ವಿದ್ಯಾರ್ಥಿನಿ ಮೇಲೆ ಹಲ್ಲೆ : ಯಶವಂತಪುರ ಎಸಿಪಿ ಅಮಾನತು
ಬೆಂಗಳೂರು, ಫೆಬ್ರವರಿ 7 : ತಾಂಜಾನಿಯ ಮೂಲದ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಯಶವಂತಪುರ ವಿಭಾಗದ ಎಸಿಪಿಯವರನ್ನು ಅಮಾನತು ಮಾಡಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದಿ, 9 ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು, ಯಶವಂತಪುರ ಉಪವಿಭಾಗದ ಎಸಿಪಿ ಅಶೋಕ ನಾರಾಯಣ ಪಿಸೆ ಅವರನ್ನು ಅಮಾತನುಗೊಳಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಶೋಕ ನಾರಾಯಣ ಅವರನ್ನು ಅಮಾನತು ಮಾಡಲಾಗಿದೆ. ['ವಿದ್ಯಾರ್ಥಿನಿ ಮೇಲೆ ಜನಾಂಗೀಯ ದ್ವೇಷದಿಂದ ಹಲ್ಲೆ ನಡೆದಿಲ್ಲ']

ಜನವರಿ 31ರಂದು ಹೆಸರಘಟ್ಟ ರಸ್ತೆಯಲ್ಲಿ ಅಪಘಾತ ಸಂಭವಿಸಿ, ಗಲಾಟೆ ನಡೆದರೂ ಎಸಿಪಿ ಅವರು ಸ್ಥಳಕ್ಕೆ ತೆರಳಿರಲಿಲ್ಲ. ಪೊಲೀಸರಿಂದ ಆದ ಲೋಪಗಳ ಬಗ್ಗೆ ಇಲಾಖಾ ತನಿಖೆ ನಡೆಸಿ ವರದಿ ಕೊಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರು ಹೆಚ್ಚುವರಿ ಪೊಲೀಸ್ ಕಮಿಷನರ್ ಚರಣ್ ರೆಡ್ಡಿ ಅವರಿಗೆ ಸೂಚಿಸಿದ್ದರು. ವರದಿ ಆಧರಿಸಿ ಎಸಿಪಿ ಅಮಾನತುಗೊಳಿಸಲಾಗಿದೆ. [ರಾಷ್ಟ್ರೀಯ ಮಾಧ್ಯಮಗಳ ವಿರುದ್ಧ ತಿರುಗಿ ಬಿದ್ದ ಬೆಂಗಳೂರಿಗರು]
ಜನರ ಗಲಾಟೆ ಬಗ್ಗೆ ಮಾಹಿತಿ ಪಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಜನವರಿ 31ರಂದು ಎಸಿಪಿಗೆ ಕರೆ ಮಾಡಿದ್ದರು. ಆಗ ಅವರು ಅಗತ್ಯ ಕ್ರಮಗಳನ್ನು ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಸುಳ್ಳು ಹೇಳಿದ್ದರು. [ವಿದ್ಯಾರ್ಥಿನಿ ಮೇಲೆ ಹಲ್ಲೆ : 9 ಮಂದಿ ಬಂಧನ, ಮೂವರ ಅಮಾನತು]
ಅಪಘಾತದ ಬಗ್ಗೆ ತಕ್ಷಣವೇ ಪ್ರಾಥಮಿಕ ಮಾಹಿತಿ ಕೊಡಿ ಎಂದು ಆಯುಕ್ತರು ಕೇಳಿದಾಗ ಎಸಿಪಿ ಅಸಮರ್ಪಕ ಉತ್ತರ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಕೋಪಗೊಂಡಿದ್ದ ಆಯುಕ್ತರು, ನೀವಿನ್ನೂ ಘಟನಾ ಸ್ಥಳಕ್ಕೆ ಹೋಗಿಯೇ ಇಲ್ಲ. ಮೊದಲು ಅಲ್ಲಿಗೆ ಹೋಗಿ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದ್ದರು. ಆದ್ದರಿಂದ, ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಅಮಾನತುಗೊಳಿಸಲಾಗಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications