• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಳೆ ಅವಾಂತರ: ಬೆಂಗಳೂರಿನ 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್

|
Google Oneindia Kannada News

ಬೆಂಗಳೂರು, ಮೇ 20: ಬೆಂಗಳೂರಿನ 8 ವಲಯಕ್ಕೂ ತಲಾ ಒಬ್ಬ ಸಚಿವರ ನೇತೃತ್ವದಲ್ಲಿ ಒಂದು ಕಾರ್ಯಪಡೆ ರಚನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾರ್ಯಪಡೆಯಲ್ಲಿ ಒಬ್ಬ ಸಚಿವರನ್ನು ಮುಖ್ಯಸ್ಥರನ್ನಾಗಿ ಮಾಡಿ, ಆ ಭಾಗದ ಶಾಸಕರು, ಸಂಸದರು. ಎಂಎಲ್ ಸಿ ಗಳು , ಹಿರಿಯ ಅಧಿಕಾರಿಗಳು ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ. ಈ ಕಾರ್ಯಪಡೆಗಳ ನೇತೃತ್ವದಲ್ಲಿ ಆಯಾ ವಲಯದ ಅಭಿವೃದ್ಧಿ ಕಾರ್ಯಗಳು, ಪ್ರವಾಹದಂತಹ ಸಂದರ್ಭಗಳಲ್ಲಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿ ಇಂದೇ ಆದೇಶ ಹೊರಡಿಸಲಾಗುವುದು ಎಂದರು.

ಹೆಬ್ಬಾಳ ವ್ಯಾಲಿಗೆ ಹೆಬ್ಬಾಳ ಮತ್ತು ಯಲಹಂಕದಿಂದ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರುತ್ತದೆ. ನಿನ್ನೆ ವೀಕ್ಷಣೆ ಮಾಡಿದ ಸ್ಥಳಗಳಲ್ಲಿ ಹೆಚ್ಚುವರಿ ಎಸ್ ಟಿ ಪಿ ಘಟಕಗಳನ್ನು ಹಾಕಲು ತೀರ್ಮಾನಿಸಲಾಗಿದೆ. ರೈಲ್ವೆ ಸೇತುವೆಗಳನ್ನು ತೆರವುಗೊಳಿಸಿ ಮಳೆನೀರು ಸರಾಗವಾಗಿ ಹರಿಯುವಂತೆ ಮಾಡುವ ಕಾಮಗಾರಿಗೆ 42 ಕೋಟಿ ಅನುದಾನ ನೀಡಿದೆ, ವಿನ್ಯಾಸವೂ ಸಿದ್ಧಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗುವುದು.

ಫೆಬ್ರವರಿ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈ ಭಾಗದಲ್ಲಿ ಕಾಲುವೆಯ ಮುಂದಿನಭಾಗದ ಅಗಲೀಕರಣಕ್ಕೂ ಆದೇಶ ನೀಡಲಾಗಿದೆ. ಐಟಿಐ ಪ್ರದೇಶದಲ್ಲಿ ಅನುಮತಿ ಪಡೆದುಸುಮಾರು 900 ಮೀ. ಹೆಚ್ಚುವರಿ ಚರಂಡಿ ವ್ಯವಸ್ಥೆಯನ್ನು ಮಾಡಲಾಗುವುದು. ಇದರಿಂದ ರಾಮಮೂರ್ತಿನಗರದ 3-4 ಬಡಾವಣೆಗಳಲ್ಲಿ ಸುಲಭವಾಗಿ ನೀರು ಹರಿದುಹೋಗಲು ವ್ಯವಸ್ಥೆಯಾಗುತ್ತದೆ. ಈ ಪ್ರದೇಶದಲ್ಲಿ ಚರಂಡಿಗಳ ಮೇಲೆ ಕಟ್ಟಡಗಳನ್ನು ಕಟ್ಟಿದ್ದು, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Bengauru: Task Force would be constituted for 8 Zones headed by a minister

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ:

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

ಬೆಂಗಳೂರು ನಗರ, ಯಲಹಂಕ ತಾಲ್ಲೂಕು,ಯಲಹಂಕ ಹೋಬಳಿ, ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿನ ಜಲಾವೃತ ಪ್ರದೇಶವನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಕೋರಿದ್ದ ಮೇರೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

   Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada
   English summary
   Task Force would be constituted for each of 8 Zones in Bengaluru. Each Task Force would be headed by a minister and it would consist of local MLAs, MPs, MLCs and senior officials as its members.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X