈನಲ್ಲಿ ಸಾಕಷ್ಟು ದ್ವೇಷ ಕಟ್ಟಿಕೊಂಡಿದ್ದ ಇವರ ಮೇಲೆ ಸದ್ಯ ಬೆಂಗಳೂರಿನಲ್ಲಿ ಮಾರಣಾಂತಿ ದಾಳಿ ಮಾಡಲಾಗಿದೆ. ಇವರ ಹತ್ಯೆಗೆ ಸ್ಕೇಚ್ ಹಾಕಿದ ಐದಯ ಜನರ ತಂಡ ಕಳೆದ ರಾತ್ರಿ ಬೆಂಗಳೂರಿನ ಬಾಣಸವಾಡಿಯ ಸುಖ್‌ಸಾಗರ್ ಹೋಟೆಲ್‌ನಲ್ಲಿದ್ದಾಗ ದಾಳಿ ಮಾಡಿದ್ದಾರೆ.
ಮತ್ತೊಂದು ವಿಚಾರ ಅಂದರೆ ಗುರುಸ್ವಾಮಿ ಜೊತೆಗೆ ಇದ್ದವರೇ ಆತನ ಬಗ್ಗೆ ಮಾಹಿತಿ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದೇ ಶಂಕೆಯಿಂದ ಪೊಲೀಸರು ತನಿಖೆ ಕೂಡ ನಡೆಸಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಗುರುಸ್ವಾಮಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications