ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಟ್ಯಾಕ್ಸಿ ವಿತರಣೆ
ಬೆಂಗಳೂರು, ಡಿಸೆಂಬರ್ 03: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಡಿಸೆಂಬರ್ 05 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಮುಂದೆ ಅರ್ಹ ಫಲಾನುಭವಿಗಳಿಗೆ ಟ್ಯಾಕ್ಸಿ ವಿತರಣೆ ಸಮಾರಂಭ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ಯಾಕ್ಸಿ/ಗೂಡ್ಸ್ ವಾಹನಗಳ ವಿತರಣಾ ಸಮಾರಂಭದ ಉದ್ಫಾಟನೆಯನ್ನು ನೆರವೇರಿಸಲಿದ್ದಾರೆ. ಕೇಂದ್ರದ ಸಾಂಖ್ಯಿಕ ಮತ್ತು ರಸಗೊಬ್ಬರ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ. ವಿ. ಸದಾನಂದ ಗೌಡ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಉಪಸ್ಥಿತರಿರುವರು.
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು ರಾಜ್ಯದ ಸರ್ಕಾರ ಸ್ವಾಮ್ಯದ ಉದ್ಯಮವಾಗಿ ಸ್ಥಾಪಿಸಲ್ಪಟ್ಟಿದ್ದು, ರಾಜ್ಯದ ಮತೀಯ ಅಲ್ಪಸಂಖ್ಯಾತರಾದ ಮುಸಲಾನ್ಮರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್‍ರು ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಮತ್ತು ಆರ್ಥಿಕವಾಗಿ ಹಿಂದುಳಿದ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳಡಿಯಲ್ಲಿ ಸಾಲ/ಸಹಾಯಧನ ಸೌಲಭ್ಯವನ್ನು ಒದಗಿಸುತ್ತಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ರೋಷನ್ ಬೇಗ್ ಅವರು ವಹಿಸುವರು. ಈ ಸಮಾರಂಭದಲ್ಲಿ, ಸಚಿವ ಸಂಪುಟದ ಸದಸ್ಯರು, ಶಾಸಕರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.












Click it and Unblock the Notifications